ಯೆರೆಮೀಯ 7:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
23 ಆದರೆ, ‘ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ’ ಎಂಬ ಈ ಒಂದು ಅಪ್ಪಣೆಯನ್ನು ಮಾತ್ರ ಕೊಟ್ಟೆನು.
23 ನಾನು ಕೊಟ್ಟ ಒಂದು ಕಟ್ಟಳೆಯೆಂದರೆ ಇದು - ನನ್ನ ಮಾತಿಗೆ ಕಿವಿಗೊಡಿ, ನಾನು ನಿಮ್ಮ ದೇವರಾಗಿರುತ್ತೇನೆ, ನೀವು ನನ್ನ ಪ್ರಜೆಯಾಗಿರಿ. ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೆ ನಡೆಯಿರಿ.
23 ಆದರೆ ಈ ಒಂದಪ್ಪಣೆಯನ್ನು ಮಾತ್ರ ಕೊಟ್ಟೆನು - ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ.
23 ನಾನು ಅವರಿಗೆ, ‘ನನಗೆ ವಿಧೇಯರಾಗಿರಿ. ನಾನು ನಿಮಗೆ ದೇವರಾಗಿರುತ್ತೇನೆ, ನೀವು ನನ್ನ ಭಕ್ತರಾಗಿರುತ್ತೀರಿ. ನಾನು ಆಜ್ಞಾಪಿಸಿದ್ದನ್ನೆಲ್ಲವನ್ನು ಮಾಡಿರಿ, ಅದರಿಂದ ನಿಮಗೆ ಒಳ್ಳೆಯದಾಗುವುದು’ ಎಂದು ಮಾತ್ರ ಆಜ್ಞಾಪಿಸಿದ್ದೆ.
23 ಆದರೆ ನಾನು ಇದನ್ನು ಅವರಿಗೆ, “ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು; ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೆಯದಾಗುವಂತೆ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ,” ಎಂದು ಆಜ್ಞಾಪಿಸಿ ಹೇಳಿದೆನು.
ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.
ನಮ್ಮ ದೇವರಾದ ಯೆಹೋವನ ಮಾತು ಹಿತವಾಗಲಿ ಅಥವಾ ಅಹಿತವಾಗಲಿ ಆತನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನಿನ್ನನ್ನು ಕಳುಹಿಸುವ ನಾವು ಅದನ್ನು ಕೈಕೊಳ್ಳುವೆವು; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಿದರೆ ನಮಗೆ ಶುಭವಾಗುವುದು” ಎಂಬುದಾಗಿ ಹೇಳಿದರು.
ಆದುದರಿಂದ ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವುದಕ್ಕೂ, ನೀವು ಬಹಳವಾಗಿ ಹೆಚ್ಚುವುದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.
ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ಮಾತಿಗೆ ವಿಧೇಯರಾಗಿರಿ, ಆತನನ್ನು ಹೊಂದಿಕೊಂಡೇ ಇರಿ. ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವುದಕ್ಕೂ ಬಹುಕಾಲ ಇರುವುದಕ್ಕೂ ಆತನೇ ಆಧಾರ” ಎಂದು ಹೇಳಿದನು.
ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನಿಮ್ಮ ಪೂರ್ವಿಕರನ್ನು ಬರಮಾಡಿದಾಗ ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ಈ ವಿಧಿಗಳನ್ನೆಲ್ಲಾ ಕೈಕೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ, ನಾನು ನಿಮ್ಮ ದೇವರಾಗಿರುವೆನು.
ಆ ಸಂಗತಿಗಳು ಯಾವುವೆಂದರೆ, ನೀವು ಹೋರೇಬಿನಲ್ಲಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದಾಗ ಆತನು ನನಗೆ, “ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕೂಡಿಸು; ಅವರು ತಾವು ಭೂಮಿಯ ಮೇಲಿರುವ ದಿನಗಳಲ್ಲೆಲ್ಲಾ ನನಗೆ ಭಯಭಕ್ತಿಯಿಂದಿರುವುದಕ್ಕೆ ಕಲಿತುಕೊಂಡು ತಮ್ಮ ಮಕ್ಕಳಿಗೂ ಕಲಿಸಿಕೊಡುವಂತೆ ಅವರಿಗೆ ಆಜ್ಞೆಗಳನ್ನು ತಿಳಿಸುತ್ತೇನೆ” ಎಂದು ಹೇಳಿದನು.
ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.
“ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಕ್ಷೇಮವಾಗಿ ಇರುವಿ, ಮತ್ತು ನಿನಗೆ ಒಳ್ಳೆಯದಾಗುವುದು.
ಮೋಶೆಯು ಜನರಿಗೆ, “ಯೆಹೋವನು ಆಜ್ಞಾಪಿಸಿದ್ದು ಇದೇ, ‘ನಾನು ಐಗುಪ್ತ ದೇಶದಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಮರುಭೂಮಿಯಲ್ಲಿ ತಿನ್ನುವುದಕ್ಕೆ ಕೊಟ್ಟ ಆಹಾರವನ್ನು ನಿಮ್ಮ ಸಂತಾನದವರು ನೋಡುವ ಹಾಗೆ ಅವರಿಗಾಗಿ ನೀವು ಒಂದು ಸೇರು ಮನ್ನವನ್ನು ತುಂಬಿಸಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು’” ಎಂದು ಹೇಳಿದನು.
ಸಮಸ್ತ ಇಸ್ರಾಯೇಲ್ ವಂಶವೂ ಮತ್ತು ಸಕಲ ಯೆಹೂದ ವಂಶವೂ ನನ್ನ ಪ್ರಜೆಯಾಗಿದ್ದು ನನಗೆ ಹೆಸರೂ, ಸ್ತೋತ್ರವೂ, ಮಹಿಮೆಯೂ ಆಗಿರಲೆಂದು ನಡುಕಟ್ಟನ್ನು ಸೊಂಟಕ್ಕೆ ಬಿಗಿದಿರುವಂತೆ ಇವರನ್ನು ಬಿಗಿದುಕೊಂಡಿದ್ದೇನೆ; ಆದರೂ ಇವರು ಕೇಳದೆ ಹೋದರು ಎಂದು ಯೆಹೋವನು ನುಡಿಯುತ್ತಾನೆ” ಎಂಬುದೇ.
ಯೆಹೋವನು, ನೀತಿ, ನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ವಿದೇಶಿ, ಅನಾಥ, ವಿಧವೆ ಇವರಿಗೆ ಯಾವ ಅನ್ಯಾಯವನ್ನೂ ಮತ್ತು ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿರಿ” ಎಂದು ಹೇಳುತ್ತಾನೆ.
ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು” ಎಂಬುದೇ.
ದೂರದಲ್ಲಿರುವವರು ಬಂದು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಕೈಹಾಕುವರು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತನು ಸೇನಾಧೀಶ್ವರನಾದ ಯೆಹೋವನೇ ಎಂದು ನಿಮಗೆ ದೃಢವಾಗುವುದು. ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮನಃಪೂರ್ವಕವಾಗಿ ಕೇಳಿದರೆ ಇದೆಲ್ಲಾ ನೆರವೇರುವುದು.’”
ಯೆರೂಸಲೇಮು ಸುತ್ತಣ ಪಟ್ಟಣಗಳ ಸಮೇತ ಜನಭರಿತವಾಗಿಯೂ, ನೆಮ್ಮದಿಯಾಗಿಯೂ ಇದ್ದು, ದಕ್ಷಿಣ ಪ್ರಾಂತ್ಯದಲ್ಲಿಯೂ, ಪೂರ್ವದ ಇಳಕಲಿನ ಪ್ರದೇಶದಲ್ಲಿಯೂ ಜನರು ತುಂಬಿದ್ದಾಗ ಆ ಪೂರ್ವಕಾಲದ ಪ್ರವಾದಿಗಳ ಮೂಲಕ ಯೆಹೋವನು ಪ್ರಕಟಿಸಿದ ಮಾತುಗಳನ್ನು ನೀವು ಕೇಳಿಲ್ಲವೇ?’”
ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ, ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.
ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಿ.