Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು, ನಾನು ಲೋಕದಲ್ಲಿ ಪ್ರೀತಿ, ನೀತಿ ಮತ್ತು ನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬುವುದಕ್ಕೇ ಹೆಚ್ಚಳಪಡಲಿ; ಪ್ರೀತಿ, ನೀತಿ ಮತ್ತು ನ್ಯಾಯಗಳೇ ನನಗೆ ಆನಂದ” ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಹೆಚ್ಚಳಪಡುವವನು ನನ್ನನ್ನು ತಾನು ತಿಳಿದುಕೊಂಡದ್ದಕ್ಕಾಗಿ ಹೆಚ್ಚಳಪಡಲಿ; ಜಗದಲ್ಲಿ ಅಚಲ ಪ್ರೀತಿಯನ್ನೂ ನ್ಯಾಯನೀತಿಯನ್ನೂ ತೋರ್ಪಡಿಸುವ ಸರ್ವೇಶ್ವರ ನಾನೇ; ನನಗೆ ಪ್ರಿಯವಾದುವು ಪ್ರೀತಿ, ನೀತಿ, ನ್ಯಾಯಗಳೇ. ಇದನ್ನು ಗ್ರಹಿಸಿಕೊಂಡದ್ದಕ್ಕಾಗಿ ಹೆಚ್ಚಳಪಡಲಿ. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು ನಾನು ಲೋಕದಲ್ಲಿ ಪ್ರೀತಿನೀತಿನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬದಕ್ಕೇ ಹೆಚ್ಚಳಪಡಲಿ; ಪ್ರೀತಿನೀತಿನ್ಯಾಯಗಳೇ ನನಗೆ ಆನಂದವೆಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯಾವನಾದರೂ ಜಂಬಕೊಚ್ಚಿಕೊಳ್ಳಬೇಕಾದರೆ, ಅವನು ನನ್ನನ್ನು ಅರಿತಿರುವುದಾಗಿಯೂ ನನ್ನನ್ನು ತಿಳಿದುಕೊಂಡಿರುವುದಾಗಿಯೂ ಜಂಬಪಡಲಿ. ನಾನೇ ಯೆಹೋವನೆಂದು ತಿಳಿದುಕೊಂಡಿರುವುದಕ್ಕಾಗಿ ಅವನು ಜಂಬಪಡಲಿ. ನಾನು ದಯಾವಂತನೂ ನ್ಯಾಯವಂತನೂ ಆಗಿರುವೆ, ನಾನು ಭೂಲೋಕದಲ್ಲಿ ಒಳ್ಳೆಯದನ್ನು ಮಾಡುತ್ತೇನೆ ಎಂದು ತಿಳಿದುಕೊಂಡಿರುವವನು ಹೆಮ್ಮೆಪಡಲಿ. ಆಗ ನನಗೆ ಸಂತೋಷವಾಗುವುದು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ ಹೆಚ್ಚಳ ಪಡುವವನು, ಯೆಹೋವ ದೇವರಾದ ನಾನು ಭೂಮಿಯಲ್ಲಿ ದಯೆಯನ್ನೂ, ನ್ಯಾಯವನ್ನೂ, ನೀತಿಯನ್ನೂ ನಡೆಸುವವನಾಗಿದ್ದೇನೆಂದು ಗ್ರಹಿಸಿ ತಿಳಿದುಕೊಳ್ಳುವುದರಲ್ಲಿಯೇ ಹೆಚ್ಚಳ ಪಡಲಿ. ಇವುಗಳಲ್ಲಿ ನಾನು ಸಂತೋಷಪಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:24
33 ತಿಳಿವುಗಳ ಹೋಲಿಕೆ  

“ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ.”


ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು.


“ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ” ಎಂಬ ವೇದೋಕ್ತಿ ನೆರವೇರುವುದಕ್ಕಾಗಿಯೇ ಹೀಗಾಯಿತು.


ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.


ದೇವರೇ, ನಿನ್ನಲ್ಲಿಯೇ ಯಾವಾಗಲೂ ಹಿಗ್ಗುತ್ತಿದ್ದೇವೆ; ನಿನ್ನ ನಾಮವನ್ನೇ ಸದಾಕಾಲವೂ ಕೀರ್ತಿಸುವೆವು.


ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.


ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.


ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.


ಅವನು ನನ್ನಲ್ಲಿ ಆಸಕ್ತನಾಗಿರುವುದರಿಂದ ಅವನನ್ನು ರಕ್ಷಿಸುವೆನು; ನನ್ನ ನಾಮವನ್ನು ಅರಿತವನಾಗಿರುವುದರಿಂದ ಅವನನ್ನು ಉದ್ಧರಿಸುವೆನು.


ಅದಕ್ಕೆ ಸಮುವೇಲನು, “ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವುದಕ್ಕಿಂತ ಆತನ ಆಜ್ಞಾಪಾಲನೆ ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು.


ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.


ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವುದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾಮಿಯಲ್ಲಿ ಹೆಚ್ಚಳಪಡುವಿ.


ಇಷ್ಟು ಮಾತ್ರವಲ್ಲದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಸಂಧಾನವಾದದ್ದರಿಂದ ಆತನ ಮುಖಾಂತರ ದೇವರಲ್ಲಿ ಉಲ್ಲಾಸಪಡುತ್ತೇವೆ.


‘ಯೆಹೋವನ ಜೀವದಾಣೆ’ ಎಂದು ಸತ್ಯ, ನ್ಯಾಯ ಮತ್ತು ಧರ್ಮಾನುಸಾರವಾಗಿ ನೀನು ಪ್ರಮಾಣ ಮಾಡಿದರೆ, ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು” ಎಂದು ಹೇಳುತ್ತಾನೆ.


ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ. ಕೊಳ್ಳೆಯನ್ನೂ, ಅನ್ಯಾಯವನ್ನೂ ದ್ವೇಷಿಸುತ್ತೇನೆ. ನಾನು ಇವರ ನಷ್ಟಕ್ಕೆ ಬದಲಾಗಿ ಪ್ರತಿಫಲವನ್ನು ಪ್ರಾಮಾಣಿಕವಾಗಿ ಕೊಟ್ಟು, ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.


ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ, ಯಾಕೋಬ್ಯರಲ್ಲಿ ನ್ಯಾಯ, ನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.


ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ, ತಂದೆ ಎಂಥವನೆಂದು ಮಗನ ಹೊರತು ಇನ್ನಾರು ತಿಳಿದಿರುವುದಿಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ, ಅವನೂ ಆತನನ್ನು ತಿಳಿದವನಾಗಿದ್ದಾನೆ” ಅಂದನು.


ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ.


ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.


ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು” ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.


ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.


ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದು; ಇದನ್ನು ದೀನರು ಕೇಳಿ ಸಂತೋಷಿಸುವರು.


ಆಗ ನನ್ನ ಜನರು ತಾವು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿಮಿತ್ತವಾಗಿಯೂ, ಕೊಚ್ಚಿಕೊಂಡಿದ್ದ ಐಗುಪ್ತದ ವಿಷಯವಾಗಿಯೂ ಬೆಚ್ಚಿಬೆರಗಾಗಿ ನಾಚಿಕೆಪಡುವರು.


ದೀನದರಿದ್ರರ ವ್ಯಾಜ್ಯವನ್ನು ತೀರಿಸುತ್ತಿದ್ದನು; ಆಗ ಸುಖವಾಗಿತ್ತು. ನನ್ನನ್ನು ಅರಿಯುವುದೆಂದರೆ ಇದೇ ಎಂಬುದು ಯೆಹೋವನ ನುಡಿ.


ನನ್ನೊಡನೆ ಯೆಹೋವನನ್ನು ಕೊಂಡಾಡಿರಿ; ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ.


ಆದರೆ ಈಗ ನೀನು ನಮ್ಮನು ಕೈಬಿಟ್ಟಿದ್ದೀ, ಅವಮಾನಪಡಿಸಿದಿ; ನಮ್ಮ ಸೈನ್ಯಗಳ ಸಂಗಡ ನೀನು ಹೋಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು