Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ತ್ವರೆಪಟ್ಟು ನಮ್ಮ ನೇತ್ರಗಳಿಂದ ಧಾರೆಹೊರಡುವಂತೆಯೂ, ನಮ್ಮ ಕಣ್ಣುಗಳಿಂದ ನೀರುಕ್ಕುವಂತೆಯೂ ನಮಗೋಸ್ಕರ ಗೋಳಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಜನರು : “ಅವರು ತ್ವರೆಯಾಗಿ ಬಂದು ನಮಗೋಸ್ಕರ ಗೋಳೆತ್ತಲಿ ನಮ್ಮ ಕಣ್ಣುಗಳಿಂದ ನೀರು ಧಾರಾಕಾರವಾಗಿ ಸುರಿವಂತೆ ಮಾಡಲಿ ಕಣ್ಣಿನ ರೆಪ್ಪೆಗಳಿಂದ ನೀರು ಉಕ್ಕಿ ಹರಿವಂತೆ ಮಾಡಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ತ್ವರೆಪಟ್ಟು ನಮ್ಮ ನೇತ್ರಗಳಿಂದ ಧಾರೆ ಹೊರಡುವಂತೆಯೂ ನಮ್ಮ ರೆಪ್ಪೆಗಳೊಳಗಿಂದ ನೀರುಕ್ಕುವಂತೆಯೂ ನಮಗೋಸ್ಕರ ಗೋಳೆತ್ತಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ‘ಆ ಹೆಂಗಸರು, ಬೇಗನೆ ಬಂದು ನಮಗಾಗಿ ಗೋಳಾಡಲಿ. ಆಗ ನಮ್ಮ ಕಣ್ಣುಗಳು ಕಣ್ಣೀರಿನಿಂದ ತುಂಬುವವು; ನಮ್ಮ ಕಣ್ಣುಗಳಿಂದ ನೀರಿನ ಪ್ರವಾಹಗಳು ಹರಿಯುವವು’ ಎನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣುಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:18
19 ತಿಳಿವುಗಳ ಹೋಲಿಕೆ  

ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.


ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲಾ!


ಹೀಗಿರಲು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ, ಬಹು ಸಂಕಟದಿಂದ ನಾನು ಅಳುವೆನು, ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ.


ನಿನ್ನ ಜನರು ಕರ್ತನಿಗೆ ಮನಃಪೂರ್ವಕವಾಗಿ ಮೊರೆಯಿಟ್ಟಿದ್ದಾರೆ; “ಚೀಯೋನ್ ನಗರಿಯ ಕೋಟೆಯವರೇ, ನಿಮ್ಮ ಕಣ್ಣೀರು ಹಗಲಿರುಳೂ ತೊರೆಯಂತೆ ಹರಿಯಲಿ, ನಿಮಗೆ ವಿರಾಮವೇ ಬೇಡ, ಅದು ನಿಮ್ಮ ನೇತ್ರದಿಂದ ನಿಲ್ಲದೆ ಸುರಿಯಲಿ;


ಕಣ್ಣೀರು ಸುರಿಸಿ ಸುರಿಸಿ ನನ್ನ ಕಣ್ಣು ಇಂಗಿ ಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಕನ್ಯೆಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದುದರಿಂದ ನನ್ನ ಕರುಳು ಕರಗಿದೆ.


ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಾ ಗೋಳಾಡುವುದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ; ಆಕೆಯ ಬಹುಮಂದಿ ಪ್ರಿಯರಲ್ಲಿ ಯಾರೂ ಸಂತೈಸರು; ಆಕೆಯ ಮಿತ್ರರೆಲ್ಲಾ ದ್ರೋಹಮಾಡಿ ಶತ್ರುಗಳಾಗಿದ್ದಾರೆ.


ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.


ಸ್ತ್ರೀಯರೇ, ಯೆಹೋವನ ನುಡಿಯನ್ನು ಕೇಳಿ ಆತನ ಬಾಯಿಂದ ಹೊರಟ ಮಾತಿಗೆ ಕಿವಿದೆರೆಯಿರಿ. ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಡುವುದನ್ನು ಕಲಿಸಿರಿ, ಪ್ರತಿಯೊಬ್ಬಳು ತನ್ನ ನೆರೆಯವಳಿಗೂ ಶೋಕಗೀತವನ್ನು ಅಭ್ಯಾಸ ಮಾಡಿಸಲಿ;


“ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ.


ನನ್ನ ಪ್ರಜೆಯೆಂಬ ಯುವತಿಯೇ, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ದುಃಖಪಟ್ಟು ಘೋರಪ್ರಲಾಪ ಮಾಡು; ಕೊಳ್ಳೆಗಾರನು ತಟ್ಟನೆ ನಮ್ಮ ಮೇಲೆ ಬೀಳುವನಷ್ಟೆ.


ತರುವಾಯ ಆತನು ಯೆರೂಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ,


ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿಮಿತ್ತ, ನನ್ನ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ. ಸಾದ್ದಿ.


ಯೆರೂಸಲೇಮೇ, ತಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಟ್ಟು, ಬೋಳುಗುಡ್ಡಗಳಲ್ಲಿ ಶೋಕಗೀತವನ್ನು ಹಾಡು; ಯೆಹೋವನು ತನ್ನ ಕೋಪಕ್ಕೆ ಗುರಿಯಾದ ಈ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ.


ಸ್ವಜನರು ನಾಶವಾದ ಕಾರಣ ನನ್ನ ಕಣ್ಣೀರು ಹೊಳೆಹೊಳೆಯಾಗಿ ಹರಿಯುವುದು.


ಸೇನಾಧೀಶ್ವರ ದೇವರಾದ, ಯೆಹೋವನು ಇಂತೆನ್ನುತ್ತಾನೆ: “ಎಲ್ಲಾ ಚೌಕಗಳಲ್ಲಿ ಕಿರುಚಾಟವಾಗುವುದು ಮತ್ತು ಸಕಲ ಬೀದಿಗಳಲ್ಲಿ, ‘ಅಯ್ಯೋ! ಅಯ್ಯೋ!’ ಎಂದು ಅರಚಿಕೊಳ್ಳುವರು. ರೈತರನ್ನು ಪ್ರಲಾಪಿಸುವುದಕ್ಕೂ ಗೋಳಾಟದವರನ್ನು ಗೋಳಾಡುವುದಕ್ಕೂ ಕರೆಯುವರು.


ನಮ್ಮ ಪೂರ್ವಿಕರು ದುಡಿದದ್ದನ್ನೂ, ಅವರ ದನ ಮತ್ತು ಕುರಿಗಳನ್ನೂ ಅವರ ಗಂಡು, ಹೆಣ್ಣು ಮಕ್ಕಳನ್ನೂ ಬಾಳ್ ದೇವತೆಯು ನಮ್ಮ ಬಾಲ್ಯಾರಭ್ಯ ನುಂಗುತ್ತಾ ಬಂದಿದೆ.


ನಾವೇ ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ. ನಾವು ಮತ್ತು ನಮ್ಮ ಪೂರ್ವಿಕರೂ ಬಾಲ್ಯದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವನಿಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ. ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ” ಎಂದು ಮೊರೆಯಿಡುತ್ತಾರೆ.


ನಾಶದ ಮೇಲೆ ನಾಶವು, ಒಂದರ ಮೇಲೊಂದು ನಾಶದ ಸುದ್ದಿಬರುತ್ತಿದೆ; ದೇಶವೆಲ್ಲಾ ಹಾಳಾಯಿತು; ತಟ್ಟನೆ ನಮ್ಮ ಗುಡಾರಗಳು, ಕ್ಷಣಮಾತ್ರದಲ್ಲಿ ನಮ್ಮ ಡೇರೆಗಳು ಭಗ್ನವಾದವು.


ಯೆರೂಸಲೇಮ್ ಕನ್ಯೆಯೇ, ನಾನು ನಿನಗೆ ಏನು ಹೇಳಲಿ, ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಚೀಯೋನ್ ಕನ್ಯೆಯೇ, ನಿನ್ನನ್ನು ಸಂತೈಸಲು ಸಮಾಧಾನಕರ ಮಾತುಗಳನ್ನು ಎಲ್ಲಿಂದ ತರಲಿ? ನಿನ್ನ ನಾಶನವು ಸಾಗರದಷ್ಟು ಅಪಾರ, ನಿನ್ನನ್ನು ಯಾರು ಸ್ವಸ್ಥಮಾಡಬಲ್ಲರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು