Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ಯೆರೂಸಲೇಮಿನವರ ಮೇಲೆಯೂ ಮತ್ತು ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ, ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರ ಸ್ವಾಮಿ ಬಹಳ ಕೋಪಗೊಂಡು ಜೆರುಸಲೇಮಿನವರ ಮೇಲೂ ಬೇರೆ ಎಲ್ಲ ಯೆಹೂದ್ಯರ ಮೇಲೂ ಇದನ್ನೆಲ್ಲ ಬರಮಾಡಿ, ಕಡೆಗೆ ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು. ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ವಿರುದ್ಧ ತಿರುಗಿಬಿದ್ದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನು ಯೆರೂಸಲೇವಿುನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರಿಗಿಬಿದ್ದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನಿಗೆ ಅವರ ಮೇಲೆ ಕೋಪ ಬಂದುದರಿಂದ ಜೆರುಸಲೇಮ್ ಮತ್ತು ಯೆಹೂದಗಳಿಗೆ ವಿಪತ್ತುಗಳು ಸಂಭವಿಸಿದವು. ಕೊನೆಗೆ, ಯೆಹೋವನು ಜೆರುಸಲೇಮ್ ಮತ್ತು ಯೆಹೂದದ ಜನರನ್ನು ತನ್ನಿದ ದೂರ ಎಸೆದುಬಿಟ್ಟನು. ಚಿದ್ಕೀಯನು ಬಾಬಿಲೋನ್ ರಾಜನ ವಿರುದ್ಧವಾಗಿ ದಂಗೆ ಎದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರ ಕೋಪದಿಂದ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಇವೆಲ್ಲ ಉಂಟಾದವು. ಹೀಗೆ ಯೆಹೋವ ದೇವರು ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಟ್ಟರು. ಚಿದ್ಕೀಯನು ಬಾಬಿಲೋನಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:3
19 ತಿಳಿವುಗಳ ಹೋಲಿಕೆ  

ಇಗೋ, ಕರ್ತನೂ, ಸೇನಾಧೀಶ್ವರನೂ ಆಗಿರುವ ಯೆಹೋವನೆಂಬ ನಾನು ಯೆರೂಸಲೇಮಿನಿಂದಲೂ, ಯೆಹೂದದಿಂದಲೂ ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ತೆಗೆದುಬಿಡುವೆನು.


ಇದಲ್ಲದೆ, ಅರಸನಾದ ನೆಬೂಕದ್ನೆಚ್ಚರನಿಗೆ ಅಧೀನನಾಗಿರುತ್ತೇನೆ ಎಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿಸಿದ್ದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದದ್ದಲ್ಲದೆ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳದೆ ಹಠಮಾರಿಯಾಗಿ ತನ್ನ ಮನಸ್ಸನ್ನು ಕಠಿಣ ಮಾಡಿಕೊಂಡನು.


ಇದಲ್ಲದೆ ಐಗುಪ್ತ್ಯರನ್ನು ಕ್ರೂರವಾದ ಒಡೆಯನ ಕೈಗೆ ಒಪ್ಪಿಸುವೆನು. ಭಯಂಕರನಾದ ರಾಜನು ಅವರನ್ನು ಆಳುವನು” ಎಂದು ಸೇನಾಧೀಶ್ವರನಾದ ಯೆಹೋವನು ನುಡಿಯುತ್ತಾನೆ.


ದೇಶದ ಅರಸನು ಯುವಕನಾಗಿದ್ದರೆ, ಪ್ರಭುಗಳು ಹೊತ್ತಾರೆ ಔತಣಕ್ಕೆ ಕುಳಿತುಕೊಂಡರೆ ನಿನಗೆ ದೌರ್ಭಾಗ್ಯವೇ!


ಅಧರ್ಮದಿಂದ ದೇಶದಲ್ಲಿ ಬಹು ನಾಯಕರಿರುವರು, ಜ್ಞಾನಿಗಳೂ, ವಿವೇಕಿಗಳೂ ಆದವರಿಂದ ಧರ್ಮವು ಶಾಶ್ವತವಾಗಿರುವುದು.


ನಿನ್ನನ್ನು ಮೆಚ್ಚಿ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ಇಸ್ರಾಯೇಲರನ್ನು ಸದಾ ಪ್ರೀತಿಸುವವನಾದುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇಮಿಸಿದ್ದಾನೆ” ಎಂದು ಹೇಳಿದಳು.


ಯೆಹೋವನು ಪುನಃ ಇಸ್ರಾಯೇಲರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳವರ ಜನಗಣತಿ ಮಾಡುವುದಕ್ಕೆ ಪ್ರೇರೇಪಿಸಿದನು.


ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.


ಆಗ ಕಾಯಿನನು ಯೆಹೋವನ ಸನ್ನಿಧಿಯಿಂದ ಹೊರಟು ಹೋಗಿ ಏದೆನ್ ಪೂರ್ವದಲ್ಲಿದ್ದ ನೋದ್ ಎಂಬ ದೇಶದಲ್ಲಿ ನೆಲೆಸಿದನು.


ಯೆಹೋವನು ಯೆರೂಸಲೇಮಿನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕೊನೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ನಾಶಮಾಡುವಷ್ಟು ರೋಷವುಳ್ಳವನಾಗಿದ್ದನು. ಆದರೆ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.


ಮತ್ತು ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ತೊಲಗಿಸಿಬಿಟ್ಟ ಹಾಗೆ ನಿಮ್ಮನ್ನೂ ನನ್ನ ಕಣ್ಣೆದುರಿನಿಂದ ತೊಲಗಿಸುವೆನು.


ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!


ಇಸ್ರಾಯೇಲರು ಈ ಪ್ರಕಾರ ನಡೆದುಕೊಂಡುದರಿಂದ, ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು, ಯೆಹೂದ ಕುಲದವರ ಹೊರತು ಎಲ್ಲ ಕುಲಗಳವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು.


ಯೆಹೋವನು ಇಸ್ರಾಯೇಲರ ಕುಲಗಳಲ್ಲಿ ಉಳಿದಿದ್ದವರನ್ನೂ ಅಲಕ್ಷ್ಯಮಾಡಿ, ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ ಅವರನ್ನು ಬಾಧಿಸಿದನು.


ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ, ಇಸ್ರಾಯೇಲರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲಿಯೇ ಇದ್ದಾರೆ.


ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥಗಳನ್ನು ಪರಿಶೋಧಿಸಿ ತಿಳಿದುಕೊಳ್ಳುವುದು ಸೂಕ್ತ ಎಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣವು ರಾಜಕಂಟಕವಾದ ಪಟ್ಟಣವು. ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥದು, ಪೂರ್ವಕಾಲದಿಂದಲೇ ದಂಗೆಯೆಬ್ಬಿಸುವಂಥದು ಎಂಬುದೂ ಆ ಕಾರಣದಿಂದಲೇ ಈ ಪಟ್ಟಣವು ನೆಲಸಮವಾಯಿತು ಎಂದು ಆ ಚರಿತ್ರಾ ಗ್ರಂಥದಲ್ಲಿ ಕಂಡುಬರುತ್ತದೆ.


ಯುದ್ಧಕ್ಕೆ ಬೇಕಾದ ವಿವೇಕವೂ, ಬಲವೂ ಉಂಟು ಎಂಬ ನಿನ್ನ ಮಾತು ಬರೀ ಬಾಯಿ ಮಾತೇ ಎಂದು ನಾನು ಹೇಳಬಲ್ಲೆ, ನೀನು ಯಾರನ್ನು ನಂಬಿಕೊಂಡು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದೀ?’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು