Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಎಲೆ ಒಣಗಿದ ಏಲಾ ಮರದಂತೆಯೂ, ನೀರಿಲ್ಲದ ವನದ ಹಾಗೂ ಇರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಎಲೆ ಒಣಗಿದ ಮರಗಳಂತೆ ಆಗುವಿರಿ. ಜಲವಿಲ್ಲದ ವನದಂತಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಎಲೆ ಒಣಗಿದ ಏಲಾಮರದಂತೆಯೂ ಜಲವಿಲ್ಲದ ವನದ ಹಾಗೂ ಇರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಎಲೆ ಒಣಗಿಹೋದ ಏಲಾ ಮರಗಳಂತೆ ನೀವು ಇದ್ದೀರಿ. ನೀರಿಲ್ಲದೆ ಸಾಯುತ್ತಿರುವ ಉದ್ಯಾನವನದಂತೆ ನೀವು ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನೀವು ಬಾಡಿದ ಎಲೆಯುಳ್ಳ ಏಲಾ ಮರದಂತೆಯೂ, ನೀರಿಲ್ಲದ ತೋಟದಂತೆಯೂ ಇರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:30
11 ತಿಳಿವುಗಳ ಹೋಲಿಕೆ  

ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, “ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ” ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.


ಆಗ ಯೆಹೋವನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾದದ್ದನ್ನು ಎತ್ತರಗೊಳಿಸಿ, ಹಸುರಾದದ್ದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರಣ್ಯದ ಸಕಲ ವೃಕ್ಷಗಳು ತಿಳಿಯುವವು. ಇದನ್ನು ಯೆಹೋವನಾದ ನಾನೇ ನುಡಿದು ನಡೆಸಿದ್ದೇನೆ.”


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದೋಪಾದಿಯಲ್ಲಿ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಕಳೆಗುಂದರು.


ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡೆಸುತ್ತಾ, ಮರುಭೂಮಿಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ, ನಿಮ್ಮ ಎಲುಬುಗಳನ್ನು ಬಲಗೊಳಿಸುವನು; ನೀವು ತಂಪಾದ ತೋಟಕ್ಕೂ, ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.


ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.


ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಸ್ಥಳದಲ್ಲಿರುವ ಮೋರೆ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು.


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದಿ; ನಮ್ಮ ಮೇಲಾದರೋ ರೋಷಗೊಂಡಿದ್ದಿ; ಆದರೂ ಪಾಪದಲ್ಲಿ ಮುಳುಗಿರುವ ನಮಗೆ ರಕ್ಷಣೆಯಾದೀತೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು