Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ನಿಮ್ಮ ಪೂರ್ವಿಕರು ಐಗುಪ್ತ ದೇಶದೊಳಗಿಂದ ಹೊರಟ ದಿನ ಮೊದಲುಗೊಂಡು ಈ ದಿನದವರೆಗೂ ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮವರ ಬಳಿಗೆ ಕಳುಹಿಸುತ್ತಾ ಬಂದಿದ್ದೇನೆ, ದಿನ ದಿನವೂ ತಡ ಮಾಡದೆ ಕಳುಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನಿಮ್ಮ ಪೂರ್ವಜರು ಈಜಿಪ್ಟ್ ದೇಶದಿಂದ ಹೊರಟದಿನ ಮೊದಲುಗೊಂಡು ಈ ದಿನದವರೆಗೂ ನನ್ನ ದಾಸರಾದ ಎಲ್ಲ ಪ್ರವಾದಿಗಳನ್ನು ನಿಮ್ಮವರ ಬಳಿಗೆ ಕಳಿಸುತ್ತಾ ಬಂದು ಇದ್ದೇನೆ. ದಿನದಿನವೂ ತಡಮಾಡದೆ ಕಳಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಿಮ್ಮ ಪಿತೃಗಳು ಐಗುಪ್ತದೇಶದೊಳಗಿಂದ ಹೊರಟ ದಿನ ಮೊದಲುಗೊಂಡು ಈ ದಿನದವರೆಗೂ ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮವರ ಬಳಿಗೆ ಕಳುಹಿಸುತ್ತಾ ಬಂದಿದ್ದೇನೆ, ದಿನ ದಿನವೂ ಸಾವಕಾಶ ಮಾಡದೆ ಕಳುಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಿಮ್ಮ ಪೂರ್ವಿಕರು ಈಜಿಪ್ಟನ್ನು ಬಿಟ್ಟ ದಿನದಿಂದ ಇಂದಿನವರೆಗೂ ನಾನು ನಿಮ್ಮಲ್ಲಿಗೆ ನನ್ನ ಸೇವಕರನ್ನು ಕಳುಹಿಸಿದ್ದೇನೆ. ನನ್ನ ಸೇವಕರು ಪ್ರವಾದಿಗಳಾಗಿದ್ದಾರೆ. ನಾನು ಅವರನ್ನು ಮತ್ತೆಮತ್ತೆ ನಿಮ್ಮಲ್ಲಿಗೆ ಕಳುಹಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಿಮ್ಮ ಪಿತೃಗಳು ಈಜಿಪ್ಟ್ ದೇಶವನ್ನು ಬಿಟ್ಟುಹೋದ ದಿನದಿಂದ ಇಂದಿನವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ಪ್ರತಿದಿನವೂ ನಿಮ್ಮ ಬಳಿಗೆ ಕಳುಹಿಸುತ್ತಾ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:25
30 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ತಪ್ಪದೆ ಕಳುಹಿಸುತ್ತಿದ್ದರೂ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು.


ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನನ್ನ ವಿರುದ್ಧವಾಗಿ ತಿರುಗಿಬಿದ್ದು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ; ಈ ದಿನದವರೆಗೆ ಅವರೂ, ಅವರ ಪೂರ್ವಿಕರೂ ನನ್ನ ವಿರುದ್ಧವಾಗಿ ಪಾಪಮಾಡುತ್ತಲೇ ಇದ್ದಾರೆ.


ನಾನು ಸಾವಕಾಶ ಮಾಡದೆ ನಿಮಗೆ ನುಡಿದ ಮಾತುಗಳನ್ನು ನೀವು ಕೇಳದೆ, ನಿಮ್ಮನ್ನು ಕರೆದ ನನಗೆ ಉತ್ತರ ಕೊಡದೆ ಈ ಕೃತ್ಯಗಳನ್ನೆಲ್ಲಾ ನಡೆಸಿದಿರಿ.


ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು.


ನೀನು ಅನೇಕ ವರ್ಷಗಳ ತನಕ ಅವರ ವಿಷಯದಲ್ಲಿ ತಾಳ್ಮೆಯುಳ್ಳವನಾಗಿ ಪ್ರವಾದಿಗಳ ಮುಖಾಂತರ ಮಾತನಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟೆ.


ನಾವು ನಮ್ಮ ಪೂರ್ವಿಕರ ಕಾಲದಿಂದ ಇಂದಿನ ವರೆಗೂ ಮಹಾಪರಾಧಿಗಳೇ. ನಮ್ಮ ಪಾಪಗಳ ದೆಸೆಯಿಂದ ನಾವೂ, ನಮ್ಮ ಅರಸರೂ ಮತ್ತು ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಒಪ್ಪಿಸಲ್ಪಟ್ಟು ಈಗಿರುವಂತೆ ಕತ್ತಿಗೂ, ಸೆರೆಗೂ, ಸುಲಿಗೆಗೂ, ಅಪಮಾನಕ್ಕೂ ಗುರಿಯಾದೆವು.


ನೀವು ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಕೋಪಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿರಿ; ಅದನ್ನು ಮರೆಯಬೇಡಿರಿ. ನೀವು ಐಗುಪ್ತದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಯೆಹೋವನ ಆಜ್ಞೆಗಳನ್ನು ಧಿಕ್ಕರಿಸುವವರಾಗಿದ್ದೀರಿ.


ಆದುದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಕೊಲ್ಲುವರು, ಕೆಲವರನ್ನು ಹಿಂಸೆಪಡಿಸುವರು.’


ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಅವರ ಮುಖಾಂತರವಾಗಿ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.


ನನ್ನ ದ್ರಾಕ್ಷಿಯ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೂ ಹೆಚ್ಚಾಗಿ ಇನ್ನೇನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿಯ ಫಲವನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಏಕೆ ಕೊಟ್ಟಿತು?


ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ, ನನ್ನ ಮಾತನ್ನು ಕೇಳಿರಿ ಎಂದು ತಡ ಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ.


ಆತನು, “ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿನದವರೆಗೆ, ಇಪ್ಪತ್ತಮೂರು ವರ್ಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ; ಅದನ್ನು ನಿಮಗೆ ಪ್ರಕಟಿಸುತ್ತಲೇ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.


ಅವರು ನನ್ನ ಮಾತುಗಳನ್ನು ಕೇಳಲಿಲ್ಲವಲ್ಲಾ; ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಅವರ ಬಳಿಗೆ ತಪ್ಪದೆ ಕಳುಹಿಸಿ ಎಚ್ಚರಿಸುತ್ತಾ ಬಂದರೂ ಅವರು ಕೇಳಲೊಲ್ಲದೆ ಹೋದರು ಇದು ಯೆಹೋವನ ನುಡಿ.”


ರೇಕಾಬನ ಮಗನಾದ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ; ಅವರು ಇಂದಿನ ವರೆಗೂ ಕುಡಿಯಲಿಲ್ಲ, ತಮ್ಮ ಪಿತೃವಿನ ಆಜ್ಞೆಯನ್ನು ಕೈಕೊಂಡಿದ್ದಾರೆ; ನೀವೋ, ನಾನು ನಿಮಗೆ ಎಡೆಬಿಡದೆ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.


ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡ ಮಾಡದೆ ಕಳುಹಿಸುತ್ತಾ, ‘ಆಹಾ! ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ’ ಎಂದು ಪ್ರಕಟಿಸುತ್ತಾ ಬಂದರೂ,


ನಾನು ಪ್ರವಾದಿಗಳಿಗೆ ನುಡಿದಿದ್ದೇನೆ, ಬಹಳ ದಿವ್ಯದರ್ಶನಗಳನ್ನು ದಯಪಾಲಿಸಿದ್ದೇನೆ. ಪ್ರವಾದಿಗಳ ಮೂಲಕ ಸೂಚಕಕಾರ್ಯಗಳನ್ನು ನಡೆಸಿದ್ದೇನೆ.


ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ ಮತ್ತು ನಿಮ್ಮ ಯುವಕರಲ್ಲಿ ಪ್ರತಿಷ್ಠಿತರನ್ನೂ ಎಬ್ಬಿಸಿದೆನು. ಇಸ್ರಾಯೇಲಿನ ಜನರೇ, ಇದು ಸತ್ಯವಲ್ಲವೋ?” ಎಂದು ಯೆಹೋವನು ಅನ್ನುತ್ತಾನೆ.


“ನಿಮ್ಮ ಪೂರ್ವಿಕರ ಕಾಲದಿಂದಲೂ ನೀವು ನನ್ನ ವಿಧಿಗಳನ್ನು ಅನುಸರಿಸಿ ನಡೆಯಲ್ಲಿಲ್ಲ. ನನ್ನ ಕಡೆಗೆ ಪುನಃ ತಿರುಗಿರಿ; ತಿರುಗಿದರೆ, ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಯಾವ ವಿಷಯದಲ್ಲಿ ತಿರುಗೋಣ?” ಎನ್ನುತ್ತೀರಿ.


ನನ್ನ ಕಡೆಯಿಂದ ತಿರಿಗಿಕೊಳ್ಳುವುದು ನನ್ನ ಜನರ ಗುಣವೇ; ಅವರನ್ನು ಮೇಲಕ್ಕೆ ಕರೆಯುವವರು ಇದ್ದರೂ, ಮೇಲಕ್ಕೆತ್ತುವವರು ಯಾರೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು