Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನೆಬೂಕದ್ನೆಚ್ಚರನು ಸೆರೆಯೊಯ್ದವರ ಲೆಕ್ಕವು ಹೀಗಿದೆ, ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಮೂರು ಸಾವಿರದ ಇಪ್ಪತ್ತ ಮೂರು ಜನ ಯೆಹೂದ್ಯರನ್ನು ಸೆರೆಯೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನೆಬೂಕದ್ನೆಚ್ಚರನು ಸೆರೆಗೆ ಒಯ್ದವರ ಲೆಕ್ಕದ ಪಟ್ಟಿ ಹೀಗಿದೆ; ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಸೆರೆಗೊಯ್ದದ್ದು 3,023 ಮಂದಿ ಯೆಹೂದ್ಯರನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನೆಬೂಕದ್ನೆಚ್ಚರನು ಸೆರೆಯೊಯ್ದವರ ಲೆಕ್ಕವು ಹೀಗಿದೆ - ಅವನು ತನ್ನ ಆಳಿಕೆಯ ಏಳನೆಯ ವರುಷದಲ್ಲಿ ಮೂರು ಸಾವಿರದ ಇಪ್ಪತ್ತು ಮೂರು ಮಂದಿ ಯೆಹೂದ್ಯರನ್ನು ಸೆರೆಯೊಯ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನೆಬೂಕದ್ನೆಚ್ಚರನು ಸೆರೆಹಿಡಿದುಕೊಂಡವರ ವಿವರ ಹೀಗಿದೆ: ರಾಜನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಏಳನೇ ವರ್ಷದಲ್ಲಿ ಯೆಹೂದದಿಂದ ಒಯ್ಯಲ್ಪಟ್ಟ ಜನರು 3,023.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನೆಬೂಕದ್ನೆಚ್ಚರನು ಸೆರೆಯಾಗಿ ಒಯ್ದ ಜನರ ಪಟ್ಟಿ ಹೀಗಿದೆ: ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಸೆರೆಗೊಯ್ದದ್ದು 3,023 ಮಂದಿ ಯೆಹೂದ್ಯರನ್ನು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:28
10 ತಿಳಿವುಗಳ ಹೋಲಿಕೆ  

ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆಯೊಯ್ದನು. ಪಾರಸಿಯರ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಬಾಬಿಲೋನಿಗೆ ಸೆರೆ ಒಯ್ಯಲ್ಪಟ್ಟವರಲ್ಲಿ ಯೆರೂಸಲೇಮಿಗೂ ಯೆಹೂದ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ ಸೆರೆಯಿಂದ ಹಿಂತಿರುಗಿ ಬಂದ (ಯೆಹೂದ) ಸಂಸ್ಥಾನದವರ ಜನಗಣತಿ.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಸೆರೆಯಾಗಿ ಒಯ್ಯಲ್ಪಟ್ಟವರು ಹಿಂತಿರುಗಿ ತಮ್ಮ ಸ್ವದೇಶವಾದ ಯೆಹೂದ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ, ಯೆರೂಸಲೇಮಿಗೂ ಹಿಂತಿರುಗಿದರು.


ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಎಂಟುನೂರ ಮೂವತ್ತೆರಡು ಜನರನ್ನು ಯೆರೂಸಲೇಮಿನಿಂದ ಸೆರೆಯೊಯ್ದನು.


ಇದನ್ನೂ ನುಡಿ, ‘ನಾನು ನಿಮಗೆ ಗುರುತಾಗಿದ್ದೇನೆ; ನಾನು ಮಾಡಿದಂತೆಯೇ ಅವರಿಗಾಗುವುದು; ಅವರು ವಲಸೆಯಾಗಿ ಸೆರೆ ಹೋಗುವರು.


ದಕ್ಷಿಣ ಯೆಹೂದ ದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ; ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ.


ಅದರ ಲೆಕ್ಕವಿಲ್ಲದ ದ್ರೋಹಗಳಿಗಾಗಿ ಯೆಹೋವನು ಅದನ್ನು ವ್ಯಥೆಗೊಳಿಸಿದ್ದಾನೆ; ಅದರ ವಿರೋಧಿಗಳು ಅದಕ್ಕೆ ಅಧಿಪತಿಗಳಾಗಿದ್ದಾರೆ, ಅದರ ಶತ್ರುಗಳು ನೆಮ್ಮದಿಯಲ್ಲಿದ್ದಾರೆ; ಅದರ ಎಳೆಕೂಸುಗಳು ವಿರೋಧಿಗಳ ವಶದಲ್ಲಿ ಸೆರೆಹೋಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು