ಯೆಶಾಯ 1:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ತೊಳೆದುಕೊಳ್ಳಿರಿ, ನಿಮ್ಮನ್ನೆ ಶುದ್ಧಮಾಡಿಕೊಳ್ಳಿರಿ. ಕಣ್ಣಿಗೆ ಕಟ್ಟಿದಂತಿರುವ ನಿಮ್ಮ ದುಷ್ಕೃತ್ಯಗಳು ನೀಗಿಹೋಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿಮ್ಮನ್ನು ತೊಳೆದುಕೊಳ್ಳಿರಿ, ಶುದ್ಧಿಮಾಡಿಕೊಳ್ಳಿರಿ, ನನ್ನ ಕಣ್ಣೆದುರಿನ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ನಿಮ್ಮನ್ನು ಶುದ್ಧಿಮಾಡಿಕೊಳ್ಳಿರಿ; ಶುಚಿಪಡಿಸಿಕೊಳ್ಳಿರಿ. ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ; ಅವುಗಳನ್ನು ನೋಡಲು ನನಗೆ ಮನಸ್ಸಿಲ್ಲ. ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಿರಿ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ನಿಮ್ಮನ್ನು ತೊಳೆದುಕೊಂಡು ಶುದ್ಧಮಾಡಿಕೊಳ್ಳಿರಿ. ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟಕೃತ್ಯಗಳನ್ನು ತೆಗೆದುಹಾಕಿರಿ. ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ. ಅಧ್ಯಾಯವನ್ನು ನೋಡಿ |
ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.