Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಿಬರುತ್ತದೆ; ರೋಗಗಳೂ, ಗಾಯಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತೊಟ್ಟಿ ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ನಗರ ತನ್ನಲ್ಲಿನ ನೀಚತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಇಲ್ಲಿಂದ ಕೇಳಿಬರುವುದೆಲ್ಲ ಹಿಂಸಾಚಾರದ ಹಾಗೂ ಕೊಳ್ಳೆಯ ಸುದ್ದಿಯೆ. ರೋಗ ರುಜಿನಗಳೂ ಗಾಯಹುಣ್ಣುಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ; ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಬರುತ್ತದೆ; ರೋಗಗಳೂ ವ್ರಣಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಬಾವಿಯಲ್ಲಿ ಹೊಸ ನೀರು ಬರುವಂತೆ ಜೆರುಸಲೇಮಿನಲ್ಲಿ ಹೊಸಹೊಸ ದುಷ್ಟತನ ಉಂಟಾಗುತ್ತದೆ. ಈ ಪಟ್ಟಣದಲ್ಲಿ ಬಲಾತ್ಕಾರ ಮತ್ತು ವಿನಾಶಗಳೇ ಕೇಳಿಬರುತ್ತವೆ. ನನಗೆ ಯಾವಾಗಲೂ ಜೆರುಸಲೇಮಿನ ರೋಗ ಮತ್ತು ಗಾಯಗಳು ಕಣ್ಣಿಗೆ ಬೀಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬುಗ್ಗೆಯು ನೀರನ್ನು ಹರಿಯ ಮಾಡುವಂತೆ, ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ. ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳ ಬರುತ್ತದೆ. ದುಃಖವೂ ಗಾಯಗಳೂ ಯಾವಾಗಲೂ ನನ್ನ ಮುಂದೆ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:7
24 ತಿಳಿವುಗಳ ಹೋಲಿಕೆ  

ಒಂದು ಸರಪಣಿಯನ್ನು ಮಾಡು; ಏಕೆಂದರೆ ದೇಶವು ನರಹತ್ಯಭರಿತವಾಗಿದೆ, ಪಟ್ಟಣವು ಹಿಂಸೆಯಿಂದ ತುಂಬಿಹೋಗಿದೆ.


ಹಿಂಸೆಯು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ ಉಳಿಯುವುದಿಲ್ಲ, ಆ ಜನಸಮೂಹದಲ್ಲಿಯೂ, ಅವರ ಆಸ್ತಿಯಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲುವುದಿಲ್ಲ.


ನಾನು ಮಾತನಾಡುವುದೆಲ್ಲಾ ಅರಚಾಟವೇ. “ಬಲಾತ್ಕಾರ, ಕೊಳ್ಳೆ” ಎಂದೇ ಕೂಗಿಕೊಳ್ಳುತ್ತೇನೆ. ನಾನು ಸಾರುವ ಯೆಹೋವನ ವಾಕ್ಯವು ನನ್ನನ್ನು ಜನರ ದೂಷಣೆಗೂ ಪರಿಹಾಸ್ಯಕ್ಕೂ ಗುರಿಮಾಡಿದೆ.


ದುಷ್ಟರಾದರೋ ಅಲ್ಲೋಲಕಲ್ಲೋಲವಾದ ಸಮುದ್ರದಂತಿದ್ದಾರೆ; ಅದು ಸುಮ್ಮನಿರದು, ಅದರ ತೆರೆಗಳು ಕೆಸರನ್ನೂ, ಹೊಲಸನ್ನೂ ಕಾರುತ್ತಲಿರುತ್ತವೆ.


“ಯೆರುಸಲೇಮ್ ನಗರ ಸುರಿಸಿದ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದ್ದಾರೆ. ಧೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ.


ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ, ಅದರೊಳಗಿಂದ ಜೀವಬುಗ್ಗೆಗಳು ಹೊರಡುವವು.


ಇವರ ಬಲೆಯ ದಾರವು ಬಟ್ಟೆಯಾಗದು, ಇವರು ನೇಯ್ದದ್ದು ಹೊದಿಕೆಯಾಗದು; ಇವರ ಕಾರ್ಯಗಳು ಅಧರ್ಮಕಾರ್ಯಗಳು, ಇವರ ಕೈಯಲ್ಲಿ ಬಲಾತ್ಕಾರವೇ ತುಂಬಿದೆ.


ಯೆಹೋವನು ಇಂತೆನ್ನುತ್ತಾನೆ, “ನಿನ್ನ ಗಾಯವು ಗುಣಹೊಂದುವುದಿಲ್ಲ, ನಿನ್ನ ಬಾಸುಂಡೆಯು ಘೋರವಾಗಿದೆ.


ನಿನ್ನ ಪಾಲಿಗೆ ಯಾರೂ ಇಲ್ಲ, ನಿನ್ನ ಹುಣ್ಣಿಗೆ ಔಷಧವಿಲ್ಲ, ನಿನಗೆ ವಾಸಿಯಾಗುವುದಿಲ್ಲ.


ಈ ಪಟ್ಟಣವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪರೋಷಗಳಿಗೆ ಆಸ್ಪದವಾಗಿದೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿನ ಪ್ರಭುಗಳೇ, ಇನ್ನು ಸಾಕು, ಕೊಳ್ಳೆಯನ್ನೂ ಬಲಾತ್ಕಾರವನ್ನೂ ತ್ಯಜಿಸಿ, ನೀತಿನ್ಯಾಯಗಳನ್ನು ನಡೆಸಿರಿ. ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿರಿ. ಇದು ಕರ್ತನಾದ ಯೆಹೋವನ ನುಡಿ.


ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು, ಬಾಸುಂಡೆ, ವಾಸಿಯಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಲಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಲಿಲ್ಲ.


ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?


ಅಯ್ಯೋ, ನೋವು ನಿಲ್ಲದು ಎಂದು ನಿನ್ನ ಪೆಟ್ಟಿಗಾಗಿ ಏಕೆ ಅರಚಿಕೊಳ್ಳುತ್ತೀ? ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಿನಗೆ ಇದನ್ನೆಲ್ಲಾ ಮಾಡಿದೆನು.


ಅಮ್ಮೋನೇ, ಪ್ರವಾದಿಗಳೆಂದು ಹೇಳಿಕೊಳ್ಳುತ್ತಿರುವ ನಿನ್ನವರು ದರ್ಶನವನ್ನು ನೋಡಿದೆವು ಎಂದು ಸುಳ್ಳು ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಸಮಯವು ಹತ್ತಿರವಾಗಿ, ಅಪರಾಧದ ಕಡೆಗಾಲವು ಸಂಭವಿಸಿ, ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು! ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಒರಗಿ ಬೀಳುವೆ.


ಅಯ್ಯೋ, ಅವಿಧೇಯತೆ ಮಲಿನವೂ ಆದ ದಬ್ಬಾಳಿಕೆ ನಡೆಸುವ ನಗರದ ಗತಿಯನ್ನು ಏನು ಹೇಳಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು