Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ನೀನಂತು ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಬೇಡ, ನನಗೆ ವಿಜ್ಞಾಪಿಸಲೂ ಬೇಡ, ನಾನು ಕೇಳೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಯೆರೆಮೀಯನೇ, ನೀನಂತು ಈ ಜನರಿಗಾಗಿ ಬೇಡಿಕೊಳ್ಳಬೇಡ. ಇವರ ಪರವಾಗಿ ಮೊರೆ ಇಡಬೇಡ. ಪ್ರಾರ್ಥಿಸಲೂ ಬೇಡ, ನನ್ನ ಬಳಿ ವಿಜ್ಞಾಪಿಸಲೂ ಬೇಡ. ನಾನು ಅದನ್ನು ಕೇಳಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀನಂತು ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಬೇಡ, ನನಗೆ ವಿಜ್ಞಾಪಿಸಲೂಬೇಡ, ನಾನು ಕೇಳಲೊಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಯೆರೆಮೀಯನೇ, ನೀನು ಈ ಯೆಹೂದದ ಜನರಿಗಾಗಿ ಪ್ರಾರ್ಥಿಸಬೇಡ; ಇವರಿಗಾಗಿ ಮೊರೆಯಿಡಬೇಡ; ಇವರಿಗಾಗಿ ಬೇಡಿಕೊಳ್ಳಬೇಡ; ಇವರಿಗಾಗಿ ನೀನು ಮಾಡುವ ಪ್ರಾರ್ಥನೆಯನ್ನು ನಾನು ಕೇಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಆದ್ದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ. ಅವರಿಗೋಸ್ಕರ ಮೊರೆಯನ್ನೂ, ಪ್ರಾರ್ಥನೆಯನ್ನೂ ಎತ್ತಬೇಡ. ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ. ಏಕೆಂದರೆ ನಾನು ಅದನ್ನು ಕೇಳಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:16
14 ತಿಳಿವುಗಳ ಹೋಲಿಕೆ  

ಆದಕಾರಣ ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂ ಬೇಡ. ಅವರು ತಮ್ಮ ಕೇಡಿನ ನಿಮಿತ್ತ ನನಗೆ ಮೊರೆಯಿಡುವಾಗ ನಾನು ಕೇಳುವುದಿಲ್ಲ” ಎಂದು ಹೇಳಿದನು.


ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!


ಆದಕಾರಣ ನೀನು ನನ್ನನ್ನು ತಡೆಯಬೇಡ. ನನ್ನ ಕೋಪಾಗ್ನಿ ಉರಿಯಲಿ, ಅವರನ್ನು ಭಸ್ಮಮಾಡಿಬಿಡುವೆನು. ತರುವಾಯ ನಿನ್ನಿಂದಲೇ ಒಂದು ಮಹಾ ಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.


ಒಳ್ಳೆಯದನ್ನು ಮಾಡಿದ್ದಕ್ಕೆ ಕೇಡಿನ ಪ್ರತಿಫಲ ಅಗತ್ಯವೇ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ನೆನಪಿಗೆ ತಂದುಕೋ.


ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವುದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ. ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳಬೇಕೆಂದು ನಾನು ಹೇಳುವುದಿಲ್ಲ.


ಇಷ್ಟೆಲ್ಲಾ ನಡೆಸಿ ಇವರು ಯೆಹೋವನಿಗೆ ಮೊರೆಯಿಡಲು ಆತನು ಇವರಿಗೆ ಉತ್ತರಕೊಡನು. ಇವರ ನಡತೆಯ ದುಷ್ಕೃತ್ಯಗಳಿಗೆ ತಕ್ಕ ಹಾಗೆ ಆ ಕಾಲದಲ್ಲಿ ಇವರಿಗೆ ವಿಮುಖನಾಗುವೆನು.”


ಬಿಡು, ನಾನು ಅವರನ್ನು ನಾಶಮಾಡಿ, ಅವರ ಹೆಸರನ್ನು ಭೂಮಿಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾ ಬಲಿಷ್ಠ ಜನಾಂಗವು ನಿನ್ನಿಂದುಂಟಾಗುವಂತೆ ಮಾಡುವೆನು” ಎಂದು ಹೇಳಿದನು.


ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ರಾಜನ ಮುಖ್ಯಸಲಹೆಗಾರರಾಗಿದ್ದರು.


ಇವರು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡುವುದನ್ನು ನೀನು ನೋಡಲಿಲ್ಲವೋ?


ಯೆಹೋವನ ಈ ಮಾತನ್ನು ಕೇಳು, ‘ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದಿ. ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಯಿತು.


ಇದಕ್ಕಾಗಿ ಭೂಲೋಕವು ಪ್ರಲಾಪಿಸುವುದು, ಮೇಲೆ ಆಕಾಶವು ಕಪ್ಪಾಗುವುದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಇದರಿಂದ, ಹಿಂದೆಗೆಯನು” ಎಂದು ನುಡಿಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು