Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನನ್ನ ಪ್ರಜೆಯೆಂಬಾಕೆಯ ವೇದನೆಯಿಂದ ನನಗೆ ಮನೋಯಾತನೆಯಾಯಿತು, ನಾನು ಶೋಕಿಸಿದೆನು, ಭಯವು ನನ್ನನ್ನು ಹಿಡಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನನ್ನ ಪ್ರಜೆಯೆಂಬಾಕೆಯ ವೇದನೆಯಿಂದಲೆ ನಾನು ಅನುಭವಿಸುತ್ತಿರುವೆ ಮನೋಯಾತನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನನ್ನ ಪ್ರಜೆಯೆಂಬಾಕೆಯ ಭಂಗದಿಂದ ನನಗೆ ಭಂಗವಾಯಿತು, ನಾನು ಕರ್ರಗಾದೆನು, ಭಯವು ನನ್ನನ್ನು ಹಿಡಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನನ್ನ ಜನರು ಗಾಯಗೊಂಡಿದ್ದಾರೆ. ಆದ್ದರಿಂದ ನಾನೂ ಗಾಯಗೊಂಡಿದ್ದೇನೆ. ಈಗ ಗಾಯಗೊಂಡ ಜನರ ಬಗ್ಗೆ ಯೋಚಿಸುತ್ತ ನಾನು ದುಃಖದಿಂದ ಮೌನವಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನನ್ನ ಜನರು ತುಳಿತಕ್ಕೆ ಒಳಗಾದದ್ದರಿಂದ ನಾನೂ ತುಳಿತಕ್ಕೆ ಒಳಗಾದೆನು. ದುಃಖಿಸಿದೆನು. ಭಯವು ನನ್ನನ್ನು ಹಿಡಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:21
14 ತಿಳಿವುಗಳ ಹೋಲಿಕೆ  

ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.


ನಿನವೆಯು ಬರಿದಾಗಿದೆ, ಬಟ್ಟಬರಿದಾಗಿ ಬೀಳುಬಿದ್ದಿದೆ; ಎದೆಯು ಕರಗಿ ನೀರಾಗಿ ಹೋಗಿದೆ, ಮೊಣಕಾಲುಗಳು ಅದರುತ್ತವೆ, ಎಲ್ಲರ ಸೊಂಟಗಳಿಗೂ ವೇದನೆಯಾಗಿದೆ, ಎಲ್ಲರ ಮುಖಗಳೂ ಬಾಡಿವೆ.


ಅವುಗಳ ದೆಸೆಯಿಂದ ರಾಷ್ಟ್ರಗಳಿಗೆ ಪ್ರಾಣ ಸಂಕಟ; ಎಲ್ಲರ ಮುಖಗಳು ಕಳೆಗುಂದುತ್ತವೆ.


ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲಾ!


ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತದೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತ್ತೂರಿಯ ಶಬ್ದವನ್ನೂ, ಯುದ್ಧದ ಘೋಷವನ್ನೂ ಕೇಳುತ್ತಿಯಲ್ಲಾ.


ತರುವಾಯ ಆತನು ಯೆರೂಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ,


ನಾನಾದರೋ ಸಭಾಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವುದನ್ನು ತಪ್ಪಿಸಲು ಆತುರಪಡಲಿಲ್ಲ. ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ಅದನ್ನು ನೀನೇ ಬಲ್ಲೆ. ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.


ನಾನು ಅರಸನಿಗೆ, “ಅರಸನು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವುದು ಹೇಗೆ?” ಎಂದು ಹೇಳಿದೆನು.


ಸುಗ್ಗಿ ತೀರಿತು, ಹಣ್ಣಿನ ಕಾಲ ಮುಗಿಯಿತು, ನಮಗೆ ಉದ್ಧಾರವೇ ಆಗಲಿಲ್ಲ.


ಯೆಹೂದವು ದುಃಖಿಸುತ್ತದೆ, ಅಲ್ಲಿಯ ಜನರು ಕಂಗೆಟ್ಟು ಕರ್ರಗಾಗಿ ನೆಲದ ಮೇಲೆ ಬಿದ್ದಿದ್ದಾರೆ, ಯೆರೂಸಲೇಮಿನವರ ಗೋಳಾಟವು ಕೇಳಿಸುತ್ತದೆ.


ಯೆಹೋವನ ರೌದ್ರದಂಡದ ಪೆಟ್ಟನ್ನು ತಿಂದವನು ನಾನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು