ಯೆರೆಮೀಯ 7:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆದಕಾರಣ ನೀನು ಅವರಿಗೆ, ತಮ್ಮ ದೇವರಾದ ಯೆಹೋವನ ಧ್ವನಿಗೆ ಕಿವಿಗೊಡದೆ, ಶಿಕ್ಷಿತರಾಗದೆ ಇರುವ ಜನಾಂಗ ಇದುವೇ, ಸತ್ಯವು ಅವರ ಬಾಯಿಂದ ನಿರ್ಮೂಲವಾಗಿ ಅಳಿದುಹೋಗಿದೆ” ಎಂದು ಹೇಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಆದಕಾರಣ ನೀನು ಅವರಿಗೆ - ‘ತನ್ನ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದ, ದಂಡಿಸಿದರೂ ತಿದ್ದುಕೊಳ್ಳದ ಜನಾಂಗ ಇದುವೇ; ಸತ್ಯವೆಂಬುದು ಅಳಿದುಹೋಗಿದೆ, ಇದರ ಬಾಯಿಂದ ಕಡಿದುಹೋಗಿದೆ’ ಎಂದು ಹೇಳು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆದಕಾರಣ ನೀನು ಅವರಿಗೆ - ತಮ್ಮ ದೇವರಾದ ಯೆಹೋವನ ಧ್ವನಿಗೆ ಕಿವಿಗೊಡದೆ ಶಿಕ್ಷಿತರಾಗದೆ ಇರುವ ಜನವು ಇದೇ, ಸತ್ಯವು ಅವರ ಬಾಯಿಂದ ನಿರ್ಮೂಲವಾಗಿ ಅಳಿದುಹೋಗಿದೆ ಎಂದು ಹೇಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆದ್ದರಿಂದ ನೀನು ಅವರಿಗೆ ಹೀಗೆ ಹೇಳಬೇಕು: ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸದ ಜನಾಂಗವಿದು. ಈ ಜನರು ದೇವರ ಧರ್ಮೋಪದೇಶವನ್ನು ಕೇಳಲಿಲ್ಲ. ಈ ಜನರಿಗೆ ನಿಜವಾದ ಧರ್ಮೋಪದೇಶ ಗೊತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆದ್ದರಿಂದ ಅವರಿಗೆ ಹೀಗೆ ಹೇಳು, ‘ಇದು ಅವರ ದೇವರಾದ ಯೆಹೋವ ದೇವರಿಗೆ ವಿಧೇಯನಾಗದ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸದಂಥ ಜನಾಂಗವಾಗಿದೆ. ಸತ್ಯವು ನಾಶವಾಯಿತು. ಇದು ಅವರ ಬಾಯಿಂದ ತೆಗೆದುಹಾಕಲಾಗಿದೆ. ಅಧ್ಯಾಯವನ್ನು ನೋಡಿ |