Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಯೆಹೋಯಾಕೀಮನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದ ಇರುವವರೆಗೂ ಅರಸನ ಪಂಕ್ತಿಯಲ್ಲೇ ಊಟಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ ಜೀವದಿಂದಿರುವವರೆಗೂ ಅರಸನ ಪಂಙ್ತಿಯಲ್ಲಿ ಊಟಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯೆಹೋಯಾಖೀನನು ತನ್ನ ಸೆರೆಮನೆಯ ಬಟ್ಟೆಗಳನ್ನು ತೆಗೆದುಹಾಕಿದನು. ಅವನು ಬದುಕಿರುವವರೆಗೂ ರಾಜನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅವನ ಸೆರೆಯ ವಸ್ತ್ರಗಳನ್ನು ತೆಗೆದು ರಾಜವಸ್ತ್ರ ತೊಡಿಸಿದನು. ಹೀಗೆ ಯೆಹೋಯಾಖೀನನು ಬದುಕಿದ ಸಕಲ ದಿವಸಗಳಲ್ಲಿ ಅರಸನ ಪಂಕ್ತಿಯಲ್ಲಿಯೇ ಊಟಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:33
9 ತಿಳಿವುಗಳ ಹೋಲಿಕೆ  

ಆಗ ದಾವೀದನು ಅವನಿಗೆ, “ಹೆದರಬೇಡ, ನಿನ್ನ ತಂದೆಯಾದ ಯೋನಾತಾನನನ್ನು ನೆನಸಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ, ಮತ್ತು ನೀನು ಪ್ರತಿ ದಿನ ನನ್ನ ಪಂಕ್ತಿಯಲ್ಲೇ ಊಟಮಾಡಬೇಕು” ಎಂದು ಹೇಳಿದನು.


ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಕ್ಕಳಿಗೆ ಉಪಕಾರಮಾಡಬೇಕು. ಅವರು ನಿತ್ಯವೂ ನಿನ್ನ ಪಂಕ್ತಿಯಲ್ಲಿ ಊಟಮಾಡುತ್ತಿರಬೇಕು. ಯಾಕೆಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಬಳಿಯಿಂದ ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.


ಮೆಫೀಬೋಶೆತನಿಗೆ ಪ್ರತಿದಿನವೂ ರಾಜಪಂಕ್ತಿಯಲ್ಲಿ ಊಟವಾಗುತ್ತಿದ್ದರಿಂದ ಅವನು ಯೆರೂಸಲೇಮಿನಲ್ಲೇ ವಾಸಮಾಡಿದನು. ಅವನ ಎರಡು ಕಾಲುಗಳು ಕುಂಟಾಗಿದ್ದವು.


ಫರೋಹನು ತನ್ನ ಕೈಯಿಂದ ಉಂಗುರವನ್ನು ತೆಗೆದು ಯೋಸೇಫನ ಬೆರಳಿಗೆ ತೊಡಿಸಿ ಅವನಿಗೆ ನಾರುಮಡಿಯನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಸರವನ್ನು ಹಾಕಿದನು.


ಫರೋಹನು ಇದನ್ನು ಕೇಳಿದಾಗ ಯೋಸೇಫನನ್ನು ಕರೆದುಕೊಂಡು ಬರಲು ಹೇಳಿಕಳುಹಿಸಿದನು. ಯೋಸೇಫನನು ಬೇಗನೆ ಸೆರೆಮನೆಯಿಂದ ಬಿಡುಗಡೆ ಮಾಡಿದರು. ಆತನು ಕ್ಷೌರಮಾಡಿಸಿಕೊಂಡು ಬಟ್ಟೆ ಬದಲಾಯಿಸಿಕೊಂಡು ಫರೋಹನ ಸನ್ನಿಧಿಗೆ ಬಂದನು.


ದೇವದೂತನು ತನ್ನ ಸೇವಕರಿಗೆ, “ಇವನ ಕೊಳೆಬಟ್ಟೆಗಳನ್ನು ತೆಗೆದುಬಿಡಿರಿ” ಎಂದು ಅಪ್ಪಣೆ ಕೊಟ್ಟು ಅವನಿಗೆ, “ಇಗೋ, ನಿನ್ನ ದೋಷವನ್ನು ನಿನ್ನಿಂದ ತೊಲಗಿಸಿದ್ದೇನೆ, ನಿನಗೆ ಶ್ರೇಷ್ಠವಸ್ತ್ರವನ್ನು ತೊಡಿಸುವೆನು” ಎಂದು ಹೇಳಿದನು.


ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು, ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ.


ಎವೀಲ್ಮೆರೋದಕನು ಯೆಹೋಯಾಖೀನನ ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು