ಯೆರೆಮೀಯ 8:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವರು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ, ಪೂಜಿಸಿದ ಸೂರ್ಯ, ಚಂದ್ರ, ತಾರಾಗಣಗಳ ಎದುರಿಗೇ ಆ ಎಲುಬುಗಳನ್ನು ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಆಶ್ರಯಿಸಿ ಪೂಜಿಸಿದ ಸೂರ್ಯಚಂದ್ರತಾರಾಗಣಗಳ ಎದುರಿಗೆ ಹರಡಿಬಿಡುವರು; ಅವುಗಳನ್ನು ಯಾರೂ ಕೂಡಿಸಿ ಹೂಣಿಡುವದಿಲ್ಲ; ಅವು ಭೂವಿುಯ ಮೇಲೆ ಗೊಬ್ಬರವಾಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಜೆರುಸಲೇಮಿನ ಜನರು ಸೂರ್ಯನನ್ನು, ಚಂದ್ರನನ್ನು, ನಕ್ಷತ್ರಗಣಗಳನ್ನು ಪ್ರೀತಿಸಿ, ಅನುಸರಿಸಿ, ವಿಚಾರಿಸಿ, ಪೂಜಿಸಿದ್ದರಿಂದ ಅವರ ಎಲುಬುಗಳನ್ನು ಅವುಗಳ ಕೆಳಗೆ ಭೂಮಿಯ ಮೇಲೆ ಹರಡುವರು. ಯಾರೊಬ್ಬರೂ ಆ ಎಲುಬುಗಳನ್ನು ಪುನಃ ಒಂದೆಡೆ ಸೇರಿಸಿ ಹೂಳುವುದಿಲ್ಲ. ಆ ಎಲುಬುಗಳು ಭೂಮಿಯ ಮೇಲೆ ಎಸೆದ ಸಗಣಿಯಂತಾಗುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವರು ಪ್ರೀತಿ ಮಾಡಿದಂಥ, ಸೇವಿಸಿದಂಥ, ಹಿಂಬಾಲಿಸಿದಂಥ, ಹುಡುಕಿದಂಥ, ಆರಾಧಿಸಿದಂಥ, ಸೂರ್ಯನ ಮುಂದೆಯೂ, ಚಂದ್ರನ ಮುಂದೆಯೂ, ಸಮಸ್ತ ಆಕಾಶ ಸೈನ್ಯದ ಮುಂದೆಯೂ ಅವುಗಳನ್ನು ತೆರೆದಿಡುವರು; ಹೌದು, ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರವಾಗುವುವು. ಅಧ್ಯಾಯವನ್ನು ನೋಡಿ |