Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಈ ಜನರು, ಯೆರೂಸಲೇಮ್ ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರುಗಿ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಈ ಜೆರುಸಲೇಮಿನವರು ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ. ಹಿಂತಿರುಗಿ ಬರಲೊಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಈ ಯೆರೂಸಲೇವಿುನವರು ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರಿಗಿ ಬರಲೊಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೂದದ ಜನರು ತಪ್ಪುದಾರಿಯನ್ನು ಹಿಡಿದಿದ್ದಾರೆ. ಆದರೆ ಜೆರುಸಲೇಮಿನ ಜನರು ಆ ತಪ್ಪು ದಾರಿಯ ಮೇಲೆ ನಡೆಯುವದನ್ನು ಏಕೆ ಮುಂದುವರಿಸಿದ್ದಾರೆ? ತಮ್ಮ ಸುಳ್ಳುಗಳನ್ನೇ ಅವರು ನಂಬಿದ್ದಾರೆ, ಅವರು ಹಿಂತಿರುಗಿ ಬರಲು ಸಿದ್ಧರಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹಾಗಾದರೆ ಈ ಯೆರೂಸಲೇಮಿನ ಜನರು ಎಂದಿಗೂ ಹಿಂದಿರುಗದಂತೆ ಏಕೆ ಬಿಟ್ಟು ಹೋಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವುದಕ್ಕೆ ನಿರಾಕರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:5
26 ತಿಳಿವುಗಳ ಹೋಲಿಕೆ  

ನಿಮ್ಮ ನಿವಾಸವು ಮೋಸದೊಳಗೆ ಇದೆ; ಅಯ್ಯೋ, ಅವರು ಮೋಸಗಾರರಾಗಿರುವುದರಿಂದ ನನ್ನನ್ನು ತಿಳಿಯರು ಎಂದು ಯೆಹೋವನು ನುಡಿಯುತ್ತಾನೆ.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.


“ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.


ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?


ಆದರೂ ಜೀವ ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಮನಸ್ಸಿಲ್ಲ.


ನನ್ನ ಕಡೆಯಿಂದ ತಿರಿಗಿಕೊಳ್ಳುವುದು ನನ್ನ ಜನರ ಗುಣವೇ; ಅವರನ್ನು ಮೇಲಕ್ಕೆ ಕರೆಯುವವರು ಇದ್ದರೂ, ಮೇಲಕ್ಕೆತ್ತುವವರು ಯಾರೂ ಇಲ್ಲ.


ಪಂಜರದಲ್ಲಿ ಪಕ್ಷಿಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸದ ಫಲವು ತುಂಬಿದೆ; ಇದರಿಂದ ಧನವಂತರಾಗಿದ್ದಾರೆ.


ಅವನು ತಿನ್ನುವುದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, “ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ” ಎಂದುಕೊಳ್ಳಲೂ ಆಗದು. ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.


ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.


ಆದರೆ ನೀವು ಹೊಂದಿರುವುದನ್ನು ನಾನು ಬರುವ ತನಕ ಭದ್ರವಾಗಿ ಹಿಡಿದುಕೊಂಡಿರಿ.


ಆದರೆ ಎಲ್ಲವನ್ನೂ ಪರೀಕ್ಷಿಸಿ ಒಳ್ಳೆಯದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.


ಇಸ್ರಾಯೇಲು ಮೊಂಡ ಹಸುವಿನಂತೆ ಮೊಂಡುತನದಿಂದ ನಡೆದಿದೆ; ಈಗ ಯೆಹೋವನು ಅದನ್ನು ಕುರಿಯಂತೆ ವಿಶಾಲ ಸ್ಥಳದಲ್ಲಿ ಮೇಯಿಸುವನೋ?


ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವುದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.


ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ” ಈ ಮಾತನ್ನು ಯೆಹೋವನೇ ನುಡಿದಿದ್ದಾನೆ.


ಸದುಪದೇಶವನ್ನು ಗ್ರಹಿಸಿಕೋ, ಸಡಿಲಬಿಡಬೇಡ, ಅದನ್ನು ಕಾಪಾಡಿಕೋ, ಅದೇ ನಿನ್ನ ಜೀವವು.


ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವುದು, ಕಾಡಿನ ತೋಳವು ಕೊಳ್ಳೆ ಹೊಡೆಯುವುದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವುದು. ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.


ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ, ನಿನ್ನ ಹೆಸರಿನ ನಿಮಿತ್ತ ಕಾರ್ಯವನ್ನು ಸಾಧಿಸು. ನಮ್ಮ ದ್ರೋಹಗಳು ಬಹಳ, ನಿನ್ನ ವಿರುದ್ಧವಾಗಿ ಪಾಪವನ್ನು ಮಾಡಿದ್ದೇವೆ.


ಇಸ್ರಾಯೇಲರೆಲ್ಲರೂ ನಿನ್ನ ಧರ್ಮಪ್ರಮಾಣವನ್ನು ಮೀರಿ ನಿನ್ನ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿನ್ನ ಶಾಪದ ಕೇಡುಗಳೂ, ದೇವಸೇವಕನಾದ ಮೋಶೆಯ ಧರ್ಮನಿಯಮದಲ್ಲಿ ನೀನು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳೂ ನಮ್ಮ ಮೇಲೆ ಸುರಿಯಲ್ಪಟ್ಟಿವೆ; ನಾವು ದೇವ ದ್ರೋಹಿಗಳೇ ಸರಿ.


‘ಆತನು ನಿತ್ಯ ಕೋಪಮಾಡುವವನೋ? ಕೊನೆಯ ತನಕ ಕೋಪವನ್ನು ಇಟ್ಟುಕೊಳ್ಳುವನೋ?’ ಎಂದು ಅಂದುಕೊಳ್ಳುತ್ತಿದ್ದಿ. ಇಗೋ, ನೀನು ಹೀಗೆ ಮಾತನಾಡಿದರೇನು? ಅನೇಕ ದುಷ್ಕೃತ್ಯಗಳನ್ನು ನಡೆಸಿ ಕೃತಾರ್ಥಳಾಗಿರುವೆ.” ಎಂಬುದೇ.


‘ತುತ್ತೂರಿಯ ಶಬ್ದವನ್ನು ಕೇಳಿರಿ’ ಎಂದು ನಾನು ಅವರ ಮೇಲೆ ಕಾವಲುಗಾರರನ್ನು ನೇಮಿಸಲು, ‘ನಾವು ಕೇಳುವುದಿಲ್ಲ’ ಎಂದು ಹೇಳಿದರು.


ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.


ಇಸ್ರಾಯೇಲ್ ಐಗುಪ್ತ ದೇಶಕ್ಕೆ ಹಿಂದಿರುಗದು; ಅದು ನನ್ನ ಕಡೆಗೆ ಹಿಂದಿರುಗಲು ಒಪ್ಪದ ಕಾರಣ ಅಶ್ಶೂರವೇ ಅದಕ್ಕೆ ರಾಜನಾಗಬೇಕು.


ಈಗ ಎಫ್ರಾಯೀಮ್ಯರು ಹೆಚ್ಚೆಚ್ಚಾಗಿ ಪಾಪಮಾಡುತ್ತಾರೆ, ತಮ್ಮ ಬೆಳ್ಳಿಯಿಂದ ಸ್ವಬುದ್ಧಿಗೆ ತಕ್ಕ ಎರಕದ ಬೊಂಬೆಗಳನ್ನು ರೂಪಿಸಿಕೊಂಡಿದ್ದಾರೆ; ಅವೆಲ್ಲಾ ಶಿಲ್ಪಿಗಳ ಕೈಕೆಲಸವೇ; ಇಂಥವುಗಳನ್ನು ಮಾತನಾಡಿಸುತ್ತಾರೆ, ಮನುಷ್ಯರಾದ ಪೂಜಾರಿಗಳು ಪಶುವಿನ ಮೂರ್ತಿಗಳನ್ನು ಮುದ್ದಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು