ಯೆರೆಮೀಯ 8:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಹಾ, ನನ್ನ ಪ್ರಜೆಯೆಂಬಾಕೆಯು, “ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ?” ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ. ಅದಕ್ಕೆ ಯೆಹೋವನು, “ಇವರು ತಮ್ಮ ವಿಗ್ರಹಗಳಿಂದಲೂ, ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ” ಎಂದು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇದೋ, ದೂರ ನಾಡಿನಿಂದ ಕೇಳಿಬರುತ್ತಿದೆ ನನ್ನ ಪ್ರಜೆಯೆಂಬಾಕೆಯ ಈ ಮೊರೆ : “ಸಿಯೋನಿನಲ್ಲಿ ಇನ್ನು ಸರ್ವೇಶ್ವರನಿಲ್ಲವೊ? ಅದರ ರಾಜನು ಅಲ್ಲಿ ವಾಸವಾಗಿಲ್ಲವೊ?” ಅದಕ್ಕೆ ಸರ್ವೇಶ್ವರ : “ಇವರು ತಮ್ಮ ವಿಗ್ರಹಾರಾಧನೆಯಿಂದ ಅನ್ಯದೇವತೆಗಳ ಶೂನ್ಯರೂಪಗಳಿಂದ ನನ್ನನ್ನು ಕೆಣಕಿದ್ದೇಕೆ?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆಹಾ, ನನ್ನ ಪ್ರಜೆಯೆಂಬಾಕೆಯು - ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ. [ಅದಕ್ಕೆ ಯೆಹೋವನು - ] ಇವರು ತಮ್ಮ ವಿಗ್ರಹಗಳಿಂದಲೂ ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ [ಅನ್ನುತ್ತಾನೆ]. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ದೂರದೇಶದಿಂದ ನನ್ನ ಜನರು ಕೂಗುವ ಮೊರೆಯಿದು: “ಯೆಹೋವ ದೇವರು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ?” ಎಂಬುದೇ ಆದರೂ ಅವರು ತಮ್ಮ ವಿಗ್ರಹಗಳಿಂದಲೂ, ವಿಚಿತ್ರವಾದ ವ್ಯರ್ಥತ್ವಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಏಕೆ? ಅಧ್ಯಾಯವನ್ನು ನೋಡಿ |