ಯೆರೆಮೀಯ 9:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 “ಈ ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುದು; ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಸಿವುಡಿನಂತೆ ಇರುವವು, ಯೆಹೋವನ ಈ ಮಾತನ್ನು ಸಾರು” ಎಂದು ನನಗೆ ಅಪ್ಪಣೆಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುವು ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಅರಿಗಳಂತಿರುವುವು - ಈ ಮಾತುಗಳನ್ನು ಸಾರುವಂತೆ ಸರ್ವೇಶ್ವರನಿಂದ ನನಗೆ ಅಪ್ಪಣೆಯಾಯಿತು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯೆಹೋವನ ಈ ಮಾತನ್ನು ಸಾರು ಎಂದು ನನಗೆ ಅಪ್ಪಣೆಯಾಯಿತು - ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವವು; ಅವು ಹೊಲಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಅರಿಗಳಂತಿರುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೆರೆಮೀಯನೇ, ಯೆಹೋವನು ಹೀಗೆ ಹೇಳುತ್ತಾನೆಂದು ಹೇಳು: “‘ಹೊಲಗಳಲ್ಲಿ ಗೊಬ್ಬರ ಬಿದ್ದಂತೆ ಹೆಣಗಳು ಬೀಳುವವು. ಆ ಶವಗಳು ಹೊಲ ಕೊಯ್ಯುವವನ ಹಿಂದೆ ಯಾರೂ ಎತ್ತದೆ ಬಿದ್ದಿರುವ ಮೆದೆಗಳಂತೆ ಬಿದ್ದಿರುವವು.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಯೆಹೋವ ದೇವರು ನನಗೆ ಹೀಗೆಂದರು: “ ‘ಮನುಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳುವುವು. ಧಾನ್ಯ ಕೊಯ್ಯುವವನು ಉಳಿಸಿದ ಕೈಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವುವು.’ ” ಅಧ್ಯಾಯವನ್ನು ನೋಡಿ |