Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ನಿಮ್ಮ ನಡತೆಯನ್ನು ಮತ್ತು ಕೃತ್ಯಗಳನ್ನು ಸಂಪೂರ್ಣವಾಗಿ ತಿದ್ದಿಕೊಂಡು ಕಕ್ಷಿ ಪ್ರತಿಕಕ್ಷಿಗಳಿಗೆ ಕೇವಲ ನ್ಯಾಯವನ್ನೇ ತೀರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ನೀವು ನಿಮ್ಮ ನಡೆಯನ್ನೂ ಕೃತ್ಯಗಳನ್ನೂ ಪೂರ್ತಿಯಾಗಿ ತಿದ್ದುಕೊಳ್ಳಿ. ಒಬ್ಬರು ಮತ್ತೊಬ್ಬರೊಡನೆ ನ್ಯಾಯನೀತಿಯಿಂದ ವರ್ತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ನಿಮ್ಮ ನಡತೆಯನ್ನೂ ಕೃತ್ಯಗಳನ್ನೂ ಸಂಪೂರ್ಣವಾಗಿ ತಿದ್ದಿಕೊಂಡು ಕಕ್ಷಿಪ್ರತಿಕಕ್ಷಿಗಳಿಗೆ ಕೇವಲ ನ್ಯಾಯವನ್ನೇ ತೀರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀವು ನಿಮ್ಮ ನಡತೆಯನ್ನು ಬದಲಾಯಿಸಿ ಸತ್ಕಾರ್ಯಗಳನ್ನು ಮಾಡಿದರೆ ನಾನು ನಿಮಗೆ ಈ ಸ್ಥಳದಲ್ಲಿ ವಾಸಿಸಲು ಆಸ್ಪದಕೊಡುತ್ತೇನೆ. ನೀವು ಒಬ್ಬರಿಗೊಬ್ಬರು ನ್ಯಾಯವಾದ ರೀತಿಯಲ್ಲಿ ವ್ಯವಹರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ ನೀವು ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ, ಪೂರ್ಣವಾಗಿ ನೆಟ್ಟಗೆ ಮಾಡಿದರೆ; ಮನುಷ್ಯನಿಗೂ, ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯ ನಡೆಸಿದರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:5
16 ತಿಳಿವುಗಳ ಹೋಲಿಕೆ  

ಯೆಹೋವನು, ನೀತಿ, ನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ವಿದೇಶಿ, ಅನಾಥ, ವಿಧವೆ ಇವರಿಗೆ ಯಾವ ಅನ್ಯಾಯವನ್ನೂ ಮತ್ತು ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿರಿ” ಎಂದು ಹೇಳುತ್ತಾನೆ.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗೆನ್ನುತ್ತಾನೆ, ನೀವು ನಿಮ್ಮ ನಡತೆಯನ್ನೂ, ಕೃತ್ಯಗಳನ್ನೂ ತಿದ್ದಿಕೊಳ್ಳಿರಿ; ಹೀಗೆ ಮಾಡಿದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ನೆಲೆಗೊಳಿಸುವೆನು.


ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ.


ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನು ಕೇಳದೆ, ಲಾಭಕ್ಕೆ ಹಣಕೊಡದೆ, ನನ್ನ ವಿಧಿಗಳನ್ನು ಆಚರಿಸಿ, ನನ್ನ ನಿಯಮಗಳನ್ನು ಅನುಸರಿಸಿದರೆ ತನ್ನ ತಂದೆಯ ಅಧರ್ಮದ ನಿಮಿತ್ತ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.


ಸಾಲಕ್ಕೆ ಬಡ್ಡಿತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,


ಆಲೋಚನೆ ಹೇಳಿರಿ, ತೀರ್ಮಾನಿಸಿರಿ; ನಡು ಮಧ್ಯಾಹ್ನದಲ್ಲಿ ನಿಮ್ಮ ನೆರಳು ರಾತ್ರಿಯ ಕತ್ತಲಿನಂತೆ ದಟ್ಟವಾದ ನೆರಳನ್ನು ಕೊಡಲಿ. ನಿಮ್ಮಲ್ಲಿರುವ ದೀನದಲಿತರನ್ನು ಸಂರಕ್ಷಿಸು, ತಪ್ಪಿಸಿಕೊಂಡು ಹೋಗುವ ಜನರ ವಿಷಯವನ್ನು ಬಯಲುಮಾಡಬೇಡಿ.


ಯಾಬೇಷ್ ಗಿಲ್ಯಾದಿನಲ್ಲಿ ಇನ್ನೂ ಮದುವೆಯಾಗದಿದ್ದ ನಾನೂರು ಮಂದಿ ಯುವತಿಯರಿದ್ದರು. ಪಟ್ಟಣವನ್ನು ಸಂಹರಿಸುವುದಕ್ಕೆ ಹೋದವರು ಇವರನ್ನು ಉಳಿಸಿ, ಕಾನಾನ್ ದೇಶದ ಶೀಲೋವಿನಲ್ಲಿದ್ದ ಪಾಳೆಯಕ್ಕೆ ತೆಗೆದುಕೊಂಡು ಬಂದರು.


ಆ ದಿನದಲ್ಲಿ ದೆಬೋರಳೂ ಅಬೀನೋವಮನ ಮಗನಾದ ಬಾರಾಕನೂ ಈ ಗೀತೆಯನ್ನು ಹಾಡಿದರು:


ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು; ನಿಮ್ಮ ದೇವರಿಗೆ ಭಯಪಡುವವರಾಗಿರಬೇಕು; ನಾನು ನಿಮ್ಮ ದೇವರಾದ ಯೆಹೋವನು.


ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ, ಮುಂಜಾನೆಯಲ್ಲಿ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ” ಎಂಬುದೇ.


ನೀನು ದೇವದಾರುವಿನ ಕೆಲಸದಲ್ಲಿ ಸ್ಪರ್ಧಿಸುವುದರಿಂದಲೇ ಆಳತಕ್ಕವನಾಗಿದ್ದೀಯೋ? ನಿನ್ನ ತಂದೆಯು ಎಷ್ಟೇ ಉಂಡು ಕುಡಿದರೂ ನೀತಿ ನ್ಯಾಯಗಳನ್ನಂತು ಕೈಕೊಳ್ಳುತ್ತಿದ್ದನು; ಆಗ ಅವನಿಗೆ ನೆಮ್ಮದಿಯಾಗಿತ್ತು.


ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡಿರಿ; ಹಾಗೆ ಮಾಡಿದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.


ಯೆರೂಸಲೇಮು ಸುತ್ತಣ ಪಟ್ಟಣಗಳ ಸಮೇತ ಜನಭರಿತವಾಗಿಯೂ, ನೆಮ್ಮದಿಯಾಗಿಯೂ ಇದ್ದು, ದಕ್ಷಿಣ ಪ್ರಾಂತ್ಯದಲ್ಲಿಯೂ, ಪೂರ್ವದ ಇಳಕಲಿನ ಪ್ರದೇಶದಲ್ಲಿಯೂ ಜನರು ತುಂಬಿದ್ದಾಗ ಆ ಪೂರ್ವಕಾಲದ ಪ್ರವಾದಿಗಳ ಮೂಲಕ ಯೆಹೋವನು ಪ್ರಕಟಿಸಿದ ಮಾತುಗಳನ್ನು ನೀವು ಕೇಳಿಲ್ಲವೇ?’”


“ಒಬ್ಬನು ಸದ್ಧರ್ಮಿಯಾಗಿ ನೀತಿ ನ್ಯಾಯಗಳನ್ನು ನಡೆಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು