Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ‘ಈ ಕಟ್ಟಡಗಳೇ ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ’ ಎಂಬ ಸುಳ್ಳು ಮಾತುಗಳ ಮೇಲೆ ಭರವಸವಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ‘ಇದು ಸರ್ವೇಶ್ವರನ ಗರ್ಭಗುಡಿ, ಸರ್ವೇಶ್ವರನ ಗರ್ಭಗುಡಿ, ಸರ್ವೇಶ್ವರನ ಗರ್ಭಗುಡಿ, (ಆದುದರಿಂದ ಎಲ್ಲ ಸುಭದ್ರ)’ ಎಂಬ ಮೋಸಕರ ಮಾತುಗಳಲ್ಲಿ ಭರವಸೆ ಇಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಈ ಕಟ್ಟಡಗಳೇ ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ ಎಂಬುವ ಸುಳ್ಳುಮಾತುಗಳ ಮೇಲೆ ಭರವಸವಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಕೆಲವರು ಹೇಳುವ ಸುಳ್ಳುಗಳನ್ನು ನಂಬಬೇಡಿರಿ. ಅವರು “ಇದು ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ” ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಇವುಗಳೇ ಯೆಹೋವ ದೇವರ ದೇವಾಲಯ, ಯೆಹೋವ ದೇವರ ದೇವಾಲಯ, ಯೆಹೋವ ದೇವರ ದೇವಾಲಯ,” ಎಂದು ಹೇಳುವ ಮೋಸಕರ ಮಾತುಗಳಲ್ಲಿ ನಂಬಿಕೆ ಇಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:4
16 ತಿಳಿವುಗಳ ಹೋಲಿಕೆ  

ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.


“ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೆ ಈಡಾಗುವವು; ಆಗ ತಮ್ಮ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.


ನೀವು ಜವೆಗೋದಿಯ ಹಿಡಿಗಳನ್ನೂ, ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳು ಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವುದರಿಂದ ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.’


ನೀನು ಸೆರೆಯವರೆಲ್ಲರಿಗೆ ಹೀಗೆ ಹೇಳಿ ಕಳುಹಿಸು, “ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ನಾನು ಕಳುಹಿಸದೆ ಹೋದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳಿನಲ್ಲಿ ನಂಬಿಕೆಯನ್ನು ಹುಟ್ಟಿಸಿದ ಕಾರಣ ಇಗೋ,


ಹಾಗಾದರೆ ಮಾನಸಾಂತರಕ್ಕೆ ಯೋಗ್ಯವಾದ ಫಲಗಳನ್ನು ತೋರಿಸಿರಿ. ‘ಅಬ್ರಹಾಮನು ನಮಗೆ ತಂದೆಯಲ್ಲವೇ’ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.


ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ, “ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ.


ಸಮಾಧಾನವಿಲ್ಲದಿದ್ದರೂ, ಸಮಾಧಾನ ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.


ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡೆಸಿ, ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರಮಾಡಿ, ನಾನು ಆಜ್ಞಾಪಿಸದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದಿರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ” ಎಂಬುದೇ.


ಇಸ್ರಾಯೇಲರನ್ನು ನಾನು ಅವರಿಗೆ ಕೊಟ್ಟ ದೇಶದಿಂದ ತೆಗೆದು ಹಾಕಿ, ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ‘ಇಸ್ರಾಯೇಲರು’ ಎಲ್ಲಾ ಜನಾಂಗಗಳವರ ಗಾದೆಗೂ ನಿಂದೆಗೂ, ಲೋಕದ ಅಪವಾದಕ್ಕೂ ಗುರಿಯಾಗುವಾಗುವರು.


ಇವರು ತಮ್ಮನ್ನು ಪರಿಶುದ್ಧ ಪಟ್ಟಣದವರು ಎಂದುಕೊಂಡು, ದೇವರು ಇಸ್ರಾಯೇಲಿನವನೇ ಎಂದು ಆತನ ಮೇಲೆ ಭರವಸವಿಟ್ಟುಕೊಂಡಿರುತ್ತಾರೆ. ಆತನ ಹೆಸರೋ ಸಕಲ ಸೈನ್ಯಗಳ ಸರ್ವಶಕ್ತನಾದ ಯೆಹೋವನು ಎಂಬುದು.


ಇವರಲ್ಲಿ ಯಾರೂ ನ್ಯಾಯಸ್ಥಾನಕ್ಕೆ ನ್ಯಾಯವಾಗಿ ಹೋಗುವುದಿಲ್ಲ, ಯಾರೂ ಸತ್ಯವಾಗಿ ವಾದಿಸುವುದಿಲ್ಲ; ಇವರು ಶೂನ್ಯವಾಗಿರುವುದನ್ನು ನಂಬಿಕೊಂಡು ಸುಳ್ಳನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ.


ಯೆಹೋವನು ಹೀಗೆನ್ನುತ್ತಾನೆ: “ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?


ಆದಕಾರಣ ನನ್ನ ನಾಮಕ್ಕೆ ನೆಲೆಯಾದ ನಿಮ್ಮ ಭರವಸೆಗೆ ಆಧಾರವಾದ ಆಲಯಕ್ಕೂ, ನಾನು ನಿಮಗೂ ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ಸ್ಥಳಕ್ಕೂ ಶೀಲೋವಿಗೆ ತಂದ ಗತಿಯನ್ನೇ ಈಗ ತರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು