Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಿನ್ನ ಅಧಿಪತಿಗಳೇ ದ್ರೋಹಿಗಳಾಗಿದ್ದಾರೆ, ಕಳ್ಳರ ಗೆಳೆಯರಾಗಿದ್ದಾರೆ. ಎಲ್ಲರೂ ಲಂಚಕೋರರಾಗಿದ್ದಾರೆ. ಕಪ್ಪಕಾಣಿಕೆಗಳಿಗೆ ಕೈಯೊಡ್ಡುತ್ತಾರೆ. ಆದರೆ ಅನಾಥರ ಪರವಾಗಿ ವಾದಿಸುವುದಿಲ್ಲ. ವಿಧವೆಯರ ವ್ಯಾಜ್ಯವನ್ನು ತೀರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಿನ್ನ ಅಧಿಕಾರಿಗಳು ದ್ರೋಹಿಗಳೂ ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಆಶಿಸಿ ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸರು; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಿಮ್ಮನ್ನಾಳುವವರು ದಂಗೆಕೋರರಾಗಿದ್ದಾರೆ; ಕಳ್ಳರ ಮಿತ್ರರಾಗಿದ್ದಾರೆ; ಲಂಚಕೋರರಾಗಿದ್ದಾರೆ; ಹಣಕ್ಕಾಗಿ ಕೆಟ್ಟದ್ದನ್ನು ಮಾಡುತ್ತಾರೆ; ಹಣಕ್ಕಾಗಿ ಮೋಸ ಮಾಡುತ್ತಾರೆ. ಅನಾಥರಿಗೆ ಸಹಾಯ ಮಾಡದವರಾಗಿದ್ದಾರೆ; ವಿಧವೆಯರ ಅಗತ್ಯತೆಗಳಿಗೆ ಲಕ್ಷ್ಯ ಕೊಡದವರಾಗಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಿನ್ನ ಪ್ರಭುಗಳು ಎದುರುಬೀಳುವವರೂ, ಕಳ್ಳರ ಜೊತೆಗಾರರೂ ಆಗಿದ್ದಾರೆ. ಪ್ರತಿಯೊಬ್ಬನೂ ಲಂಚ ಪ್ರಿಯನೂ, ಬಹುಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ. ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:23
47 ತಿಳಿವುಗಳ ಹೋಲಿಕೆ  

ಎರಡು ಕೈಗಳನ್ನು ಹಾಕಿ ಕೆಟ್ಟ ಕೆಲಸವನ್ನು ಚೆನ್ನಾಗಿ ಮಾಡುತ್ತಾರೆ. ಪ್ರಭುವು ಧನವನ್ನು ಕೇಳುತ್ತಾನೆ. ನ್ಯಾಯಾಧಿಪತಿಯು ಲಂಚಕ್ಕೆ ಕೈಯೊಡ್ಡುತ್ತಾನೆ. ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ. ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.


ಒಬ್ಬರಿಗೊಬ್ಬರು ಪ್ರೀತಿ, ಕರುಣೆಗಳನ್ನು ತೋರಿಸಿರಿ; ವಿಧವೆ, ಅನಾಥ, ವಿದೇಶಿ, ದರಿದ್ರರಿಗೂ ಅನ್ಯಾಯಮಾಡಬೇಡಿರಿ; ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.’


ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಕಣ್ಣುಳ್ಳವರನ್ನು ಕುರುಡರಂತೆ ಮಾಡುತ್ತದೆ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.


“‘ನನ್ನ ಆಲಯವು ಪ್ರಾರ್ಥನಾಲಯವಾಗಿರುವುದು’ ಎಂದು ಬರೆಯಲ್ಪಟ್ಟಿದೆಯಲ್ಲಾ, ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ” ಎಂದು ಹೇಳಿ ಅವರನ್ನು ಹೊರಗೆ ಅಟ್ಟಿದನು.


“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಯೆಹೋವನು ತನ್ನ ಜನರ ಹಿರಿಯರನ್ನು, ಅಧಿಕಾರಿಗಳನ್ನೂ ನ್ಯಾಯವಿಚಾರಣೆಗೆ ತರುವನು. ಏಕೆಂದರೆ, “ನೀವು ದ್ರಾಕ್ಷಿಯ ತೋಟವನ್ನು ನುಂಗಿಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.


ಮತ್ತು ಆತನು ಉಪದೇಶಮಾಡಿ, “‘ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವುದು’ ಎಂದು ಬರೆದಿದೆಯಲ್ಲಾ? ಆದರೆ ‘ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ’” ಎಂದು ಹೇಳಿದನು.


ಆತನು ಅವರಿಗೆ, “‘ನನ್ನ ಮನೆಯು ಪ್ರಾರ್ಥನಾಲಯವಾಗಿದೆ’ ಎಂದು ಬರೆದಿದೆ; ಆದರೆ ನೀವು ಅದನ್ನು ಕಳ್ಳರ ಗವಿ ಮಾಡುತ್ತಿದ್ದೀರಿ” ಎಂದು ಹೇಳಿದನು.


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.


ಅವರ ದುಷ್ಟತನವು ಗಿಲ್ಗಾಲಿನಲ್ಲಿ ತುಂಬಿದೆ; ಅಲ್ಲೇ ನನ್ನ ದ್ವೇಷಕ್ಕೆ ಗುರಿಯಾಗಿದ್ದಾರೆ; ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರನ್ನು ನನ್ನ ನಿವಾಸದೊಳಗಿಂದ ಓಡಿಸಿಬಿಡುವೆನು; ಅವರನ್ನು ಇನ್ನು ಪ್ರೀತಿಸೆನು; ಅವರ ಅಧಿಕಾರಿಗಳೆಲ್ಲರೂ ದ್ರೋಹಿಗಳೇ ಸರಿ.


ಮದ್ಯಪಾನ ಮುಗಿದ ಕೂಡಲೆ ವ್ಯಭಿಚಾರದಲ್ಲಿ ತೊಡಗುತ್ತಾರೆ; ದೇಶಪಾಲಕರು ಅವಮಾನದಲ್ಲಿ ಅತ್ಯಾಶೆಪಡುತ್ತಾರೆ.


ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ.


ನಾನು ದೊಡ್ಡ ಮನುಷ್ಯರ ಬಳಿಗೆ ಹೋಗಿ ಅವರ ಸಂಗಡ ಮಾತನಾಡುವೆನು; ಯೆಹೋವನ ಮಾರ್ಗವು ಮತ್ತು ಅವರ ದೇವರ ನ್ಯಾಯವಿಧಿಗಳೂ ಅವರಿಗೆ ಗೊತ್ತು” ಅಂದುಕೊಂಡೆನು. ಆದರೆ ಈ ದೊಡ್ಡ ಮನುಷ್ಯರು ಒಂದು ಮನಸ್ಸಿನಿಂದ ತಮ್ಮ ಹೆಗಲ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತುಬಿಟ್ಟಿದ್ದಾರೆ.


ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು, ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು.


ಕಳ್ಳನೊಂದಿಗೆ ಪಾಲುಗಾರನಾದವನು ತನಗೆ ತಾನೇ ಶತ್ರು, ಆಣೆಯಿಡುವುದನ್ನು ಕೇಳಿದರೂ ಸುಮ್ಮನಿರುವನು.


ದುಷ್ಟನು ಲಂಚವನ್ನು ಗುಪ್ತವಾಗಿ ತೆಗೆದುಕೊಂಡು, ನ್ಯಾಯವನ್ನು ತಪ್ಪಿಸುವನು.


ಪ್ರಧಾನಯಾಜಕರೂ, ಪ್ರಜೆಗಳೂ ಕೂಡ ಮಹಾ ದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯ ಕೃತ್ಯಗಳನ್ನು ಅನುಸರಿಸಿ, ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇಮಿನ ದೇವಾಲಯವನ್ನು ಹೊಲೆಮಾಡಿದರು.


ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.


ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.


ನಿನ್ನ ಬೆಳ್ಳಿಯು ಅಶುದ್ಧವಾಯಿತು. ನಿನ್ನ ದ್ರಾಕ್ಷಾರಸವು ನೀರಾಯಿತು.


ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ, ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನು ಹೇಳಲಿ!


ಯೆಹೋವನು ಹೀಗೆ ನುಡಿಯುತ್ತಾನೆ, “ದ್ರೋಹಿಗಳಾದ ನನ್ನ ಮಕ್ಕಳ ಗತಿಯನ್ನು ಏನು ಹೇಳಲಿ” “ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಮಾಡಿ, ನನ್ನ ಆತ್ಮದಿಂದ ಪ್ರೇರಿತರಾಗದೆ ಕಪಟ ಉಪಾಯಗಳನ್ನು ಮಾಡಿ ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.


ನನ್ನನ್ನು ತೊರೆದು, ಮನಸ್ಸು ಬಂದ ಹಾಗೆ ದುರ್ಮಾರ್ಗದಲ್ಲಿ ನಡೆಯುವ ಜನರನ್ನು ನಾನು ದಿನವೆಲ್ಲಾ ಕೈಚಾಚಿ ಕರೆದೆನು.


ಆ ನಗರವು ನನಗೆ ತಿರುಗಿಬಿದ್ದ ಕಾರಣ ಅದನ್ನು ಹೊಲಕಾಯುವವರಂತೆ ಸುತ್ತಿಕೊಂಡಿದ್ದಾರೆ ಎಂದು ಯೆಹೋವನು ನುಡಿಯುತ್ತಾನೆ.


ಅರಸರು, ಪ್ರಧಾನರು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಯೆರೂಸಲೇಮಿನ ನಿವಾಸಿಗಳು, ಅಂತು ಎಲ್ಲಾ ಇಸ್ರಾಯೇಲರೂ ಮತ್ತು ಯೆಹೂದ್ಯರೂ ನನ್ನನ್ನು ರೇಗಿಸತಕ್ಕ ಅಧರ್ಮವನ್ನು ತುಂಬಾ ಮಾಡಿದ್ದರಿಂದ ನಾನು ಈ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂತು.


“ನರಪುತ್ರನೇ, ನೀನು ದ್ರೋಹಿ ವಂಶದ ಮಧ್ಯದಲ್ಲಿ ವಾಸಿಸುತ್ತಿರುವೆ. ಆ ವಂಶದವರು ದ್ರೋಹಿಗಳಾಗಿರುವುದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.


ಯೆಹೂದದ ಮುಖಂಡರು ಮೇರೆಯನ್ನು ಒತ್ತುವವರಂತಿದ್ದಾರೆ; ಅವರ ಮೇಲೆ ನನ್ನ ರೌದ್ರವನ್ನು ನೀರಿನ ಹಾಗೆ ಹೊಯ್ದುಬಿಡುವೆನು.


ನೀತಿವಂತರನ್ನು ಹಿಂಸಿಸುವವರೇ, ಲಂಚತೆಗೆದುಕೊಳ್ಳುವವರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ. ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ನನಗೆ ಗೊತ್ತಿದೆ.


ನ್ಯಾಯಕ್ಕೆ ಅಸಹ್ಯಪಟ್ಟು, ನೆಟ್ಟಗಿರುವುದನ್ನು ಸೊಟ್ಟಗೆ ಮಾಡುವ ಯಾಕೋಬ ವಂಶದ ಮುಖಂಡರೇ, ಇಸ್ರಾಯೇಲ್ ಮನೆತನದ ಅಧಿಪತಿಗಳೇ,


ಪಟ್ಟಣದ ಧನಿಕರು ತುಂಬಾ ಬಲಾತ್ಕಾರಿಗಳು. ಅದರ ನಿವಾಸಿಗಳು ಸುಳ್ಳುಗಾರರು. ಅವರ ಬಾಯನಾಲಿಗೆಯು ಮೋಸಕರ.


ಮೋವಾಬ್ಯರ ಹಿರಿಯರೂ, ಮಿದ್ಯಾನ್ಯರ ಹಿರಿಯರೂ ಶಕುನದ ಕಾಣಿಕೆಯನ್ನು ಕೈಯಲ್ಲಿ ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.


ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚತೆಗೆದುಕೊಂಡು, ನ್ಯಾಯವಿರುದ್ಧವಾದ ತೀರ್ಪು ಕೊಡುತ್ತಿದ್ದರು.


ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.”


“ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.


ಆದುದರಿಂದ ಯೆರೂಸಲೇಮಿನ ಈ ಜನರನ್ನು ಆಳುವ ಧರ್ಮನಿಂದಕರೇ, ಯೆಹೋವನ ಮಾತನ್ನು ಕೇಳಿರಿ,


ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವುದು, ಕಾಡಿನ ತೋಳವು ಕೊಳ್ಳೆ ಹೊಡೆಯುವುದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವುದು. ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.


ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು