Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸಮಾಧಾನವಿಲ್ಲದಿದ್ದರೂ, ಸಮಾಧಾನ ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವರು, ನನ್ನ ಜನರ ಗಾಯಗಳು ಗುಣವಾಗದಿದ್ದರೂ ಅವು ಕೇವಲ ಮಚ್ಚೆಗಳೋ ಎಂಬಂತೆ ‘ಎಲ್ಲ ಚೆನ್ನಾಗಿದೆ’ ಎಂದು ಸಮಾಧಾನ ಹೇಳಿ ವಂಚಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮೇಲಾಗದಿದ್ದರೂ ಮೇಲು ಮೇಲು ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಪ್ರವಾದಿಗಳು ಮತ್ತು ಯಾಜಕರು ನನ್ನ ಜನರಿಗಾದ ದೊಡ್ಡ ಗಾಯಗಳಿಗೆ ಚಿಕ್ಕಗಾಯಗಳಿಗೋ ಎಂಬಂತೆ ಚಿಕಿತ್ಸೆ ಮಾಡುತ್ತಾರೆ. ವಾಸಿಯಾಗಿಲ್ಲದಿದ್ದರೂ ‘ವಾಸಿಯಾಗಿದೆ’ ಎನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ನನ್ನ ಜನರ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ. ಸಮಾಧಾನವಿಲ್ಲದಿರುವಾಗ, ‘ಸಮಾಧಾನ, ಸಮಾಧಾನ,’ ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:14
21 ತಿಳಿವುಗಳ ಹೋಲಿಕೆ  

“ಅಶಾಂತಿಯಿದ್ದರೂ ಅವರು ‘ಶಾಂತಿಯಿದೆ’ ಎಂದು ಹೇಳಿ ನನ್ನ ಜನರನ್ನು ವಂಚಿಸಿದ್ದಾರೆ. ಒಬ್ಬನು ತೆಳುವಾದ ಗೋಡೆಯನ್ನು ಕಟ್ಟಿದ್ದರೂ, ಇಗೋ, ಅದಕ್ಕೆ ಸುಣ್ಣಬಳಿಯುತ್ತಾರೆ;


ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ’ ಎಂದು ಹೇಳುತ್ತಲೇ ಇದ್ದಾರೆ. ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.


ಆಗ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನೀನು ಈ ಜನರಿಗೂ ಮತ್ತು ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು’ ಎಂದು ಹೇಳಿ ನಿಶ್ಚಯವಾಗಿ ಇವರನ್ನು ಬಹಳ ಮೋಸಗೊಳಿಸಿದ್ದಿ; ಖಡ್ಗವು ಪ್ರಾಣದ ಮಟ್ಟಿಗೂ ಇಳಿಯುತ್ತದಲ್ಲಾ” ಅಂದೆನು.


ನಿನ್ನ ಪ್ರವಾದಿಗಳು ಕಂಡ ದರ್ಶನ, ಹೇಳಿದ ಪ್ರವಾದನೆಯ ವಾಕ್ಯಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದ ಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವುದಕ್ಕೆ ಆಸ್ಪದವಾದವು.


ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ಇಗೋ ಪ್ರವಾದಿಗಳು ಈ ಜನರಿಗೆ, ‘ಖಡ್ಗವು ನಿಮ್ಮ ಕಣ್ಣಿಗೆ ಕಾಣದು, ಕ್ಷಾಮವು ನಿಮಗೆ ಸಂಭವಿಸದು; ಯೆಹೋವನು ಈ ಸ್ಥಳದಲ್ಲಿ ತಾನು ಪ್ರಮಾಣ ಮಾಡಿದಂತೆ ಸಮಾಧಾನವನ್ನು ನಿಮಗೆ ಕೊಡುವನು ಎಂದು ನುಡಿಯುತ್ತಾರೆ’” ಎಂಬುದಾಗಿ ಹೇಳಿದೆನು.


ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.


ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಪ್ರಕಾಶಮಾನವಾಗಿತ್ತು.


ಗಾಳಿಯನ್ನೂ, ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು, “ನಾನು ದ್ರಾಕ್ಷಾರಸ, ಮಧ್ಯಗಳ ವಿಷಯವಾಗಿ ನಿನಗೆ ಪ್ರವಾದನೆ ಮಾಡುವೆನು” ಎಂದು ಹೇಳಿದರೆ, ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.


ನಾನು ಎದೆಗುಂದಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ, ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.


ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.


ಅವರು ಯೆಹೋವನನ್ನು ಅಲ್ಲಗಳೆದು, ‘ಆತನು ಏನು ಮಾಡುವನು? ನಮಗೆ ಕೇಡುಬಾರದು, ಖಡ್ಗವೂ, ಕ್ಷಾಮವೂ ನಮ್ಮ ಕಣ್ಣಿಗೆ ಬೀಳವು;


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆಗೆದು ಬಾಬಿಲೋನಿಗೆ ಒಯ್ದ ಯೆಹೋವನ ಆಲಯದ ಸಕಲ ಉಪಕರಣಗಳನ್ನು ಎರಡು ವರ್ಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು.


ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು, ಬಾಸುಂಡೆ, ವಾಸಿಯಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಲಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಲಿಲ್ಲ.


“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ನಾನು ಅರಸನೊಬ್ಬನನ್ನೇ ಕೊಂದು, ನಿನ್ನ ಅಪೇಕ್ಷೆಯಂತೆ ಎಲ್ಲಾ ಜನರನ್ನು ನಿನ್ನ ಬಳಿಗೆ ತಿರುಗಿ ಬರಮಾಡುವೆನು. ನಿನ್ನ ದೇಶದಲ್ಲೆಲ್ಲಾ ಸಮಾಧಾನವುಂಟಾಗುವುದು” ಎಂದು ಹೇಳಿದನು.


ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.


‘ಇಸ್ರಾಯೇಲಿನ ಪ್ರವಾದಿಗಳೇ, ಅಶಾಂತಿಯಿದ್ದರೂ ಶಾಂತಿಯಿದೆ ಎಂಬ ದರ್ಶನಗಳನ್ನು ನೀವು ಕಂಡು ಯೆರೂಸಲೇಮಿನ ವಿಷಯವಾಗಿ ಪ್ರವಾದಿಸಿದ್ದೀರಲ್ಲವೆ? ಗೋಡೆಯು ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು’” ಇದು ಕರ್ತನಾದ ಯೆಹೋವನ ನುಡಿ.


“ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.


ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ, ತಿನ್ನುವುದಕ್ಕೆ ಕೊಡುವಂಥವರಿಗೆ, “ಸಮಾಧಾನವಿರುವುದು” ಎಂದು ಪ್ರಕಟಿಸುವರು ಮತ್ತು ತಮ್ಮ ಬಾಯಿಗೆ ರುಚಿಯಾದ ತಿಂಡಿಯನ್ನು ಕೊಡದವನ ಮೇಲೆ ಯುದ್ಧವನ್ನು ನಿರ್ಧರಿಸುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು