Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನೆಬೂಕದ್ನೆಚ್ಚರನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಏಳು ನೂರ ನಲ್ವತ್ತೈದು ಯೆಹೂದ್ಯರನ್ನು ಸೆರೆಯೊಯ್ದನು; ಸೆರೆಯಾದವರು ಒಟ್ಟಾಗಿ ನಾಲ್ಕು ಸಾವಿರದ ಆರುನೂರು ಜನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆಳ್ವಿಕೆಯ ಇಪ್ಪತ್ತು ಮೂರನೆಯ ವರ್ಷದಲ್ಲಿ ರಕ್ಷಾದಳದ ನಾಯಕ ನೆಬೂಜರದಾನನು 745 ಮಂದಿ ಯೆಹೂದ್ಯರನ್ನು ಸೆರೆಗೊಯ್ದನು. ಹೀಗೆ ಸೆರೆಯಾದವರ ಮೊತ್ತ 4,600 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನೆಬೂಕದ್ನೆಚ್ಚರನ ಆಳಿಕೆಯ ಇಪ್ಪತ್ತು ಮೂರನೆಯ ವರುಷದಲ್ಲಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಏಳುನೂರು ನಾಲ್ವತ್ತೈದು ಮಂದಿ ಯೆಹೂದ್ಯರನ್ನು ಸೆರೆಯೊಯ್ದನು; ಸೆರೆಯಾದವರು ಒಟ್ಟಾಗಿ ನಾಲ್ಕು ಸಾವಿರದ ಆರುನೂರು ಜನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನೆಬೂಕದ್ನೆಚ್ಚರನ ಇಪ್ಪತ್ಮೂರನೇ ವರ್ಷದಲ್ಲಿ ನೆಬೂಜರದಾನನು 745 ಜನ ಯೆಹೂದಿಯರನ್ನು ಸೆರೆಹಿಡಿದನು. ನೆಬೂಜರದಾನನು ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು. ಒಟ್ಟಿನಲ್ಲಿ 4,600 ಜನರನ್ನು ಸೆರೆಹಿಡಿಯಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನೆಬೂಕದ್ನೆಚ್ಚರನು ಇಪ್ಪತ್ತು ಮೂರನೆಯ ವರ್ಷದಲ್ಲಿ ಕಾವಲಿನ ಅಧಿಪತಿಯಾದ ನೆಬೂಜರದಾನನು 745 ಮಂದಿ ಯೆಹೂದ್ಯರನ್ನು ಸೆರೆಗೊಯ್ದನು. ಹೀಗೆ ಸೆರೆಯಾದವರ ಮೊತ್ತ 4,600 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:30
6 ತಿಳಿವುಗಳ ಹೋಲಿಕೆ  

ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಕೇವಲ ದಿಕ್ಕಿಲ್ಲದವರಲ್ಲಿ ಅನೇಕರನ್ನೂ, ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ಬಾಬೆಲಿನ ಅರಸನ ಮೊರೆಹೊಕ್ಕವರನ್ನೂ ಮತ್ತು ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.


ಸೇನಾಧೀಶ್ವರನಾದ ಯೆಹೋವನು, ಇಸ್ರಾಯೇಲಿನ ಶೇಷವನ್ನು ದ್ರಾಕ್ಷಿಯ ಹಕ್ಕಲನ್ನೋ ಎಂಬಂತೆ ಆಯಬೇಕು; ದ್ರಾಕ್ಷಿಯ ಹಣ್ಣನ್ನು ಕೀಳುವವನಂತೆ ನೀನು ನಿನ್ನ ಕೈಯನ್ನು ತಿರುಗಿ ರೆಂಬೆಗಳಲ್ಲಿ ಹಾಕು ಎಂದು ಹೇಳುತ್ತಾನೆ.


ಐದನೆಯ ತಿಂಗಳಿನ ಏಳನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬುವವನು ಯೆರೂಸಲೇಮಿಗೆ ಬಂದನು.


ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಒಟ್ಟಾರೆ ಎಲ್ಲಾ ಜನರನ್ನು ಸೆರೆಹಿಡಿದೊಯ್ದನು.


ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆಹೊಕ್ಕವರನ್ನೂ, ಇತರ ಸಮಸ್ತ ಜನರನ್ನೂ ಬಾಬಿಲೋನಿಗೆ ಸೆರೆಯೊಯ್ದನು.


ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಎಂಟುನೂರ ಮೂವತ್ತೆರಡು ಜನರನ್ನು ಯೆರೂಸಲೇಮಿನಿಂದ ಸೆರೆಯೊಯ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು