Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದುವರಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ತಮ್ಮ ಸ್ವಂತ ಆಲೋಚನೆಗಳನ್ನು ಅನುಸರಿಸಿದರು. ತಮ್ಮ ದುಷ್ಟಹೃದಯದ ನಿಮಿತ್ತ ಹಟಮಾರಿಗಳಂತೆ ನಡೆದುಕೊಂಡರು. ಮುಂದೆ ಸಾಗದೆ ಹಿಂದಿರುಗಿಯೇ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದರಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಆದರೆ ನಿಮ್ಮ ಪೂರ್ವಿಕರು ನನ್ನ ಮಾತನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಮೊಂಡರಾಗಿದ್ದು ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಂಡರು. ಅವರು ಒಳ್ಳೆಯವರಾಗಲಿಲ್ಲ. ಅವರು ಇನ್ನೂ ಕೆಟ್ಟವರಾದರು. ಅವರು ಹಿಂದಕ್ಕೆ ಸರಿದರು, ಮುಂದಕ್ಕೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ಆದರೆ ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ, ಕಲ್ಪನೆಯ ಪ್ರಕಾರವೂ ನಡೆದುಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:24
37 ತಿಳಿವುಗಳ ಹೋಲಿಕೆ  

ಈ ಜನರು, ಯೆರೂಸಲೇಮ್ ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರುಗಿ ಬರುವುದಿಲ್ಲ.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪೂರ್ವಿಕರಿಗಿಂತಲೂ ಕೆಟ್ಟವರಾಗಿ ನಡೆದರು.


ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, ‘ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವುದು’ ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ಮತ್ತು ನಿರ್ದೋಷಿಗಳಿಗೂ ನಾಶನವನ್ನು ಉಂಟುಮಾಡುವವನಾಗಿರುತ್ತಾನೆ.


“‘ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿ ಬಿದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇಮಿಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಇವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು’ ಅಂದುಕೊಂಡೆನು.


ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲಿಲ್ಲ ಮತ್ತು ನನಗೆ ಕಿವಿಗೊಡಲೇ ಇಲ್ಲ.


ಇಸ್ರಾಯೇಲು ಮೊಂಡ ಹಸುವಿನಂತೆ ಮೊಂಡುತನದಿಂದ ನಡೆದಿದೆ; ಈಗ ಯೆಹೋವನು ಅದನ್ನು ಕುರಿಯಂತೆ ವಿಶಾಲ ಸ್ಥಳದಲ್ಲಿ ಮೇಯಿಸುವನೋ?


“ಆದರೆ ಆ ಸಂತಾನದವರಾದರೋ ನನ್ನ ಮೇಲೆ ತಿರುಗಿ ಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದರು; ಆದುದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು” ಅಂದುಕೊಂಡೆನು.


“‘ಅವರಾದರೋ ನನ್ನ ಮಾತನ್ನು ನಿರಾಕರಿಸಿ, ನನ್ನ ಮೇಲೆ ತಿರುಗಿ ಬಿದ್ದರು; ತಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ, ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತ ದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಅಂದುಕೊಂಡೆನು.


ಯೆಹೋವನ ಈ ಮಾತನ್ನು ಕೇಳು, ‘ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದಿ. ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಯಿತು.


ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ಜನಾಂಗಗಳವರು ನೆರೆದು ಬರುವರು; ಅವರು ಇನ್ನು ಮೇಲೆ ತಮ್ಮ ದುಷ್ಟ ಹೃದಯದ ಹಟದಂತೆ ನಡೆಯರು.


ಅವರು ನನ್ನ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ, “ಎದ್ದು ನಮ್ಮನ್ನು ಉದ್ಧರಿಸು” ಎಂದು ಮೊರೆಯಿಡುವರು.


ನಿನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಅವರನ್ನು ಎಚ್ಚರಿಸಿದೆ. ಆದರೂ ಅವರು ಲಾಲಿಸದೆ ಗರ್ವಿಗಳೂ, ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು. ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿನ್ಯಾಯಗಳನ್ನು ಮೀರಿ ಪಾಪಮಾಡಿ ಮೊಂಡು ಬಿದ್ದು ನಿನ್ನ ಮಾತುಗಳನ್ನು ಕೇಳದೆ ಹೋದರು.


ಏಕೆಂದರೆ ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತರಾಗಿ, ಅವರು ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದವರಾಗಿದ್ದರು.


ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ’ ಎಂದು ಹೇಳುತ್ತಲೇ ಇದ್ದಾರೆ. ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.


ಅವರು ಧರ್ಮದ ಮಾರ್ಗದಲ್ಲಿ ನಡೆಯದೆ, ಸ್ವಂತ ಹೃದಯದ ಹಟದಂತೆ ನಡೆದು, ತಮ್ಮ ಪೂರ್ವಿಕರು ತಮಗೆ ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.


ಸಮಸ್ತ ಇಸ್ರಾಯೇಲ್ ವಂಶವೂ ಮತ್ತು ಸಕಲ ಯೆಹೂದ ವಂಶವೂ ನನ್ನ ಪ್ರಜೆಯಾಗಿದ್ದು ನನಗೆ ಹೆಸರೂ, ಸ್ತೋತ್ರವೂ, ಮಹಿಮೆಯೂ ಆಗಿರಲೆಂದು ನಡುಕಟ್ಟನ್ನು ಸೊಂಟಕ್ಕೆ ಬಿಗಿದಿರುವಂತೆ ಇವರನ್ನು ಬಿಗಿದುಕೊಂಡಿದ್ದೇನೆ; ಆದರೂ ಇವರು ಕೇಳದೆ ಹೋದರು ಎಂದು ಯೆಹೋವನು ನುಡಿಯುತ್ತಾನೆ” ಎಂಬುದೇ.


ಇಗೋ, ನೀವೆಲ್ಲರೂ ನಿಮ್ಮ ದುಷ್ಟಹೃದಯದ ಹಟದಂತೆ ನಡೆಯುತ್ತಾ ನನ್ನನ್ನು ಕೇಳದೆ ನಿಮ್ಮ ಪೂರ್ವಿಕರಿಗಿಂತ ಹೆಚ್ಚು ಕೇಡನ್ನು ಮಾಡಿದ್ದರಿಂದಲೂ,


ಅವರಾದರೋ ಕಿವಿಗೊಟ್ಟು ಕೇಳಲಿಲ್ಲ, ಕೇಳಲಿಕ್ಕಾಗಲಿ ಉಪದೇಶ ಹೊಂದಲಿಕ್ಕಾಗಲಿ ಒಪ್ಪಲಿಲ್ಲ.


ಅದು ನನ್ನ ಮಾತನ್ನು ಕೇಳದೆ, ನನ್ನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದರೆ ನಾನು ಮನಸ್ಸನ್ನು ಬದಲಾಯಿಸಿಕೊಂಡು ಅದಕ್ಕೆ ಮಾಡಬೇಕೆಂದಿದ್ದ ಮೇಲನ್ನು ಮಾಡದೆ ಇರುವೆನು.


ಅವರೋ, ‘ಏನೂ ನಿರೀಕ್ಷೆಯಿಲ್ಲ; ನಮ್ಮ ಆಲೋಚನೆಗಳಿಗೆ ತಕ್ಕಂತೆ ನಡೆಯುವೆವು, ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ನಮ್ಮ ದುಷ್ಟ ಹೃದಯದ ಹಾಗೆ ಮಾಡುವೆವು’ ಎಂದು ಹೇಳುತ್ತಾರೆ.”


ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಅದು ಜಗಳಗಂಟ ಮಹಾರಾಜನಿಗೆ ಕಾಣಿಕೆಯಾಗಿ ಅಶ್ಶೂರಕ್ಕೆ ಒಯ್ಯಲ್ಪಡುವುದು. ಎಫ್ರಾಯೀಮಿಗೆ ಅವಮಾನವಾಗುವುದು, ಇಸ್ರಾಯೇಲ್ ತಾನು ಸಂಕಲ್ಪಿಸಿಕೊಂಡ ವಿಷಯಕ್ಕಾಗಿ ನಾಚಿಕೆಪಡುವುದು.


ಒಮ್ರಿ ರಾಜನ ನಿಯಮಗಳೂ ಮತ್ತು ಅಹಾಬನ ಮನೆತನದ ಸಕಲ ಆಚಾರಗಳೂ ನಿನ್ನಲ್ಲಿ ಸಲ್ಲುತ್ತಿವೆ. ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ. ಆದಕಾರಣ ನಾನು ನಿನ್ನನ್ನು ಬೆರಗಿಗೂ, ನಿನ್ನ ನಿವಾಸಿಗಳನ್ನು ಅಪಹಾಸ್ಯಕ್ಕೂ ಗುರಿಮಾಡುವೆನು. ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.”


ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಮಾತನ್ನು ಕೇಳಿ, ನನ್ನ ಮಾರ್ಗದಲ್ಲಿ ನಡೆದರೆ ಎಷ್ಟೋ ಒಳ್ಳೆಯದು!


ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ.


ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.


ನನ್ನ ಮಾತುಗಳನ್ನು ಕೇಳದೆ ತಮ್ಮ ಹೃದಯದ ಹಟದಂತೆ ನಡೆದು, ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಮಾನವಾಗಿರುವರು.


ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು?


ನಾನು ನೆಮ್ಮದಿಯಲ್ಲಿ ನಿನ್ನೊಡನೆ ಮಾತನಾಡಿದಾಗ “ನಾನು ಕೇಳುವುದಿಲ್ಲ” ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವುದು ನಿನಗೆ ಬಾಲ್ಯದಿಂದಲೇ ಅಭ್ಯಾಸ.


ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಿ.


ನಮ್ಮ ಅರಸರು, ಪ್ರಧಾನರು, ಹಿರಿಯರು, ಸಾಮಾನ್ಯ ಜನರು, ಇವರಿಗೆಲ್ಲ ನಿನ್ನ ಹೆಸರಿನ ನಿಮಿತ್ತ ನುಡಿದ ನಿನ್ನ ಸೇವಕರಾದ ಪ್ರವಾದಿಗಳ ಕಡೆಗೆ ಕಿವಿಗೊಡಲೇ ಇಲ್ಲ.


“ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು