ಯೆರೆಮೀಯ 7:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾನು ನಿಮ್ಮನ್ನು ಈ ಸ್ಥಳದಲ್ಲಿ, ನಾನೇ ನಿಮ್ಮ ಪೂರ್ವಿಕರಿಗೆ ಶಾಶ್ವತವಾಗಿ ದಯಪಾಲಿಸಿದ ಈ ದೇಶದಲ್ಲಿ ನೆಲೆಗೊಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ನಾನು ನಿಮ್ಮನ್ನು ಈ ಸ್ಥಳದಲ್ಲೆ ನೆಲೆಗೊಳಿಸುವೆನು. ನಿಮ್ಮ ಪೂರ್ವಜರಿಗೆ ನಾನು ಶಾಶ್ವತವಾಗಿ ದಯಪಾಲಿಸಿದ ಈ ನಾಡಿನಲ್ಲೆ ನೆಲೆಗೊಳಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾನು ನಿಮ್ಮನ್ನು ಈ ಸ್ಥಳದಲ್ಲಿ, ನಾನೇ ನಿಮ್ಮ ಪಿತೃಗಳಿಗೆ ಶಾಶ್ವತವಾಗಿ ದಯಪಾಲಿಸಿದ ಈ ದೇಶದಲ್ಲಿ ನೆಲೆಗೊಳಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನೀವು ನನ್ನ ಆಜ್ಞೆಯನ್ನು ಪಾಲಿಸಿದರೆ ಇಲ್ಲಿರಲು ನಾನು ನಿಮಗೆ ಆಸ್ಪದ ಕೊಡುತ್ತೇನೆ. ನಾನು ಈ ಪ್ರದೇಶವನ್ನು ನಿಮ್ಮ ಪೂರ್ವಿಕರಿಗೆ ಶಾಶ್ವತವಾದ ಸ್ವಾಸ್ತ್ಯವಾಗಿ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾನು ನಿಮ್ಮನ್ನು ಈ ಸ್ಥಳದಲ್ಲಿ ಎಂದರೆ, ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು. ಅಧ್ಯಾಯವನ್ನು ನೋಡಿ |
ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.