ಯೆಶಾಯ 1:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನು ಹೀಗೆನ್ನುತ್ತಾನೆ, “ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸ್ವಾಮಿ ಇಂತೆನ್ನುತ್ತಾರೆ : “ನೀವು ಅರ್ಪಿಸುವ ಅಸಂಖ್ಯಾತ ಬಲಿದಾನಗಳಿಂದ ನನಗೇನು ಪ್ರಯೋಜನ? ಟಗರುಗಳು, ಸರ್ವಾಂಗಹೋಮ, ಪುಷ್ಟಪಶುಗಳ ಕೊಬ್ಬು ಇವೆಲ್ಲ ನನಗೆ ಬೇಸರ. ಹೋತಹೋರಿಗಳ, ಕುರಿಮರಿಗಳ ರಕ್ತ ನನಗೆ ತಾತ್ಸಾರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೆಹೋವನು ಹೀಗೆನ್ನುತ್ತಾನೆ - ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿಕುರಿಹೋತಗಳ ರಕ್ತಕ್ಕೆ ನಾನು ಒಲಿಯೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೆಹೋವನು ಹೇಳುವುದೇನೆಂದರೆ, “ಈ ಯಜ್ಞಗಳನ್ನೆಲ್ಲ ನೀವು ನನಗೆ ಕೊಡುತ್ತಲೇ ಇರುವುದೇಕೆ? ನಿಮ್ಮ ಆಡುಗಳ ಯಜ್ಞಗಳೂ, ಹೋರಿಗಳ, ಕುರಿಗಳ, ಆಡುಗಳ ಕೊಬ್ಬೂ ನನಗೆ ಬೇಕಿಲ್ಲ. ಅವುಗಳ ರಕ್ತಕ್ಕೆ ನಾನು ಪ್ರಸನ್ನನಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು?” ಎಂದು ಯೆಹೋವ ದೇವರು ನುಡಿಯುತ್ತಾರೆ. “ಟಗರುಗಳ ದಹನಬಲಿಗಳು, ಪುಷ್ಟಪಶುಗಳ ಕೊಬ್ಬು ಇದೆಲ್ಲಾ ನನಗೆ ಬೇಸರ. ಹೋರಿ, ಕುರಿ, ಹೋತಗಳ ರಕ್ತಕ್ಕೆ, ನಾನು ಸಂತೋಷಪಡುವುದಿಲ್ಲ. ಅಧ್ಯಾಯವನ್ನು ನೋಡಿ |