ಯೆರೆಮೀಯ 6:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು” ಎಂದು ಯೆಹೋವನು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಅವರಿಗೆ ಲಜ್ಜೆಯ ಗಂಧವೂ ಇಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ; ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಪ್ರವಾದಿಗಳು ಮತ್ತು ಯಾಜಕರು ತಾವು ಮಾಡುವ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ನಾಚಿಕೆಪಡುವದೇ ಇಲ್ಲ. ತಮ್ಮ ಪಾಪಕಾರ್ಯಗಳಿಗಾಗಿ ಸಂಕೋಚಪಡುವುದು ಸಹ ಅವರಿಗೆ ಗೊತ್ತಿಲ್ಲ. ಆದ್ದರಿಂದ ಬೇರೆಯವರಂತೆ ಅವರನ್ನೂ ಶಿಕ್ಷಿಸಲಾಗುವುದು. ನಾನು ಅವರನ್ನು ಶಿಕ್ಷಿಸಿದಾಗ ಅವರನ್ನು ನೆಲಕ್ಕೆ ಎಸೆಯಲಾಗುವದು” ಎಂದು ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆ ಪಡಲಿಲ್ಲ. ಲಜ್ಜೆಯನ್ನೇ ಅರಿಯರು. ಆದ್ದರಿಂದ ಬೀಳುವವರೊಳಗೆ ಅವರು ಬೀಳುವರು. ನಾನು ಅವರನ್ನು ದಂಡಿಸುವ ಕಾಲದಲ್ಲಿ, ಅವರು ಕೆಳಗೆ ಬೀಳುವರು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |