Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನು ಹೀಗೆನ್ನುತ್ತಾನೆ, “ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರಮಿಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರ ಸ್ವಾಮಿ : “ಜ್ಞಾನಿ ತನ್ನ ಜ್ಞಾನಕ್ಕಾಗಿ, ಪರಾಕ್ರಮಿ ತನ್ನ ಪರಾಕ್ರಮಕ್ಕಾಗಿ ಐಶ್ವರ್ಯವಂತ ತನ್ನ ಐಶ್ವರ್ಯಕ್ಕಾಗಿ ಹೆಚ್ಚಳಪಡದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೋವನು ಹೀಗನ್ನುತ್ತಾನೆ - ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರವಿುಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆಹೋವನು ಹೇಳುತ್ತಾನೆ, “ಜ್ಞಾನಿಗಳು ತಮ್ಮ ಜ್ಞಾನದ ಬಗ್ಗೆ ಜಂಬಕೊಚ್ಚಿಕೊಳ್ಳಬಾರದು. ಬಲಶಾಲಿಗಳು ತಮ್ಮ ಬಲದ ಬಗ್ಗೆ ಬಡಾಯಿಕೊಚ್ಚಿಕೊಳ್ಳಬಾರದು. ಶ್ರೀಮಂತರು ತಮ್ಮ ಸಂಪತ್ತಿನ ಬಗ್ಗೆ ಜಂಬಕೊಚ್ಚಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳ ಪಡದಿರಲಿ. ಬಲಿಷ್ಠನು ತನ್ನ ಬಲದಲ್ಲಿ ಹೆಚ್ಚಳ ಪಡದಿರಲಿ. ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳ ಪಡದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:23
54 ತಿಳಿವುಗಳ ಹೋಲಿಕೆ  

ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!.


ನಾನು ಲೋಕದಲ್ಲಿ ತಿರುಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲುವಿಲ್ಲ. ಬಲಿಷ್ಠರಿಗೆ ಯುದ್ಧದಲ್ಲಿ ಜಯವಿಲ್ಲ. ಜ್ಞಾನಿಗಳಿಗೆ ಅನ್ನ ಸಿಕ್ಕದು. ವಿವೇಕಿಗಳಿಗೆ ಧನ ಲಭಿಸದು. ಪ್ರವೀಣರಿಗೆ ದಯೆ ದೊರಕದು. ಕಾಲವೂ, ಗತಿಯೂ ಅವರೆಲ್ಲರಿಗೆ ಸಂಭವಿಸುತ್ತದೆ.


ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.


ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ಪದಾರ್ಥದಂತಿರುವುದು; ಯೆಹೋವನು ತನ್ನ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರವು ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರುವುದಿಲ್ಲ, ಅವರ ಹೊಟ್ಟೆ ತುಂಬುವುದಿಲ್ಲ; ಏಕೆಂದರೆ ಅವರ ಆಸ್ತಿಯು ಅವರಿಗೆ ಪಾಪಕಾರಿ ವಿಘ್ನವಾಗಿದೆ.


ಧನವು ಕೋಪದ ದಿನದಲ್ಲಿ ವ್ಯರ್ಥ, ಧರ್ಮವು ಮರಣವಿಮೋಚಕ.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.


ನಿಮ್ಮ ಮನಸ್ಸಿನೊಳಗೆ, “ಈ ಭಾಗ್ಯವು ನಮ್ಮ ಸಾಮರ್ಥ್ಯ ಮತ್ತು ಸಾಹಸಗಳಿಂದಲೇ ನಮಗುಂಟಾಯಿತು” ಎಂದು ಅಂದುಕೊಂಡೀರಿ.


ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.


ಶಿಷ್ಯರು ಆತನ ಮಾತುಗಳನ್ನು ಕೇಳಿ ಅಶ್ಚರ್ಯಪಟ್ಟರು. ಆದರೆ ಯೇಸು ಪುನಃ ಅವರಿಗೆ, “ಮಕ್ಕಳೇ, ದೇವರ ರಾಜ್ಯದಲ್ಲಿ ಸೇರುವುದು ಬಹಳ ಕಷ್ಟ.


ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿ, ಬಂಗಾರಗಳೂ ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವುದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲಮಾಡುವನು!


ಈ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಅಂದುಕೊಂಡ ಕಾರಣ ಐಗುಪ್ತ ದೇಶವು ಹಾಳಾಗುವುದು. ಆಗ ನಾನೇ ಯೆಹೋವನು’ ಎಂದು ಅವರಿಗೆ ಗೊತ್ತಾಗುವುದು.


ಅವನು ಹೇಳುವುದೇನೆಂದರೆ, “ನನ್ನ ಅಧಿಪತಿಗಳೆಲ್ಲಾ ಅರಸರಲ್ಲವೇ?


ಅವನು ಜ್ಞಾನಿಯೋ ಅಥವಾ ಮೂಢನೋ ಯಾರಿಗೆ ಗೊತ್ತು? ಎಂಥವನಾದರೂ ನಾನು ಲೋಕದೊಳಗೆ ಯಾವುದರಲ್ಲಿ ಜ್ಞಾನವನ್ನೂ, ಪ್ರಯಾಸವನ್ನೂ ವೆಚ್ಚಮಾಡಿದ್ದೇನೋ ಅದರ ಮೇಲೆ ದೊರೆತನಮಾಡುವೆನು. ಇದೂ ವ್ಯರ್ಥವೇ.


ಫಿಲಿಷ್ಟಿಯನು ಕೆಂಬಣ್ಣದವನೂ, ಸುಂದರನೂ, ಯೌವನಸ್ಥನೂ ಆದ ದಾವೀದನನ್ನು ನೋಡಿ ತಿರಸ್ಕಾರದಿಂದ ಅವನಿಗೆ,


“ಈಗಲಾದರೂ ನೀವು ಸಿದ್ಧವಾಗಿದ್ದು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು?” ಎಂದು ಹೇಳಿದನು.


“ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ” ಎಂಬ ವೇದೋಕ್ತಿ ನೆರವೇರುವುದಕ್ಕಾಗಿಯೇ ಹೀಗಾಯಿತು.


ಇಷ್ಟೇ ಅಲ್ಲದೆ, ನನ್ನ ಕರ್ತನಾದ ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ.


ಆತನನ್ನೂ ಆತನ ಪುನರುತ್ಥಾನದಲ್ಲಿರುವ ಶಕ್ತಿಯನ್ನೂ, ಆತನ ಬಾಧೆಗಳಲ್ಲಿ ಪಾಲುಗಾರನಾಗಿರುವ ಪದವಿಯನ್ನೂ ತಿಳಿದುಕೊಂಡು ಆತನ ಮರಣದ ವಿಷಯದಲ್ಲಿ ಆತನಂತೆ ರೂಪಾಂತರಗೊಳ್ಳಬೇಕೆಂಬುದೇ ನನ್ನ ಬಯಕೆಯಾಗಿದೆ.


‘ನಾವು ಅವನಲ್ಲಿ ಜ್ಞಾನವನ್ನು ಕಂಡುಕೊಂಡಿದ್ದೇವೆ, ದೇವರೇ ಅವನನ್ನು ಖಂಡಿಸಿಬಿಡಲಿ, ಮನುಷ್ಯನಿಂದಾಗುವುದಿಲ್ಲ’ ಎಂದು ಅಂದುಕೊಳ್ಳಬೇಡಿರಿ.


ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.


ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.


ಆಗ ನನ್ನ ಜನರು ತಾವು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿಮಿತ್ತವಾಗಿಯೂ, ಕೊಚ್ಚಿಕೊಂಡಿದ್ದ ಐಗುಪ್ತದ ವಿಷಯವಾಗಿಯೂ ಬೆಚ್ಚಿಬೆರಗಾಗಿ ನಾಚಿಕೆಪಡುವರು.


ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು, “ನನ್ನನ್ನು ಯಾರೂ ನೋಡರು?” ಎಂದುಕೊಂಡಿದ್ದಿ. ನನ್ನ ಜ್ಞಾನವಿವೇಕಗಳು ನಿನ್ನನ್ನು ಸೊಟ್ಟಗೆ ತಿರುಗಿಸಿದ್ದರಿಂದ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಎಂದು ಯೋಚಿಸಿಕೊಂಡಿದ್ದಿ.


ನೀನು ನಿನ್ನ ಕೆಲಸಗಳಲ್ಲಿಯೂ, ಧನರಾಶಿಗಳಲ್ಲಿಯೂ ಭರವಸವಿಟ್ಟದ್ದರಿಂದ ನೀನೂ ಶತ್ರುವಿನ ಕೈವಶವಾಗುವಿ; ಕೆಮೋಷ್ ದೇವತೆಯೂ ಅದರ ಭಕ್ತರಾದ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.


‘ನನ್ನ ಮೇಲೆ ಯಾರು ತಾನೆ ಬಿದ್ದಾರು?’ ಎಂದು ಸ್ವಂತ ಆಸ್ತಿಪಾಸ್ತಿಯಲ್ಲಿ ಭರವಸೆ ಇಟ್ಟಿರುವ ಭ್ರಷ್ಟದೇಶವೇ, ‘ನನ್ನ ತಗ್ಗುಗಳಲ್ಲಿ ತುಂಬಾ ನೀರು ಹರಿಯುತ್ತದೆಂದು’ ಏಕೆ ಕೊಚ್ಚಿಕೊಳ್ಳುತ್ತೀ?


ಗುರಾಣಿಗಳ ಸಾಲುಗಳು ಅದರ ಹೆಚ್ಚಳಕ್ಕೆ ಆಸ್ಪದವಾಗಿದೆ. ಅವು ಬಿಗಿದು ಮುದ್ರಿಸಲ್ಪಟ್ಟಿವೆ.


ಆತನು ನೀತಿ ಮತ್ತು ನ್ಯಾಯಗಳನ್ನು ಪ್ರೀತಿಸುವವನು; ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ.


ನನ್ನೊಡನೆ ಯೆಹೋವನನ್ನು ಕೊಂಡಾಡಿರಿ; ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ.


ಆದರೆ ಈಗ ನೀನು ನಮ್ಮನು ಕೈಬಿಟ್ಟಿದ್ದೀ, ಅವಮಾನಪಡಿಸಿದಿ; ನಮ್ಮ ಸೈನ್ಯಗಳ ಸಂಗಡ ನೀನು ಹೋಗಲಿಲ್ಲ.


ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.


“‘ನಾವು ಶೂರರು, ಯುದ್ಧಪ್ರವೀಣರಾದ ಪರಾಕ್ರಮಶಾಲಿಗಳು’ ಎಂದು ನೀವು ಅಂದುಕೊಳ್ಳುವುದು ಹೇಗೆ?


ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು