ಯೆರೆಮೀಯ 8:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಹೀಗೆನ್ನುತ್ತಾನೆ, “ಆ ಕಾಲದಲ್ಲಿ ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಯೆರೂಸಲೇಮಿನ ನಿವಾಸಿಗಳು, ಇವರೆಲ್ಲರ ಎಲುಬುಗಳನ್ನು ಸಮಾಧಿಗಳೊಳಗಿಂದ ತೆಗೆದುಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಆ ಕಾಲ ಬಂದಾಗ ಜುದೇಯದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ಹಾಗು ಜೆರುಸಲೇಮಿನ ನಿವಾಸಿಗಳು ಇವರೆಲ್ಲರ ಎಲುಬುಗಳನ್ನು ಗೋರಿಯಿಂದ ಅಗೆದು ತೆಗೆದುಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ಹೀಗನ್ನುತ್ತಾನೆ - ಆ ಕಾಲದಲ್ಲಿ ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಯೆರೂಸಲೇವಿುನ ನಿವಾಸಿಗಳು, ಇವರೆಲ್ಲರ ಎಲುಬುಗಳನ್ನು ಗೋರಿಗಳೊಳಗಿಂದ ತೆಗೆದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ಹೀಗೆನ್ನುತ್ತಾನೆ: “ಆಗ ಜನರು ಯೆಹೂದದ ರಾಜರ ಮತ್ತು ಪ್ರಮುಖ ಅಧಿಪತಿಗಳ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಯಾಜಕರ ಮತ್ತು ಪ್ರವಾದಿಗಳ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಜೆರುಸಲೇಮಿನ ಎಲ್ಲಾ ಜನರ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ ‘ಯೆಹೋವ ದೇವರು ಹೇಳುವುದೇನೆಂದರೆ, ಆ ಕಾಲದಲ್ಲಿ ಅವರು ಯೆಹೂದದ ಅರಸರ ಎಲುಬುಗಳನ್ನೂ, ಅದರ ಪ್ರಧಾನರ ಎಲುಬುಗಳನ್ನೂ, ಯಾಜಕರ ಎಲುಬುಗಳನ್ನೂ, ಪ್ರವಾದಿಗಳ ಎಲುಬುಗಳನ್ನೂ, ಯೆರೂಸಲೇಮಿನ ನಿವಾಸಿಗಳ ಎಲುಬುಗಳನ್ನೂ ಅವರ ಸಮಾಧಿಗಳೊಳಗಿಂದ ಹೊರಗೆ ತರುವರು. ಅಧ್ಯಾಯವನ್ನು ನೋಡಿ |