Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ‘ಗಗನದೊಡತಿ’ ಎಂದು ಇವರು ಕರೆದ ದೇವತೆಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಅವರ ಮಕ್ಕಳು ಸೌದೆಯನ್ನು ಆಯ್ದು ತರುತ್ತಾರೆ. ಗಂಡಸರು ಬೆಂಕಿ ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದುತ್ತಾರೆ. ನನ್ನನ್ನು ಕೆಣಕಬೇಕೆಂದೇ ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೂದದ ಜನರು ಹೀಗೆ ಮಾಡುತ್ತಿದ್ದಾರೆ; ಮಕ್ಕಳು ಸೌದೆಯನ್ನು ಆರಿಸುತ್ತಾರೆ. ತಂದೆಗಳು ಆ ಸೌಧೆಯಿಂದ ಬೆಂಕಿಯನ್ನು ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದಿ ಸ್ವರ್ಗದ ರಾಣಿಗಾಗಿ ಹೋಳಿಗೆಗಳನ್ನು ಮಾಡುತ್ತಾರೆ. ಈ ಯೆಹೂದದ ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ. ಅವರು ನನ್ನನ್ನು ರೇಗಿಸುವದಕ್ಕಾಗಿಯೇ ಹೀಗೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ‘ಗಗನದ ಒಡತಿ,’ ಎಂದು ಇವರು ಕರೆಯುವ ದೇವತೆಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಅವರ ಮಕ್ಕಳು ಸೌದೆಯನ್ನು ಆಯ್ದು ತರುತ್ತಾರೆ. ಗಂಡಸರು ಬೆಂಕಿ ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದುತ್ತಾರೆ. ನನ್ನನ್ನು ಕೆಣಕಬೇಕೆಂದೇ ಅನ್ಯ ದೇವತೆಗಳಿಗೆ ಪಾನ ನೈವೇದ್ಯವನ್ನು ಅರ್ಪಿಸುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:18
28 ತಿಳಿವುಗಳ ಹೋಲಿಕೆ  

ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.’”


ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?


ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದಿ. ನನ್ನನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ.


ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಹಚ್ಚಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ, ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.


ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ಕೆಣಕಿ ನಿಮಗೆ ನೀವೇ ಕೇಡನ್ನು ತಂದುಕೊಂಡಿದ್ದೀರಿ” ಎಂದು ಹೇಳಿದನು.


ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ, ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡಿದ್ದರಿಂದ ನಿನ್ನನ್ನು ನೆಟ್ಟ ಸೇನಾಧೀಶ್ವರನಾದ ಯೆಹೋವನು, “ನಿನಗೆ ಕೆಡುಕಾಗಲಿ” ಎಂದು ಶಪಿಸಿದ್ದಾನೆ.


ಏಕೆಂದರೆ ಯೆರೂಸಲೇಮ್ ಹಾಳಾಯಿತು. ಯೆಹೂದವು ಬಿದ್ದುಹೋಯಿತು. ಅವರ ನಡೆನುಡಿಗಳು ಯೆಹೋವನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿಯನ್ನು ಕೆರಳಿಸುತ್ತದಲ್ಲವೇ?


“ನಾನು ನಿನ್ನನ್ನು ಧೂಳಿನಿಂದ ಎತ್ತಿ, ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನನ್ನಾಗಿ ಮಾಡಿದರೂ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ನನ್ನ ಜನರಾದ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿರುವೆ. ಅವರ ಪಾಪದ ಮೂಲಕವಾಗಿ ನನಗೆ ಕೋಪವನ್ನೆಬ್ಬಿಸಿದ್ದಿ.


ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಕೋಪಹುಟ್ಟಿಸುವೆನು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.


ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು.


ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯ, ಚಂದ್ರ ಅಥವಾ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂ ಬಾರದು ಮತ್ತು ನಮಸ್ಕರಿಸಲೂ ಬಾರದು.


ನಾನು ಪ್ರಮಾಣ ಪೂರ್ವಕವಾಗಿ ಅವರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧ ಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಅರ್ಪಿಸುತ್ತಿದ್ದರು.’


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವೆವು ಎಂದು ನಾವು ಮಾಡಿಕೊಂಡ ಹರಕೆಗಳನ್ನು ಖಂಡಿತವಾಗಿ ತೀರಿಸುವೆವು ಎಂಬುದಾಗಿ ನೀವೂ, ನಿಮ್ಮ ಹೆಂಡತಿಯರೂ ಬಾಯಿಂದ ಪ್ರತಿಜ್ಞೆಮಾಡಿ ಕೈಯಿಂದ ನೆರವೇರಿಸಿದ್ದೀರಲ್ಲಾ; ನಿಮ್ಮ ಹರಕೆಗಳನ್ನು ಖಂಡಿತವಾಗಿ ತೀರಿಸಿರಿ, ನೆರವೇರಿಸೇ ನೆರವೇರಿಸಿರಿ!


ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಏರ್ಪಡಿಸಿ, ಗತಿದಾಯಕ ದೇವತೆಗೆ ಮದ್ಯವನ್ನು ಬೆರಸಿದ ನಿಮಗೆ ಕತ್ತಿಯನ್ನೇ ಗತಿಯಾಗ ಮಾಡುವೆನು.


ಈ ಜನರು ವನಗಳಲ್ಲಿ ಯಜ್ಞ ಮಾಡುತ್ತಾ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪಹಾಕುತ್ತಾ ನನ್ನನ್ನು ಯಾವಾಗಲೂ ಕೆಣಕುತ್ತಾರೆ.


ಕೆಟ್ಟ ಸಂತಾನವೇ, ಹೊಳೆಯ ನುಣುಪಾದ ಕಲ್ಲುಗಳೇ ನಿನಗೆ ಗತಿ, ಅವುಗಳೇ ನಿನ್ನ ಪಾಲು; ಅವುಗಳಿಗೆ ನೀನು ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದು, ಧಾನ್ಯದ್ರವ್ಯವನ್ನು ಅರ್ಪಿಸಿದ್ದಿ. ನಾನು ಇದನ್ನೆಲ್ಲಾ ನೋಡಿ ಕೋಪವನ್ನು ಅಡಗಿಸಿಕೊಳ್ಳಲು ಆಗುವುದೇ?


ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು. ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವುದೇ ಇಲ್ಲ; ಅವರ ನಾಮಗಳನ್ನಾದರೂ ಉಚ್ಚರಿಸುವುದಿಲ್ಲ.


ಇವರು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡುವುದನ್ನು ನೀನು ನೋಡಲಿಲ್ಲವೋ?


ಅವರ ಮಕ್ಕಳು ಸೊಂಪಾಗಿ ಬೆಳೆದಿರುವ ಮರಗಳನ್ನು ಎತ್ತರವಾದ ಗುಡ್ಡಗಳನ್ನು ಕಂಡಾಗೆಲ್ಲಾ, ಅವರ ಯಜ್ಞವೇದಿಗಳನ್ನು ಮತ್ತು ಅಶೇರ ವಿಗ್ರಹಸ್ತಂಭಗಳನ್ನು ಜ್ಞಾಪಿಸಿಕೊಳ್ಳುವರು.


ಯುವಭಟರಿಗೆ ಬೀಸುವ ಕಲ್ಲನ್ನು ಹೊರುವ ಗತಿ ಬಂತು; ಮಕ್ಕಳು ಸೌದೆಹೊರೆ ಹೊತ್ತು ಮುಗ್ಗರಿಸಬೇಕಾಯಿತು.


ಆಗ ಆತನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಯೆಹೂದ ವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಕೊಂಬೆಗಳನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.


ನಿನ್ನ ನೆರೆಯವರೂ ಅತಿಕಾಮಿಗಳೂ ಆದ ಐಗುಪ್ತ್ಯರೊಂದಿಗೆ ಸಹ ನೀನು ಬೆರೆತು ಹೆಚ್ಚಾಗಿ ವ್ಯಭಿಚಾರಮಾಡಿ ನನ್ನನ್ನು ರೇಗಿಸಿರುವೆ.


ನನ್ನ ಜನರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದವುಗಳಿಗೆ ಅಡ್ಡಬಿದ್ದ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು.


ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡ ಮಾಡದೆ ಕಳುಹಿಸುತ್ತಾ, ‘ಆಹಾ! ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ’ ಎಂದು ಪ್ರಕಟಿಸುತ್ತಾ ಬಂದರೂ,


ಆತನು ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆತಂದನು; ಇಗೋ, ಯೆಹೋವನ ಆಲಯದ ಬಾಗಿಲ ಮುಂದೆ ಮಂಟಪಕ್ಕೂ ಮತ್ತು ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಆಲಯಕ್ಕೆ ಬೆನ್ನು ಮಾಡಿ ಪೂರ್ವದ ಕಡೆಗೆ ಮುಖ ಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು