ಯೆರೆಮೀಯ 6:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಸೇನಾಧೀಶ್ವರನಾದ ಯೆಹೋವನು, ಇಸ್ರಾಯೇಲಿನ ಶೇಷವನ್ನು ದ್ರಾಕ್ಷಿಯ ಹಕ್ಕಲನ್ನೋ ಎಂಬಂತೆ ಆಯಬೇಕು; ದ್ರಾಕ್ಷಿಯ ಹಣ್ಣನ್ನು ಕೀಳುವವನಂತೆ ನೀನು ನಿನ್ನ ಕೈಯನ್ನು ತಿರುಗಿ ರೆಂಬೆಗಳಲ್ಲಿ ಹಾಕು ಎಂದು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸರ್ವಶಕ್ತರಾದ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಇಸ್ರಯೇಲಿನ ಅಳಿದುಳಿದವರನ್ನು ದ್ರಾಕ್ಷಿಯ ಹಕ್ಕಲನ್ನೋ ಎಂಬಂತೆ ಆಯ್ದುಕೊ. ದ್ರಾಕ್ಷಿಯ ಹಣ್ಣನ್ನು ಕೀಳುವವನಂತೆ ನಿನ್ನ ಕೈಯನ್ನು ಮತ್ತೆ ರೆಂಬೆಗಳಿಗೆ ಹಾಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಸೇನಾಧೀಶ್ವರನಾದ ಯೆಹೋವನು ಹೀಗನ್ನುತ್ತಾನೆ - ಇಸ್ರಾಯೇಲಿನ ಶೇಷವನ್ನು ದ್ರಾಕ್ಷೆಯ ಹಕ್ಕಲನ್ನೋ ಎಂಬಂತೆ ಆಯಬೇಕು; ದ್ರಾಕ್ಷೆಯ ಹಣ್ಣನ್ನು ಕೀಳುವವನಂತೆ ನೀನು ನಿನ್ನ ಕೈಯನ್ನು ತಿರಿಗಿ ರೆಂಬೆಗಳಲ್ಲಿ ಹಾಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: “ದೇಶದಲ್ಲಿ ಅಳಿದುಳಿದ ಇಸ್ರೇಲಿಯರನ್ನು ಒಟ್ಟಾಗಿ ಸೇರಿಸಿರಿ. ದ್ರಾಕ್ಷಿತೋಟದಲ್ಲಿ ಕೊನೆಯ ದ್ರಾಕ್ಷಿಯನ್ನು ಕೀಳುವಂತೆ ಅವರನ್ನು ಒಟ್ಟಾಗಿ ಸೇರಿಸಿ. ಕೊಯ್ಲುಗಾರನು ಪ್ರತಿಯೊಂದು ಬಳ್ಳಿಯನ್ನು ನೋಡಿ ದ್ರಾಕ್ಷಿಕೀಳುವಂತೆ ನೀವು ಸೂಕ್ಷ್ಮವಾಗಿ ಗಮನಿಸಿ ಅವರನ್ನು ಒಟ್ಟಾಗಿ ಸೇರಿಸಿರಿ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇಸ್ರಾಯೇಲಿನ ಶೇಷವನ್ನು ದ್ರಾಕ್ಷಿ ಗಿಡದ ಹಾಗೆ ಪೂರ್ಣವಾಗಿ ಹಕ್ಕಲಾಯುವರು; ದ್ರಾಕ್ಷಿ ಕೂಡಿಸುವವನ ಹಾಗೆ ನಿನ್ನ ಕೈಯನ್ನು ರೆಂಬೆಗಳಲ್ಲಿ ಹಿಂದಕ್ಕೆ ತಿರುಗಿಸು.” ಅಧ್ಯಾಯವನ್ನು ನೋಡಿ |