ಯೆಶಾಯ 1:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನೀವು ಕೈಯೆತ್ತಿ ಬೇಡುವಾಗ ನಾನು ಕಣ್ಣುಮುಚ್ಚಿಕೊಳ್ಳುವೆನು. ನೀವು ಎಷ್ಟೇ ಪ್ರಾರ್ಥನೆಗಳನ್ನು ಮಾಡಿದರೂ ನಾನು ಕಿವಿಗೊಡೆನು, ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನೀವು [ನನ್ನ ಕಡೆಗೆ] ಕೈಯೆತ್ತುವಾಗ ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿದರೂ ನಾನು ಕೇಳೆನು, ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ನೀವು ನನಗೆ ಪ್ರಾರ್ಥಿಸುವಾಗ ನಿಮ್ಮ ಕೈಗಳನ್ನೆತ್ತುವಿರಿ, ಆದರೆ ನಾನು ನಿಮ್ಮ ಕಡೆಗೆ ನೋಡುವುದಿಲ್ಲ. ನೀವು ಹೆಚ್ಚೆಚ್ಚಾಗಿ ಪ್ರಾರ್ಥಿಸುವಿರಿ, ಆದರೂ ನಾನು ನಿಮಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಿಮ್ಮ ಕೈಗಳು ರಕ್ತದಿಂದ ತುಂಬಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನೀವು ಪ್ರಾರ್ಥಿಸಲು ನಿಮ್ಮ ಕೈಗಳನ್ನು ಚಾಚುವಾಗ, ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿದರೂ ನಾನು ಕೇಳೆನು. “ನಿಮ್ಮ ಕೈಗಳು ರಕ್ತದಿಂದ ತೊಯ್ದಿವೆ! ಅಧ್ಯಾಯವನ್ನು ನೋಡಿ |