Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೆರೂಸಲೇಮೇ, ತಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಟ್ಟು, ಬೋಳುಗುಡ್ಡಗಳಲ್ಲಿ ಶೋಕಗೀತವನ್ನು ಹಾಡು; ಯೆಹೋವನು ತನ್ನ ಕೋಪಕ್ಕೆ ಗುರಿಯಾದ ಈ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ಎಲೈ ಜೆರುಸಲೇಮೇ ! ತಲೆಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಡು ಬೋಳುಗುಡ್ಡಗಳಲ್ಲಿ ಶೋಕಗೀತೆಯನ್ನು ಹಾಡು. ಏಕೆಂದರೆ ಸರ್ವೇಶ್ವರನಾದ ನಾನು ಕೋಪಗೊಂಡು, ನಿರಾಕರಿಸಿ, ತ್ಯಜಿಸಿಬಿಟ್ಟಿದ್ದೇನೆ ಈ ವಂಶವನ್ನು,”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 [ಯೆರೂಸಲೇಮೇ,] ತಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಟುಬಿಟ್ಟು ಬೋಳುಗುಡ್ಡಗಳಲ್ಲಿ ಶೋಕಗೀತವನ್ನು ಹಾಡು; ಯೆಹೋವನು ತನ್ನ ಕೋಪಕ್ಕೆ ಗುರಿಯಾದ ಈ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಯೆರೆಮೀಯನೇ, ನಿನ್ನ ಕೂದಲನ್ನು ಕತ್ತರಿಸಿ ಎಸೆದುಬಿಡು. ಬೋಳುಶಿಖರಕ್ಕೆ ಹೋಗಿ ರೋಧಿಸು. ಏಕೆಂದರೆ ಯೆಹೋವನು ಈ ತಲೆಮಾರಿನ ಜನರನ್ನು ತಿರಸ್ಕರಿಸಿದ್ದಾನೆ; ಆತನು ಇವರಿಗೆ ವಿಮುಖನಾಗಿದ್ದಾನೆ. ಆತನು ಕೋಪದಿಂದ ಅವರನ್ನು ದಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ ‘ಓ ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು. ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು. ಏಕೆಂದರೆ ಯೆಹೋವ ದೇವರು ತನ್ನ ಕೋಪಕ್ಕೆ ಪಾತ್ರರಾದ ಈ ಸಂತತಿಯನ್ನು ನಿರಾಕರಿಸಿ ತಳ್ಳಿಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:29
27 ತಿಳಿವುಗಳ ಹೋಲಿಕೆ  

ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು, ತಲೆ ಬೋಳಿಸಿಕೊಂಡು ನೆಲದ ಮೇಲೆ ಅಡ್ಡಬಿದ್ದು ದೇವರನ್ನು ಆರಾಧಿಸಿ,


ಯೆಹೂದವೇ, ನಿನ್ನಿಂದ ಸೆರೆಹೋಗಿರುವ ನಿನ್ನ ಮುದ್ದು ಮಕ್ಕಳಿಗಾಗಿ ಕ್ಷೌರಮಾಡಿಸಿಕೋ ಮತ್ತು ತಲೆಬೋಳಿಸಿಕೋ. ನಿನ್ನ ಬೋಳುತನವನ್ನು ರಣಹದ್ದಿನ ಹಾಗೆ ವಿಸ್ತರಿಸಿಕೋ.


ಯೆಹೋವನಾದ ನಾನು ಇವರನ್ನು ನೂಕಿಬಿಟ್ಟಿದ್ದರಿಂದ ಇವರು ‘ಕಂದು ಬೆಳ್ಳಿ’ ಎನಿಸಿಕೊಳ್ಳುವರು” ಎಂದು ಹೇಳಿದ್ದಾನೆ.


ಈ ದೇಶದಲ್ಲಿನ ದೊಡ್ಡವರೂ. ಅಲ್ಪರೂ ಸಾಯುವರು. ಅವರನ್ನು ಯಾರೂ ಹೂಣಿಡುವುದಿಲ್ಲ, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಗಾಯಮಾಡಿಕೊಳ್ಳುವುದಿಲ್ಲ, ತಲೆಬೋಳಿಸಿಕೊಳ್ಳುವುದಿಲ್ಲ.


ಬೇರೆ ಅನೇಕ ವಿಧವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು, “ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿರಿ” ಎಂದು ಅವರನ್ನು ಎಚ್ಚರಿಸಿದನು.


ಇದೆಲ್ಲಾ ಈ ಸಂತತಿಯವರ ಮೇಲೆ ಬರುವುದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ವ್ಯಭಿಚಾರಿಣಿಯಂತಿರುವ ಈ ದುಷ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಹುಡುಕುತ್ತದೆ. ಆದರೆ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ” ಎಂದು ಉತ್ತರ ಕೊಟ್ಟನು. ತರುವಾಯ ಆತನು ಅವರನ್ನು ಬಿಟ್ಟು ಹೊರಟು ಹೋದನು.


“ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತಾರೆ. ಆದರೆ ಯೋನನೆಂಬ ಪ್ರವಾದಿಯಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ.


ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?


“ನರಪುತ್ರನೇ, ನೀನು ತೂರಿನ ಅರಸನ ವಿಷಯದಲ್ಲಿ ಶೋಕ ಗೀತೆಯನ್ನು ಹಾಡು, ಅವನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಸರ್ವಸುಲಕ್ಷಣ ಶಿರೋಮಣಿ, ಪೂರ್ಣಜ್ಞಾನಿ, ಪರಿಪೂರ್ಣಸುಂದರಿ.


“ಇಸ್ರಾಯೇಲಿನ ರಾಜರ ವಿಷಯವಾಗಿ ಈ ಶೋಕ ಗೀತೆಯನ್ನು ಹಾಡು,


ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು.


“ಗಾಜಾ ಊರು ಬೋಳಿಸಿಕೊಂಡಿದೆ, ಅಷ್ಕೆಲೋನ್ ನಾಶಹೊಂದಿದೆ; ಫಿಲಿಷ್ಟಿಯದ ಬಯಲು ಸೀಮೆಯಲ್ಲಿ ಉಳಿದ ಪಟ್ಟಣವೇ, ನಿನ್ನನ್ನು ಎಂದಿನ ವರೆಗೆ ಕತ್ತರಿಸಿಕೊಳ್ಳುತ್ತಿರುವಿ?


ಯೆಹೋವನು ಇಸ್ರಾಯೇಲರ ಕುಲಗಳಲ್ಲಿ ಉಳಿದಿದ್ದವರನ್ನೂ ಅಲಕ್ಷ್ಯಮಾಡಿ, ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ ಅವರನ್ನು ಬಾಧಿಸಿದನು.


ಆದರೆ ಅವರು ದ್ರೋಹಿಗಳೇ, ಮಕ್ಕಳಲ್ಲ; ಇದು ಅವರ ದೋಷವು; ಅವರು ವಕ್ರಬುದ್ಧಿಯುಳ್ಳ ಮೂರ್ಖಜಾತಿಯವರು.


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.


ಕಣ್ಣೆತ್ತಿ ಬೋಳು ಗುಡ್ಡಗಳನ್ನು ನೋಡು, ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ? ಅರಬಿಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚು ಹಾಕುತ್ತಾ ಕುಳಿತಿದ್ದಿ; ನಿನ್ನ ವ್ಯಭಿಚಾರದಿಂದಲೂ, ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದಿ.


ಆಹಾ, ಬೋಳುಗುಡ್ಡಗಳಲ್ಲಿ ಒಂದು ಶಬ್ದ! ತಾವು ಡೊಂಕು ದಾರಿಯನ್ನು ಹಿಡಿದು ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟಿದ್ದೇವೆಂದು ಇಸ್ರಾಯೇಲರು ಕಣ್ಣೀರು ಸುರಿಸಿ ದೇವರ ಕೃಪೆಯನ್ನು ಬೇಡುತ್ತಿದ್ದಾರಲ್ಲಾ.


“ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ.


ನಾನು ನನ್ನ ಮನೆಯನ್ನು ತೊರೆದು ನನ್ನ ಸ್ವತ್ತನ್ನು ನಿರಾಕರಿಸಿದ್ದೇನೆ; ನನ್ನ ಪ್ರಾಣಪ್ರಿಯಳನ್ನು ಅವಳ ಶತ್ರುಗಳ ಕೈಗೆ ಒಪ್ಪಿಸಿದ್ದೇನೆ.


ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? ಚೀಯೋನನ್ನು ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದಿಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮ ಕಾಲವನ್ನೂ ಎದುರುನೋಡಿದೆವು, ಹಾ, ಅಂಜಿಕೆಯೇ!


ಪೂರ್ವಕಾಲದ ಸುಸ್ಥಿತಿಯನ್ನು ನಮಗೆ ಮತ್ತೆ ದಯಪಾಲಿಸು. ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ನೀನು ತಿರುಗಿಸಿದ ಹಾಗೆ ತಿರುಗುವೆವು;


ಇಸ್ರಾಯೇಲ್ ವಂಶದವರೇ, ನಾನು ನಿಮ್ಮ ವಿಷಯದಲ್ಲಿ ಶೋಕಗೀತವಾಗಿ ಹಾಡುವ ಈ ಮಾತನ್ನು ಕೇಳಿರಿ:


ಇವರಿಗಾಗಲಿ ಅಥವಾ ಇವರ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಜನಾಂಗಗಳೊಳಗೆ ಇವರನ್ನು ಚದರಿಸಿಬಿಟ್ಟು, ಇವರು ನಿರ್ಮೂಲವಾಗುವ ತನಕ ಖಡ್ಗವನ್ನು ಇವರ ಹಿಂದೆ ಕಳುಹಿಸುವೆನು” ಎಂದು ಹೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು