ಯೆರೆಮೀಯ 6:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಸೇನಾಧೀಶ್ವರನಾದ ಯೆಹೋವನು, ಮರಗಳನ್ನು ಕಡಿದುಬಿಡಿರಿ, ಯೆರೂಸಲೇಮಿನ ಎದುರಿಗೆ ದಿಬ್ಬಹಾಕಿರಿ. ಇದೇ ನೀವು ದಂಡಿಸತಕ್ಕ ಪಟ್ಟಣ; ಅದರೊಳಗೆ ಬರೀ ದಬ್ಬಾಳಿಕೆಯೇ ತುಂಬಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸರ್ವಶಕ್ತನಾದ ಸರ್ವೇಶ್ವರ ಸ್ವಾಮಿ ಹೀಗೆ ಎನ್ನುತ್ತಾರೆ : “ಸಿಯೋನ್ ಸುತ್ತಣ ಮರಗಳನ್ನು ಕಡಿದುಬಿಡಿ. ಜೆರುಸಲೇಮ್ ಎದುರಿಗೆ ದಿಬ್ಬಗಳನ್ನು ಎಬ್ಬಿಸಿರಿ. ನೀವು ದಂಡಿಸಬೇಕಾದ ನಗರ ಇದುವೆ. ದರೋಡೆ ದಬ್ಬಾಳಿಕೆಗಳಿಂದ ಅದು ತುಂಬಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಸೇನಾಧೀಶ್ವರನಾದ ಯೆಹೋವನು ಹೀಗೆ ಹೇಳಿದ್ದಾನೆ - ಸುತ್ತಣ ಮರಗಳನ್ನು ಕಡಿದುಬಿಡಿರಿ, ಯೆರೂಸಲೇವಿುನೆದುರಿಗೆ ದಿಬ್ಬ ಹಾಕಿರಿ; ಇದೇ ನೀವು ದಂಡಿಸತಕ್ಕ ಪಟ್ಟಣ; ಅದರೊಳಗೆ ಬರೀ ದೋಚಾಟವೇ ತುಂಬಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸರ್ವಶಕ್ತನಾದ ಯೆಹೋವನು ಹೀಗೆ ಹೇಳಿದನು: “ಜೆರುಸಲೇಮಿನ ಸುತ್ತಮುತ್ತಲಿನ ಮರಗಳನ್ನು ಕಡಿದುಹಾಕಿರಿ; ಜೆರುಸಲೇಮಿನ ಎದುರಿಗೆ ಒಂದು ದಿಬ್ಬ ನಿರ್ಮಿಸಿರಿ. ನಗರವನ್ನು ದಂಡಿಸಬೇಕು. ನಗರದ ಒಳಗಡೆ ದಬ್ಬಾಳಿಕೆಯ ಹೊರತು ಮತ್ತೇನಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಏಕೆಂದರೆ, ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಚೀಯೋನ್ ಸುತ್ತಲಿರುವ ಮರಗಳನ್ನು ಕಡಿಯಿರಿ. ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ. ಇದೇ ನೀವು ದಂಡಿಸತಕ್ಕ ಪಟ್ಟಣವು. ಅವಳಲ್ಲಿ ಬರೀ ದಬ್ಬಾಳಿಕೆಯೇ ತುಂಬಿದೆ. ಅಧ್ಯಾಯವನ್ನು ನೋಡಿ |