Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವುಗಳ ಎಲ್ಲಾ ತಾಮ್ರವನ್ನೂ ಯೆಹೋವನ ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅದು ಮಾತ್ರವಲ್ಲ, ಸರ್ವೇಶ್ವರನ ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು, ಸಾಂಬ್ರಾಣಿಕಳಸ ಮುಂತಾದ ಕಂಚಿನ ಸಾಮಾನುಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೋವನ ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ಬಾಬೆಲಿಗೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಬಾಬಿಲೋನಿನ ಸೈನಿಕರು ಪವಿತ್ರಾಲಯದಿಂದ ಪಾತ್ರೆಗಳು, ಸಲಿಕೆಗಳು, ಕತ್ತರಿಗಳು, ದೊಡ್ಡ ಬೋಗುಣಿಗಳು, ತಟ್ಟೆಗಳು ಮತ್ತು ಪವಿತ್ರಾಲಯದ ಸೇವೆಗಾಗಿ ಉಪಯೋಗಿಸಲಾಗುವ ಕಂಚಿನ ಸಾಮಾನುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದಲ್ಲದೆ ಅವರು ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಸಾಂಬ್ರಾಣಿಕಳಸ ಮತ್ತು ಸಮಸ್ತ ಕಂಚಿನ ಸಲಕರಣೆಗಳನ್ನೂ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:18
27 ತಿಳಿವುಗಳ ಹೋಲಿಕೆ  

ಹಂಡೆ, ಸಲಿಕೆ ಬೋಗುಣಿಗಳು ಇವೇ. ಹೀರಾಮನು ಅರಸನಾದ ಸೊಲೊಮೋನನ ಅಪ್ಪಣೆಯಂತೆ ಯೆಹೋವನ ಆಲಯಕ್ಕೋಸ್ಕರ ಈ ಎಲ್ಲಾ ಸಾಮಾನುಗಳನ್ನು ರುಜುವಾತು ಪಡಿಸಿ ತಾಮ್ರದಿಂದ ಮಾಡಿಸಿದನು.


ಅದಕ್ಕೆ ಸಂಬಂಧಪಟ್ಟ ಅಗ್ಗಿಷ್ಟಿಕೆಗಳು, ಮುಳ್ಳುಗಳು, ಸಲಿಕೆಗಳು, ಬೋಗುಣಿಗಳು ಮುಂತಾದ ಉಪಕರಣಗಳನ್ನೆಲ್ಲಾ ಮೇಲೆ ಇಟ್ಟು ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು.


ಅದರಲ್ಲಿರುವ ಬೂದಿಯನ್ನು ತೆಗೆಯುವುದಕ್ಕಾಗಿ ತಟ್ಟೆಗಳನ್ನೂ, ಸಲಿಕೆಗಳನ್ನೂ, ಬೋಗುಣಿಗಳನ್ನೂ, ಮುಳ್ಳುಚಮಚಗಳನ್ನೂ, ಹಾಗೂ ಅಗ್ಗಿಷ್ಟಿಕೆಗಳನ್ನೂ ಮಾಡಿಸಬೇಕು. ಆ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು.


ಇದಲ್ಲದೆ ಹೀರಾಮನು ಬಟ್ಟಲುಗಳನ್ನೂ, ಸಲಿಕೆಗಳನ್ನೂ, ಬೋಗುಣಿಗಳನ್ನೂ ಮಾಡಿದನು. ಅವನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕೋಸ್ಕರ ಹೀರಾಮನು ಮಾಡಿಸಿದ ಒಟ್ಟು ಸಾಮಾನುಗಳ ಪಟ್ಟಿ.


ಚಿನ್ನದ ಬಟ್ಟಲುಗಳು ಮೂವತ್ತು; ಎರಡನೆಯ ದರ್ಜೆಯ ಬೆಳ್ಳಿಯ ಬಟ್ಟಲುಗಳು ನಾನೂರಹತ್ತು ಮತ್ತು ಇತರ ಪಾತ್ರೆಗಳು ಒಂದು ಸಾವಿರ.


ಹಾಗೆಯೇ ಕತ್ತರಿಗಳನ್ನೂ, ಬೋಗುಣಿಗಳನ್ನೂ ಧೂಪಾರತಿಗಳನ್ನೂ, ಅಗ್ಗಿಷ್ಟಿಕೆಗಳನ್ನು, ದೇವಾಲಯದ ಮಹಾಪರಿಶುದ್ಧ ಸ್ಥಳಕ್ಕಾಗಿರುವ ಬಂಗಾರದ ಕದಗಳು, ಪರಿಶುದ್ಧ ಸ್ಥಳದ ಬಂಗಾರದ ಕದಗಳು ಇವುಗಳೇ.


ಹಂಡೆ, ಸಲಿಕೆ, ಮುಳ್ಳುಸೌಟುಗಳು ಹೀಗೆ ಹೂರಾಮಾಬೀವನು ಅರಸನಾದ ಸೊಲೊಮೋನನ ಅಪ್ಪಣೆಯ ಮೇರೆಗೆ ಯೆಹೋವನ ಆಲಯಕ್ಕಾಗಿ ಅದರ ಎಲ್ಲಾ ಸಾಮಾನುಗಳನ್ನು ಒಪ್ಪ ಹಾಕಿದ ತಾಮ್ರದಿಂದ ಮಾಡಿ ಮುಗಿಸಿದನು.


ಇದಲ್ಲದೆ ಹೂರಾಮನು ಹಂಡೆಗಳನ್ನೂ, ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾಮನು ದೇವಾಲಯಕ್ಕೋಸ್ಕರ ಅರಸನಾದ ಸೊಲೊಮೋನನ ಅಪ್ಪಣೆಯಂತೆ ದೇವಾಲಯ ಕಾರ್ಯಕ್ಕಾಗಿ ಮಾಡಿ ಮುಗಿಸಿದನು.


ಹತ್ತು ಮೇಜುಗಳನ್ನು ಮಾಡಿಸಿ, ದೇವಾಲಯದೊಳಗೆ ಬಲಗಡೆಯಲ್ಲಿ ಐದನ್ನೂ, ಎಡಗಡೆಯಲ್ಲಿ ಐದನ್ನೂ ಇರಿಸಿ ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.


ಚೊಕ್ಕ ಬಂಗಾರದ ಮುಳ್ಳು ಬೋಗುಣಿ, ಹೂಜಿಗಳ ಮತ್ತು ಬೆಳ್ಳಿ ಬಂಗಾರದ ಆಯಾ ಪಾತ್ರೆಗಳ ತೂಕ,


ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು ಅಗ್ಗಿಷ್ಟಿಕೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದ ಬಾಗಿಲುಗಳಿಗೂ


ಅವನು ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.


ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.


ಅವನು ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.


ಅವನು ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿ ಸಮರ್ಪಿಸಿದನು.


ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.


ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.


ಬಳಿಕ ಅವರು ಯೆಹೋವನ ಸಮ್ಮುಖದಲ್ಲಿರುವ ಮೇಜಿನ ಮೇಲೆ ನೀಲಿ ಬಟ್ಟೆಯನ್ನು ಹಾಸಿ ಅದರ ಮೇಲೆ ಮೇಜಿಗೆ ಸೇರಿದ ಪಾತ್ರೆಗಳನ್ನೂ, ಧೂಪಾರತಿಗಳನ್ನೂ, ಹೂಜಿಗಳನ್ನೂ, ಪಾನದ್ರವ್ಯಾರ್ಪಣೆಯ ಬಟ್ಟಲುಗಳನ್ನೂ ಇಡಬೇಕು. ಯಾವಾಗಲೂ ಇರಬೇಕಾದ ರೊಟ್ಟಿಗಳು ಅದರ ಮೇಲೆ ಇರಬೇಕು.


ಯಜ್ಞವೇದಿಯ ಉಪಕರಣಗಳನ್ನೆಲ್ಲಾ ಅಂದರೆ ಅದರ ಬಟ್ಟಲುಗಳು, ಸಲಿಕೆಗಳು, ತೊಟ್ಟಿಗಳು, ಮುಳ್ಳುಚಮಚಗಳು, ಅಗ್ಗಿಷ್ಟಿಕೆಗಳು ಇವುಗಳನ್ನೆಲ್ಲಾ ತಾಮ್ರದಿಂದ ಮಾಡಿದನು.


ಅದರ ಏಳು ಹಣತೆಗಳನ್ನೂ ಅದರ ಕತ್ತರಿಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದ ಮಾಡಲಾಗಿತ್ತು.


ಮೇಜಿನ ಮೇಲೆ ಇಡಬೇಕಾದ ಉಪಕರಣಗಳನ್ನು ಅಂದರೆ ಹರಿವಾಣಗಳು, ಧೂಪಾರತಿಗಳು, ಹೂಜಿಗಳು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.


ಮೇಜಿನ ಮೇಲಿಡಬೇಕಾದ ಹರಿವಾಣಗಳನ್ನು, ಧೂಪಾರತಿಗಳನ್ನು, ಹೂಜಿಗಳನ್ನು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳನ್ನು ಚೊಕ್ಕ ಬಂಗಾರದಿಂದಲೇ ಮಾಡಿಸಬೇಕು.


ದೀಪದ ಕುಡಿತೆಗೆಯುವ ಕತ್ತರಿಗಳೂ, ಕತ್ತರಿಸಿದ ಕುಡಿಗಳನ್ನು ಹಾಕುವ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದಲೇ ಮಾಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು