Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪರದೇಶಿಯನ್ನಾಗಲಿ, ಅನಾಥನನ್ನಾಗಲಿ ಅಥವಾ ವಿಧವೆಯನ್ನಾಗಲಿ ಹಿಂಸಿಸದೆ, ಈ ಸ್ಥಳದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸದೆ, ನಿಮಗೆ ಹಾನಿಕರವಾದ ಅನ್ಯದೇವತೆಗಳಲ್ಲಿ ಭಕ್ತಿ ಇಡದೆ ಇದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅನ್ಯರನ್ನಾಗಲಿ, ಅನಾಥರನ್ನಾಗಲಿ, ವಿಧವೆಯರನ್ನೇ ಆಗಲಿ ಶೋಷಣೆಗೆ ಗುರಿಪಡಿಸಬೇಡಿ! ಇಲ್ಲೆಲ್ಲೂ ನಿರ್ದೋಷಿಗಳ ರಕ್ತವನ್ನು ಸುರಿಸಬೇಡಿ. ನಿಮಗೆ ಹಾನಿಕರವಾದ ಅನ್ಯದೇವತಾ ಭಕ್ತಿಯನ್ನು ಬಿಟ್ಟುಬಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಪರದೇಶಿಯನ್ನಾಗಲಿ ಅನಾಥನನ್ನಾಗಲಿ ವಿಧವೆಯನ್ನಾಗಲಿ ಹಿಂಸಿಸದೆ ಈ ಸ್ಥಳದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸದೆ ನಿಮಗೆ ಹಾನಿಕರವಾದ ಅನ್ಯದೇವತಾಭಕ್ತಿಯನ್ನು ಮಾಡದೆ ಇದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಪರಿಚಿತರೊಂದಿಗೂ ನೀವು ನ್ಯಾಯಬದ್ಧವಾಗಿ ವರ್ತಿಸಬೇಕು. ವಿಧವೆಯರಿಗೆ ಮತ್ತು ಅನಾಥರಿಗೆ ನೀವು ಒಳ್ಳೆಯದನ್ನು ಮಾಡಬೇಕು. ನಿರ್ದೋಷಿಗಳ ಕೊಲೆ ಮಾಡಬಾರದು; ಅನ್ಯ ದೇವರುಗಳನ್ನು ಸೇವಿಸಬಾರದು. ಏಕೆಂದರೆ ಅವುಗಳು ನಿಮ್ಮ ಜೀವನವನ್ನು ಹಾಳುಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಪರದೇಶಿಯನ್ನೂ, ದಿಕ್ಕಿಲ್ಲದವನನ್ನೂ, ವಿಧವೆಯನ್ನೂ ಸಂಕಟ ಪಡಿಸದಿದ್ದರೆ; ಈ ಸ್ಥಳದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲದಿದ್ದರೆ; ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:6
37 ತಿಳಿವುಗಳ ಹೋಲಿಕೆ  

ನನ್ನ ಮಾತುಗಳನ್ನು ಕೇಳದೆ ತಮ್ಮ ಹೃದಯದ ಹಟದಂತೆ ನಡೆದು, ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಮಾನವಾಗಿರುವರು.


ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.


ಈ ಆಜ್ಞೆಗಳಿಗೆ ಅವಿಧೇಯರಾಗಿ, ನಾನು ಈಗ ಬೋಧಿಸುವ ಮಾರ್ಗವನ್ನು ಬಿಟ್ಟು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಅವಲಂಬಿಸಿದರೆ ಶಾಪವೂ ನಿಮಗುಂಟಾಗುವವು.


ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವುದನ್ನು ಕಂಡೆನು ಎಂದು ನೀವು ನೆವ ಹೇಳುವಂತಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ ನಿನ್ನನ್ನು ದಂಡಿಸುವೆನು.


ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.


“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


“‘ಈ ಜನರು ನನ್ನನ್ನು ತೊರೆದು ತಮಗಾಗಲಿ, ತಮ್ಮ ಪೂರ್ವಿಕರಿಗಾಗಲಿ ಅಥವಾ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕುತ್ತಾ, ಈ ಸ್ಥಳವನ್ನು ಅನ್ಯಸ್ಥಾನವನ್ನಾಗಿ ಮಾಡಿದ್ದಾರೆ.


ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ, ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ನಷ್ಟವೂ, ನಾಶನವೂ ಉಂಟಾಗುತ್ತವೆ;


“ಅವರು, ಪರದೇಶಿ, ಅನಾಥ, ಇವರ ವ್ಯಾಜ್ಯದಲ್ಲಿ ನ್ಯಾಯ ಬಿಟ್ಟು ತೀರ್ಪುಹೇಳಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.


ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.


ಜನರೆಲ್ಲಾ, “ಆತನ ರಕ್ತವು ನಮ್ಮ ಮತ್ತು ನಮ್ಮ ಮಕ್ಕಳ ಮೇಲೆ ಬರಲಿ” ಅಂದರು.


“ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ” ಅಂದನು. ಅದಕ್ಕವರು, “ಅದು ನಮಗೇನು? ನೀನೇ ನೋಡಿಕೋ” ಅಂದರು.


ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ,


ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕರ ಪಾಪ ಮತ್ತು ಪ್ರವಾದಿಗಳ ದೋಷಗಳಿಂದಲೇ ಈ ಗತಿ ಬಂತು.


ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು.


ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ” ಎಂದು ಹೇಳಿದನು.


ನೀವು ನಿಮ್ಮ ನಡತೆಯನ್ನು ಮತ್ತು ಕೃತ್ಯಗಳನ್ನು ಸಂಪೂರ್ಣವಾಗಿ ತಿದ್ದಿಕೊಂಡು ಕಕ್ಷಿ ಪ್ರತಿಕಕ್ಷಿಗಳಿಗೆ ಕೇವಲ ನ್ಯಾಯವನ್ನೇ ತೀರಿಸಿರಿ.


ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”


ಕಾನಾನ್ಯರ ಮೂರ್ತಿಗಳ ಅರ್ಪಣೆಗೋಸ್ಕರ, ತಮ್ಮ ಮಕ್ಕಳ ನಿರಪರಾಧ ರಕ್ತವನ್ನು ಸುರಿಸಿದರು; ಇಂಥ ಕೊಲೆಗಳಿಂದ ದೇಶವನ್ನು ಹೊಲೆಮಾಡಿದರು.


ಅವುಗಳಿಗಾಗಿ ಯೆಹೋವನು ಯೆರೂಸಲೇಮಿನವರನ್ನು ಕ್ಷಮಿಸದೆ ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದರಿಂದ ಅವರಿಗೆ ಶಿಕ್ಷೆಯಾಯಿತು. ಇದು ಯೆಹೋವನ ಅಪ್ಪಣೆಯ ಪ್ರಕಾರ ನಡೆಯಿತು.


ಇದಲ್ಲದೆ ಅವನು ತನ್ನ ಸ್ವಂತ ಮಗನನ್ನೇ ಆಹುತಿಕೊಟ್ಟನು. ಕಣಿಕೇಳಿಸುವುದು, ಮಾಟಮಂತ್ರಗಳನ್ನು ಮಾಡಿಸುವುದು, ಜೋತಿಷ್ಯ, ಮುಹೂರ್ತಗಳನ್ನು ನೋಡುವುದು ಮತ್ತು ಭೂತಪ್ರೇತಗಳನ್ನೂ ವಿಚಾರಿಸುವುದು, ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನು ಎಬ್ಬಿಸಿದನು.


ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು; ನಿಮ್ಮ ದೇವರಿಗೆ ಭಯಪಡುವವರಾಗಿರಬೇಕು; ನಾನು ನಿಮ್ಮ ದೇವರಾದ ಯೆಹೋವನು.


ಕೊಬ್ಬಿ ಢಾಂಭಿಕರಾಗಿದ್ದಾರೆ; ಇದಲ್ಲದೆ ದುಷ್ಕೃತ್ಯಗಳಲ್ಲಿ ನಿಸ್ಸೀಮರಾಗಿದ್ದಾರೆ. ಅನಾಥರ ವೃದ್ಧಿಗಾಗಿ ಅವರ ಪರವಾಗಿ ವ್ಯಾಜ್ಯ ನಡೆಸರು, ದಿಕ್ಕಿಲ್ಲದವರಿಗೆ ನ್ಯಾಯದೊರಕಿಸರು.


ನೀವು ಕಳ್ಳತನ, ಕೊಲೆ ಮತ್ತು ವ್ಯಭಿಚಾರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ, ಬಾಳನಿಗೆ ಹೋಮವನ್ನರ್ಪಿಸಿ, ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ,


ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ನಿನ್ನವರು ತಾಯಿ ತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ, ವಿಧವೆಯರನ್ನೂ ಹಿಂಸಿಸಿದ್ದಾರೆ.


“‘ನಿಮ್ಮ ದೇಶದಲ್ಲಿ ವಾಸವಾಗಿರುವ ಪರದೇಶದವರಿಗೆ ಅನ್ಯಾಯವೇನೂ ಮಾಡಬಾರದು.


ಪೂರ್ವಕಾಲದ ಮೇರೆಯನ್ನು ತೆಗೆದುಹಾಕಬೇಡ, ಅನಾಥರ ಹೊಲಗಳಲ್ಲಿ ನುಗ್ಗಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು