Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಜ್ಞಾನಿಗಳು ಆಶಾಭಂಗಪಟ್ಟು ಬೆಚ್ಚಿಬಿದ್ದು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಜ್ಞಾನಿಗಳು ನಾಚಿಕೆಪಡುವರು, ನಿಬ್ಬೆರಗಾಗಿ ಬೋನಿಗೆ ಸಿಕ್ಕಿಬೀಳುವರು. ಏಕೆಂದರೆ ಸರ್ವೇಶ್ವರನಾದ ನನ್ನ ಮಾತನ್ನು ಅವರು ನಿರಾಕರಿಸಿದ್ದಾರೆ. ಇದು ತಾನೋ ಅವರ ಜ್ಞಾನ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಜ್ಞಾನಿಗಳು ಆಶಾಭಂಗಪಟ್ಟು ಬೆಬ್ಬರಬಿದ್ದು ಸಿಕ್ಕಿಕೊಂಡಿದ್ದಾರೆ; ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ “ಜ್ಞಾನಿಗಳು” ಯೆಹೋವನ ಉಪದೇಶವನ್ನು ಕೇಳಲು ಒಪ್ಪಲಿಲ್ಲ. ಆದ್ದರಿಂದ ಅವರು ನಿಜವಾದ ಜ್ಞಾನಿಗಳಲ್ಲವೇ ಅಲ್ಲ. ಆ “ಜ್ಞಾನಿಗಳು” ಸಿಕ್ಕಿಹಾಕಿಕೊಂಡಿದ್ದಾರೆ. ಅವರು ಗಾಬರಿಪಟ್ಟಿದ್ದಾರೆ ಮತ್ತು ನಾಚಿಕೆಪಟ್ಟಿದ್ದಾರೆ. ಅವರ ಜ್ಞಾನವು ಅಪ್ರಯೋಜಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಜ್ಞಾನಿಗಳು ನಾಚಿಕೊಂಡಿದ್ದಾರೆ. ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವ ದೇವರ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಯಾವ ಜ್ಞಾನವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:9
21 ತಿಳಿವುಗಳ ಹೋಲಿಕೆ  

ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು” ಎಂದು ಯೆಹೋವನು ನುಡಿಯುತ್ತಾನೆ.


ಯುಕ್ತಿವಂತರ ಕೈಯಿಂದ ಏನೂ ಆಗದಂತೆ, ಅವರ ಉಪಾಯಗಳನ್ನು ಭಂಗಪಡಿಸುತ್ತಾನೆ.


ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.


ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿರುತ್ತದೆ. ನೀನು ಫರೋಹನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ.


ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.


ಇವುಗಳನ್ನು ಕೈಕೊಂಡು ಅನುಸರಿಸಿರಿ. ನೀವು ಅನುಸರಿಸಿ ನಡೆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ, ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ, “ಈ ದೊಡ್ಡ ಜನಾಂಗವು ಜ್ಞಾನವಿವೇಕವುಳ್ಳ ಜನಾಂಗ” ಎಂದು ಹೇಳುವರು.


ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ.


ಕೇಡಿನ ಮೇಲೆ ಕೇಡು, ಸುದ್ದಿಯ ಮೇಲೆ ಸುದ್ದಿ ಬರುವುದು; ‘ದಿವ್ಯದರ್ಶನವಾಯಿತೇ?’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ, ಸಮಾಲೋಚನೆಯು ಇಲ್ಲವಾಗುವುದು.


ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?


ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.


ಆತನು ತಮ್ಮ ಪೂರ್ವಿಕರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ, ತಮಗೆ ಹೇಳಿಸಿದ ಒಡಂಬಡಿಕೆಯನ್ನು ತಿರಸ್ಕರಿಸಿ, ವ್ಯರ್ಥವಾದ ದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ, ಅವರನ್ನು ಅನುಸರಿಸಿದರು.


ಹೀಗಿರುವುದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ, ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವುದು, ವಿವೇಕಿಗಳ ವಿವೇಕವು ಅಡಗುವುದು” ಎಂದು ಹೇಳಿದನು.


ಯೆಹೋವನ ಈ ಮಾತನ್ನು ಕೇಳು, ‘ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದಿ. ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಯಿತು.


ನಾನು ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಯೆರೂಸಲೇಮಿನವರ ಆಲೋಚನೆಯನ್ನು ಮಣ್ಣುಪಾಲುಮಾಡಿ, ಅವರ ಪ್ರಾಣವನ್ನು ಹುಡುಕುವ ಶತ್ರುಗಳ ಖಡ್ಗದಿಂದ ಅವರನ್ನು ಬೀಳಿಸಿ, ಆ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವನ್ನಾಗಿ ಮಾಡುವೆನು.


ಯೆಹೋವನು ಇಂತೆನ್ನುತ್ತಾನೆ, “ಯೆಹೂದವು ಮೂರು ದ್ರೋಹಗಳನ್ನು, ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಯೆಹೂದ್ಯರು ಯೆಹೋವನ ಧರ್ಮೋಪದೇಶವನ್ನು ನಿರಾಕರಿಸಿದರು. ಆತನ ವಿಧಿಗಳನ್ನು ಕೈಕೊಳ್ಳಲಿಲ್ಲ. ಅವರ ಪೂರ್ವಿಕರು ಹಿಂಬಾಲಿಸಿದ ಸುಳ್ಳುದೇವತೆಗಳು, ಇವರನ್ನು ದಾರಿ ತಪ್ಪುವಂತೆ ಮಾಡಿದವು.


“ಆ ದಿನದಲ್ಲಿ ಯಾವ ಪ್ರವಾದಿಯೇ ಆಗಲಿ ಪ್ರವಾದನೆ ಮಾಡಬೇಕೆಂದಿರುವಾಗ ತನಗಾದ ದರ್ಶನವನ್ನು ಪ್ರಕಟಿಸಲು ನಾಚಿಕೆಪಡುವನು; ಯಾವನೂ ಮೋಸಕ್ಕಾಗಿ ಕಂಬಳಿಯನ್ನು ಹೊದ್ದುಕೊಳ್ಳನು;


ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡಿದುಕೊಂಡು, ವಕ್ರಬುದ್ಧಿಯುಳ್ಳವರ ಆಲೋಚನೆಯನ್ನು ನಿರರ್ಥಕ ಮಾಡುತ್ತಾನೆ.


ನಿನ್ನ ಮೂಲಪಿತೃ ಪಾಪಮಾಡಿದ್ದಾನೆ, ನಿನ್ನ ಬೋಧಕರು ನನಗೆ ದ್ರೋಹಮಾಡಿದ್ದಾರೆ.


ಯಾಜಕರು, ‘ಯೆಹೋವನು ಎಲ್ಲಿ?’ ಎಂಬುದನ್ನು ವಿಚಾರಿಸಲಿಲ್ಲ. ಧರ್ಮೋಪದೇಶಕರು ನನ್ನನ್ನು ತಿಳಿಯಲ್ಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಆರಾಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು