ಯೆಶಾಯ 1:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ, “ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಇಂತಿರಲು ಒಡೆಯರು, ಸೇನಾಧೀಶ್ವರರು, ಇಸ್ರಯೇಲರ ಪರಾಕ್ರಮಿಯು ಆದ ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ನನ್ನ ಶತ್ರುಗಳಾದ ನಿಮ್ಮ ಮೇಲೆ ಸೇಡು ತೀರಿಸುವೆನು. ನನ್ನ ವಿರೋಧಿಗಳಾದ ನಿಮ್ಮನ್ನು ಸದೆಬಡಿದು ಶಾಂತನಾಗಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇಂತಿರಲು ಕರ್ತನೂ ಸೇನಾಧೀಶ್ವರನೂ ಇಸ್ರಾಯೇಲ್ಯರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ - ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಇವೆಲ್ಲವುಗಳ ಕುರಿತಾಗಿ ಒಡೆಯನೂ ಇಸ್ರೇಲಿನ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುವುದೇನೆಂದರೆ: “ನನ್ನ ಶತ್ರುಗಳೇ, ನಾನು ನಿಮ್ಮನ್ನು ಶಿಕ್ಷಿಸುವೆನು. ಇನ್ನು ಮುಂದೆ ನೀವು ನನಗೆ ಯಾವ ಕೇಡನ್ನೂ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆದ್ದರಿಂದ ಸರ್ವಶಕ್ತರಾದ ದೇವರೂ, ಇಸ್ರಾಯೇಲಿನ ಪರಾಕ್ರಮಿಯೂ ಆದ ಯೆಹೋವ ದೇವರು ಹೇಳುವುದೇನೆಂದರೆ, “ಆಹಾ! ನನ್ನ ವೈರಿಗಳ ಮೇಲೆ ನನ್ನ ಕೋಪವನ್ನು ಹೊರಹಾಕುತ್ತೇನೆ ಮತ್ತು ನನ್ನ ಶತ್ರುಗಳ ಮೇಲೆ ಸೇಡು ತೀರಿಸಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿ |