ಯೆರೆಮೀಯ 9:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಸ್ತ್ರೀಯರೇ, ಯೆಹೋವನ ನುಡಿಯನ್ನು ಕೇಳಿ ಆತನ ಬಾಯಿಂದ ಹೊರಟ ಮಾತಿಗೆ ಕಿವಿದೆರೆಯಿರಿ. ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಡುವುದನ್ನು ಕಲಿಸಿರಿ, ಪ್ರತಿಯೊಬ್ಬಳು ತನ್ನ ನೆರೆಯವಳಿಗೂ ಶೋಕಗೀತವನ್ನು ಅಭ್ಯಾಸ ಮಾಡಿಸಲಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಾನು : “ಮಹಿಳೆಯರೇ, ಸರ್ವೇಶ್ವರ ಸ್ವಾಮಿಯ ನುಡಿಯನ್ನು ಕೇಳಿರಿ ಅವರ ಬಾಯಿಂದ ಹೊರಟ ಮಾತಿಗೆ ಕಿವಿ ತೆಗೆಯಿರಿ ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಟವನ್ನು ಕಲಿಸಿರಿ ಪ್ರತಿಯೊಬ್ಬಳೂ ತನ್ನ ನೆರೆಯವಳಿಗೆ ಶೋಕಗೀತೆಯನ್ನು ಹೇಳಿಕೊಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಸ್ತ್ರೀಯರೇ, ಯೆಹೋವನ ನುಡಿಯನ್ನು ಕೇಳಿ ಆತನ ಬಾಯಿಂದ ಹೊರಟ ಮಾತಿಗೆ ಕಿವಿದೆರೆಯಿರಿ; ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಟವನ್ನು ಕಲಿಸಿರಿ, ಪ್ರತಿಯೊಬ್ಬಳು ತನ್ನ ನೆರೆಯವಳಿಗೂ ಶೋಕಗೀತವನ್ನು ಅಭ್ಯಾಸಮಾಡಿಸಲಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೆಹೂದದ ಸ್ತ್ರೀಯರೇ, ಯೆಹೋವನ ಸಂದೇಶವನ್ನು ಕೇಳಿರಿ. ಯೆಹೋವನ ಬಾಯಿಂದ ಬರುವ ಮಾತುಗಳನ್ನು ಕೇಳಲು ನಿಮ್ಮ ಕಿವಿಗಳನ್ನು ತೆರೆಯಿರಿ. ಯೆಹೋವನು ಹೇಳುತ್ತಾನೆ, “ಹೇಗೆ ದೊಡ್ಡ ಧ್ವನಿಯಲ್ಲಿ ಅಳಬೇಕೆಂಬುದನ್ನು ನಿಮ್ಮ ಹೆಣ್ಣುಮಕ್ಕಳಿಗೆ ಕಲಿಸಿಕೊಡಿ. ಪ್ರತಿಯೊಬ್ಬ ಸ್ತ್ರೀಯು ಈ ಶೋಕಗೀತೆಯನ್ನು ಹಾಡಲು ಕಲಿಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದ್ದರಿಂದ ಓ ಸ್ತ್ರೀಯರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ. ನಿಮ್ಮ ಪುತ್ರಿಯರಿಗೆ ಗೋಳಾಟವನ್ನೂ, ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ. ಅಧ್ಯಾಯವನ್ನು ನೋಡಿ |