Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮತ್ತು ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ತೊಲಗಿಸಿಬಿಟ್ಟ ಹಾಗೆ ನಿಮ್ಮನ್ನೂ ನನ್ನ ಕಣ್ಣೆದುರಿನಿಂದ ತೊಲಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿಮ್ಮ ಬಂಧುಬಳಗದವರನ್ನು ಅಂದರೆ, ಇಡಿ ಎಫ್ರಯಿಮ್ ವಂಶದವರನ್ನು ತೊಲಗಿಸಿಬಿಟ್ಟಂತೆ, ನಿಮ್ಮನ್ನೂ ನನ್ನ ಸನ್ನಿಧಿಯಿಂದ ತೊಲಗಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮತ್ತು ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ಎಸೆದುಬಿಟ್ಟ ಹಾಗೆ ನಿಮ್ಮನ್ನೂ ನನ್ನ ಕಣ್ಣೆದುರಿನಿಂದ ಎಸೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ಎಸೆದುಬಿಟ್ಟ ಹಾಗೆ ನಿಮ್ಮನ್ನೂ ನನ್ನಿಂದ ದೂರ ಎಸೆದುಬಿಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಮ್ಮ ಸಹೋದರರೆಲ್ಲರನ್ನೂ, ಎಫ್ರಾಯೀಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ, ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:15
25 ತಿಳಿವುಗಳ ಹೋಲಿಕೆ  

ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!


ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದುದರಿಂದ ತನ್ನ ದೋಷಫಲವನ್ನು ಅನುಭವಿಸಲೇ ಬೇಕು; ಅದರ ಜನರು ಖಡ್ಗದಿಂದ ಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.


ಯೆಹೋವನು ಯೆರೂಸಲೇಮಿನವರ ಮೇಲೆಯೂ ಮತ್ತು ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ, ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದನು.


ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ, ಇಸ್ರಾಯೇಲರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲಿಯೇ ಇದ್ದಾರೆ.


ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣಗಾಳಿಯೇ. ಅದು ಮೋಸವನ್ನೂ, ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡೆಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತದೆ.


ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ. ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆ ಮಾಡುವನು.


ಅವರು ಯೆಹೋವನ ದೇಶದಲ್ಲಿ ಇನ್ನು ವಾಸಿಸರು. ಎಫ್ರಾಯೀಮ್ಯರು ಐಗುಪ್ತಕ್ಕೆ ಹಿಂದಿರುಗುವರು, ಅಶ್ಶೂರದಲ್ಲಿ ಅವರು ಹೊಲಸಾದ ಆಹಾರವನ್ನು ತಿನ್ನುವರು.


ಯೆಹೋವನು ಅವನನ್ನು ಕುರಿತು, “ಈ ಮಗುವಿಗೆ ಇಜ್ರೇಲ್ ಎಂಬ ಹೆಸರಿಡು; ಇಜ್ರೇಲಿನಲ್ಲಿ ಸುರಿಸಿದ ರಕ್ತಕ್ಕೆ ಪ್ರತಿಯಾಗಿ ಸ್ವಲ್ಪ ಕಾಲದೊಳಗೆ ನಾನು ಯೇಹು ವಂಶದವರಿಗೆ ಮುಯ್ಯಿ ತೀರಿಸಿ ಇಸ್ರಾಯೇಲ್ ಜನಾಂಗವನ್ನು ನಿರ್ನಾಮ ಮಾಡುವೆನು.


ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪೂರ್ವಿಕರಿಗೆ ದಯಪಾಲಿಸಿದ ಪಟ್ಟಣವನ್ನೂ ಹೊರೆಯೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಡುವೆನು.


ಭ್ರಷ್ಟಳಾದ ಇಸ್ರಾಯೇಲ್ ನನಗೆ ವಿಮುಖಳಾಗಿ ವ್ಯಭಿಚಾರ ಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ, ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ, ಅಂಜದೆಯೂ ತಾನೂ ಹೋಗಿ ವ್ಯಭಿಚಾರವನ್ನು ನಡೆಸಿದಳು.


ಆ ಮೇಲೆ ಆಸನು ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರನ್ನೂ ತನ್ನ ದೇವರಾದ ಯೆಹೋವನು ತನ್ನ ಸಂಗಡ ಇರುವುದನ್ನು ನೋಡಿ ಇಸ್ರಾಯೇಲರೊಡನೆ ತನ್ನೊಡನೆ ಗುಂಪುಗುಂಪಾಗಿ ಕೂಡಿಕೊಂಡು ಯೆಹೂದ ದೇಶದಲ್ಲಿ ನೆಲಸಿದ್ದ ಎಫ್ರಾಯೀಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನೂ ಕರೆಸಿಕೊಂಡನು.


ಯೆಹೋವನು ಯೆರೂಸಲೇಮಿನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕೊನೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ನಾಶಮಾಡುವಷ್ಟು ರೋಷವುಳ್ಳವನಾಗಿದ್ದನು. ಆದರೆ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರುದ್ಧವಾಗಿ ತಿರುಗಿಬಿದ್ದನು.


ಯೋಸೇಫನಿಂದ ಹುಟ್ಟಿದವರೊಳಗೆ ಎಫ್ರಾಯೀಮ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.


ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ.


“ಏಕೆಂದರೆ ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮೊದಲೇ ನೀನು ಭಯಪಡುವ ದೇಶವನ್ನು ಅದರ ಇಬ್ಬರು ಅರಸರು ತ್ಯಜಿಸಿಬಿಡುವರು.


‘ಅಯ್ಯೋ, ಹಾಳಾದೆವು, ಭಂಗಪಟ್ಟೆವು; ನಾವು ನಮ್ಮ ದೇಶವನ್ನು ಬಿಟ್ಟೆವಲ್ಲಾ, ಶತ್ರುಗಳು ನಮ್ಮ ಮನೆಗಳನ್ನು ಕೆಡವಿದ್ದಾರಲ್ಲಾ’” ಎಂಬ ಪ್ರಲಾಪಧ್ವನಿಯು ಚೀಯೋನಿನೊಳಗಿಂದ ಕೇಳಿಸುತ್ತದೆ.


ನೀನು, ನಿನ್ನ ಅಕ್ಕನ ಮಾರ್ಗದಲ್ಲಿ ನಡೆದುಕೊಂಡಿದ್ದರಿಂದ ಅವಳು ಕುಡಿದ ಪಾತ್ರೆಯನ್ನೇ ನಿನ್ನ ಕೈಗೆ ಕೊಡುವೆನು.”


ಅವರು ನನ್ನಿಂದ ಅಗಲಿ ಹೋಗಿದ್ದಾರೆ, ಹಾಳಾಗಲಿ! ನನಗೆ ದ್ರೋಹಮಾಡಿದ್ದಾರೆ, ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದು ಇರುವಾಗಲೂ ನನ್ನ ವಿಷಯವಾಗಿ ಸುಳ್ಳಾಡಿದ್ದಾರೆ, ಅವರನ್ನು ಹೇಗೆ ಉದ್ಧರಿಸಲಿ!


ತೂರು ಹೇಗೆ ಕಾಣಿಸುತ್ತದೋ ಹಾಗೆಯೇ ಎಫ್ರಾಯೀಮು ಹುಲ್ಗಾವಲಿನಲ್ಲಿ ನೆಟ್ಟಿರುವುದಾಗಿ ಕಾಣಿಸುತ್ತದೆ; ಆದರೆ ಎಫ್ರಾಯೀಮು ತನ್ನ ಮಕ್ಕಳನ್ನು ಹತ್ಯಗೆ ಈಡಾಗುವಂತೆ ಕಳುಹಿಸುವುದು.


‘ನಿನ್ನ ಸಾನ್ನಿಧ್ಯದಿಂದ ತಳ್ಳಲ್ಪಟ್ಟಿದ್ದೇನೆ ಎಂದುಕೊಂಡೆನು; ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಪುನಃ ಹೇಗೆ ನೋಡುವೆನು?’


ಪ್ರವಾದಿಯಾಗಲಿ ಅಥವಾ ಯಾಜಕನಾಗಲಿ ಈ ಜನರಲ್ಲಿ ಯಾರೇ ಆಗಲಿ “ಯೆಹೋವನು ದಯಪಾಲಿಸಿರುವ ವಾಕ್ಯದ ಆಧಾರವೇನು?” ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆ ಹೇಳು, “ಯೆಹೋವನು ಇಂತೆನ್ನುತ್ತಾನೆ, ನೀವೇ ನನ್ನ ಹೊರೆ, ನಾನು ನಿಮ್ಮನ್ನು ಎಸೆದುಬಿಡುವೆನು.


ಆದುದರಿಂದ ನೀನು ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಲ್ಲವೇ? ವಿಗ್ರಹಗಳ ಕಡೆಗೆ ನಿಮ್ಮ ಕಣ್ಣೆತ್ತಿ ನೋಡುತ್ತೀರಿ ಜನರ ರಕ್ತವನ್ನು ಚೆಲ್ಲುತ್ತೀರಿ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು