Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದರೆ ದ್ರೋಹಿಗಳೂ ಮತ್ತು ಪಾಪಿಗಳೂ ಒಟ್ಟಾಗಿ ನಾಶವಾಗುವರು. ಹೌದು, ಯೆಹೋವನನ್ನು ತೊರೆದವರು ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಾಶವಾಗುವರು ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ; ನಿರ್ಮೂಲವಾಗುವರು ಸ್ವಾಮಿಯನ್ನು ತೊರೆದವರು ನಿಶ್ಚಯವಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶನವಾಗುವರು; ಹೌದು, ಯೆಹೋವನನ್ನು ತೊರೆದವರು ನಿರ್ಮೂಲರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದರೆ ಎಲ್ಲಾ ಕೊಲೆಗಾರರೂ ದುಷ್ಟರೂ ನಾಶಮಾಡಲ್ಪಡುವರು. ಅವರು ಯೆಹೋವನನ್ನು ಹಿಂಬಾಲಿಸುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದರೆ ದ್ರೋಹಿಗಳೂ, ಪಾಪಿಗಳೂ ಒಟ್ಟಾಗಿ ನಾಶವಾಗುವರು ಮತ್ತು ಯೆಹೋವ ದೇವರನ್ನು ತೊರೆದವರು ನಿರ್ಮೂಲವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:28
38 ತಿಳಿವುಗಳ ಹೋಲಿಕೆ  

ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.


ಅವುಗಳನ್ನೇ ಆಧಾರ ಮಾಡಿಕೊಂಡಿದ್ದರಿಂದ ಎತ್ತರವಾದ ಗೋಡೆಯ ಒಂದು ಭಾಗವು ಬಾಗುತ್ತಾ, ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಕೊಳ್ಳುವ ಹಾಗೆ, ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವುದು.”


ಆತನು ಅನ್ಯಾಯಗಾರರಿಗೆ ವಿಪತ್ತನ್ನೂ, ಕೆಡುಕರಿಗೆ ಉಪದ್ರವವನ್ನೂ ಕೊಡುತ್ತಾನಲ್ಲವೆ?


ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ.


“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.


“ಅವರು ಹೊರಗೆ ಹೋಗಿ ನನಗೆ ದ್ರೋಹ ಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ; ಅವುಗಳು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.”


ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಏರ್ಪಡಿಸಿ, ಗತಿದಾಯಕ ದೇವತೆಗೆ ಮದ್ಯವನ್ನು ಬೆರಸಿದ ನಿಮಗೆ ಕತ್ತಿಯನ್ನೇ ಗತಿಯಾಗ ಮಾಡುವೆನು.


ಓಹೋ, ಬೆಂಕಿಹಚ್ಚಿ ಸುತ್ತಮುತ್ತಲು ಉರಿಯನ್ನು ಹತ್ತಿಸಿಕೊಂಡಿರುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ, ನೀವು ಹತ್ತಿಸಿದ ಕೊಳ್ಳಿಗಳ ನಡುವೆ ನಡೆದರೂ ನಡೆಯಿರಿ. ಇಗೋ, “ನನ್ನ ಹಸ್ತದಿಂದ ನಿಮಗಾಗುವ ಗತಿಯು ಇದೇ, ದುಃಖಕ್ಕೆ ಒಳಗಾಗಿ ಸಾಯುವಿರಿ.”


ಬಹಳವಾಗಿ ಗದರಿಸಿದರೂ ತಗ್ಗದವನು, ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ಯೆಹೋವನು ಡೊಂಕುದಾರಿ ಹಿಡಿದವರನ್ನು, ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು. ಇಸ್ರಾಯೇಲರಿಗೆ ಶುಭವುಂಟಾಗಲಿ.


ಪಾಪಾತ್ಮರು ಭೂಲೋಕದಲ್ಲಿ ಮುಗಿದುಹೋಗಲಿ; ದುಷ್ಟರು ನಿರ್ಮೂಲವಾಗಲಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ಯೆಹೋವನಿಗೆ ಸ್ತೋತ್ರ.


ಯೆಹೋವನೇ, ಇಗೋ ನಿನ್ನ ಶತ್ರುಗಳು! ಅವರೆಲ್ಲಾ ನಾಶವಾಗುತ್ತಿದ್ದಾರೆ. ಅಧರ್ಮಿಗಳೆಲ್ಲಾ ಚದರಿಹೋಗುವರು.


ಇಗೋ, ನಿನ್ನನ್ನು ಬಿಟ್ಟವರು ನಾಶವಾಗುವರು; ನಿನಗೆ ದ್ರೋಹ ಮಾಡಿದವರೆಲ್ಲರನ್ನು ನಿರ್ಮೂಲ ಮಾಡುತ್ತೀ.


ದ್ರೋಹಿಗಳೆಲ್ಲರೂ ನಾಶವಾಗುವರು; ದುಷ್ಟರ ಸಂತಾನವು ತೆಗೆದುಹಾಕಲ್ಪಡುವುದು.


ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ, ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದಿ.


ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ನೀವು ದ್ರೋಹಿಗಳಾಗಿಯೇ ಇದ್ದರೆ ನೀವು ಮತ್ತು ನಿಮ್ಮ ಅರಸನು ನಾಶವಾಗುವಿರಿ” ಎಂದು ಹೇಳಿದನು.


ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.


ಭೂಮಿಯು ಅಮಲೇರಿದವನ ಹಾಗೆ ಓಲಾಡುತ್ತದೆ, ಗುಡಿಸಲಂತೆ ತೂಗಾಡುತ್ತದೆ; ಅದರ ದ್ರೋಹವು ಅದಕ್ಕೆ ಭಾರವಾಗಿದೆ, ಅದು ಬಿದ್ದು ಹೋಗುತ್ತಿದೆ, ತಿರುಗಿ ಏಳುವುದೇ ಇಲ್ಲ.


“ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ, ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗುವರು” ಎಂದುಕೊಳ್ಳುತ್ತಾರೆ.


ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.


ಅವರಂತು ದಿನದಿನವೂ ನನ್ನ ದರ್ಶನಕ್ಕಾಗಿ ಬಂದು, ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಹೆಚ್ಚಳಪಡುತ್ತಾರೆ; ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ, ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ.


ತಮ್ಮ ಮಧ್ಯದಲ್ಲಿನ ಒಬ್ಬನನ್ನು ಅನುಸರಿಸಿ, ತೋಟಗಳೊಳಗೆ ಪ್ರವೇಶಿಸುವುದಕ್ಕೆ ತಮ್ಮನ್ನು ಪವಿತ್ರಮಾಡಿಕೊಂಡು, ಹಂದಿಯ ಮಾಂಸವನ್ನು, ಅಶುದ್ಧಪದಾರ್ಥವನ್ನೂ, ಇಲಿಯನ್ನೂ ತಿನ್ನುವವರು ಒಟ್ಟಿಗೆ ಅಂತ್ಯ ಕಾಣುವರು” ಎಂದು ಯೆಹೋವನು ನುಡಿಯುತ್ತಾನೆ.


ಯೆಹೋವನೇ, ಇಸ್ರಾಯೇಲರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು. ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ಧೂಳಿನಲ್ಲಿ ಬರೆಯಲ್ಪಡುವುದು.


ಐಗುಪ್ತಕ್ಕೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಯೆಹೂದದ ಉಳಿದ ಜನರನ್ನು ನಾನು ಹಿಡಿದು ನಾಶಮಾಡುವೆನು; ಐಗುಪ್ತದಲ್ಲೇ ಒರಗಿ ಹೋಗುವರು; ಖಡ್ಗ ಮತ್ತು ಕ್ಷಾಮಗಳಿಂದ ನಾಶವಾಗುವರು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಖಡ್ಗ ಮತ್ತು ಕ್ಷಾಮಗಳಿಂದ ಸತ್ತು ಅಪವಾದ, ಶಾಪ, ನಿಂದೆಗೆ ಮತ್ತು ದೂಷಣೆಗಳಿಗೆ ಗುರಿಯಾಗುವರು.


ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.


ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನ ವರೆಗೂ ಅವರ ಶತ್ರುಗಳಾಗಿಯೇ ಇದ್ದಾರೆ. ಆ ಕಾಲದಲ್ಲಿಯೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿದ್ದರಿಂದ ಹೀಗಾಯಿತು.


ರೆಮಲ್ಯನ ಮಗನು ಇಸ್ರಾಯೇಲ್ಯರ ಅರಸನು ಆದ ಪೆಕಹ ಎಂಬವನು ಒಂದೇ ದಿನ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರೂ ಯುದ್ಧವೀರರು. ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತೊರೆದು ಬಿಟ್ಟಿದ್ದೇ ಇದಕ್ಕೆ ಕಾರಣವಾಗಿತ್ತು.


ಹೇಗೆಂದರೆ “ಅರಾಮ್ ರಾಜರ ದೇವತೆಗಳು ಅವರಿಗೆ ಜಯವನ್ನು ಅನುಗ್ರಹಿಸುವೆ ಎಂದು ತಿಳಿದು; ನಾನೂ ಅವುಗಳಿಗೆ ಯಜ್ಞಸಮರ್ಪಿಸುವೆನು, ಆಗ ನನಗೂ ಜಯವಾಗುವುದು” ಎಂದುಕೊಂಡು ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಯಜ್ಞಸಮರ್ಪಿಸಿದನು. ಆದರೆ ಆ ದೇವತೆಗಳ ದೆಸೆಯಿಂದ ಅವನಿಗೂ ಮತ್ತು ಎಲ್ಲಾ ಇಸ್ರಾಯೇಲರಿಗೂ ಕೇಡು ಉಂಟಾಯಿತು.


ಅಪರಾಧಿಗಳಿಗೋ ಎಂಬಂತೆ ಬಹಿರಂಗವಾಗಿ ಅವರಿಗೆ ಪೆಟ್ಟುಹಾಕುವನು.


ಅವರು ಆತನನ್ನು ಹಿಂಬಾಲಿಸದೆ, ತಿರುಗಿಕೊಂಡು ಆತನ ಮಾರ್ಗಗಳನ್ನೆಲ್ಲಾ ಅಲಕ್ಷ್ಯಮಾಡಿದ್ದರಷ್ಟೆ.


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು