Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 1:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಎಲೈ ಪಾಪಿಷ್ಠ ಜನವೇ, ದೋಷಭರಿತ ಪ್ರಜೆಯೇ, ದುಷ್ಟಪೀಳಿಗೆಯೇ, ಭ್ರಷ್ಟಸಂತಾನವೇ, ನಿಮ್ಮ ಗತಿಯನ್ನು ಏನೆಂದು ಹೇಳಲಿ. ನೀವು ಸರ್ವೇಶ್ವರನನ್ನು ತೊರೆದಿದ್ದೀರಿ. ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಧಿಕ್ಕರಿಸಿದ್ದೀರಿ. ಅವರಿಗೆ ಬೆನ್ನುಮಾಡಿ ಬೇರೆಯಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪಾಪಿಷ್ಠಜನವೇ, ಅಧರ್ಮಭಾರ ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನನ್ನು ತೊರೆದಿದ್ದಾರೆ, ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ಧಿಕ್ಕರಿಸಿದ್ದಾರೆ, ಆತನಿಗೆ ಬೆನ್ನುಮಾಡಿ ಬೇರೆಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇಸ್ರೇಲ್ ದೇಶವು ಪಾಪದಿಂದ ತುಂಬಿಹೋಗಿದೆ; ಅವರ ಪಾಪವೇ ಅವರಿಗೆ ಭಾರವಾದ ಹೊರೆಯಾಗಿದೆ; ಅವರು ದುಷ್ಟಕುಟುಂಬಗಳ ಕೆಟ್ಟಮಕ್ಕಳಂತಿದ್ದಾರೆ. ಅವರು ಯೆಹೋವನನ್ನು ತ್ಯಜಿಸಿದ್ದಾರೆ; ಇಸ್ರೇಲಿನ ಪರಿಶುದ್ಧ ದೇವರನ್ನು ಅವಮಾನಪಡಿಸಿದ್ದಾರೆ; ಅವರು ಆತನನ್ನು ತೊರೆದು ಅಪರಿಚಿತನೋ ಎಂಬಂತೆ ಪರಿಗಣಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅಯ್ಯೋ ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ! ದುಷ್ಟ ಸಂತತಿಯೇ, ಭ್ರಷ್ಟರಾದ ಮಕ್ಕಳೇ! ಯೆಹೋವ ದೇವರನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧರನ್ನು ತಿರಸ್ಕರಿಸಿದ್ದಾರೆ ಅವರಿಂದ ದೂರವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 1:4
69 ತಿಳಿವುಗಳ ಹೋಲಿಕೆ  

ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ, ಇಸ್ರಾಯೇಲರ ಸದಮಲಸ್ವಾಮಿಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೊಳೆಯನ್ನು ನುಂಗಿಬಿಡುವಂತೆಯೂ, ಒಣಹುಲ್ಲು ಬೆಂಕಿಯಲ್ಲಿ ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆತು ಹೋಗುವಂತೆಯೂ, ಅದರ ಚಿಗುರು ಧೂಳಿನಂತೆಯೂ ತೂರಿ ಹೋಗುವುದು.


ನಿನ್ನನ್ನು ಮಾರ್ಗದರ್ಶಿಯಾಗಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡೆಯಲ್ಲಾ.


“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.


ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.


ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?


ಅವರು ನನಗೆ ಕೇಡುಮಾಡುತ್ತಾರೋ, ಅವಮಾನವು ತಮ್ಮ ಮುಖವನ್ನು ಮುಚ್ಚುವಷ್ಟರ ಮಟ್ಟಿಗೆ ತಮಗೇ ಕೇಡುಮಾಡಿಕೊಳ್ಳುತ್ತಾರಲ್ಲಾ” ಎಂದು ಯೆಹೋವನು ನುಡಿಯುತ್ತಾನೆ.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.


ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ನಡೆಸಲಿ. ಇಸ್ರಾಯೇಲರ ಸದಮಲಸ್ವಾಮಿಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಆದಷ್ಟು ಬೇಗ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ!


ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ.


ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?


ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ?


“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.


ಎಲ್ಲಾ ಕಡೆ ವ್ಯಭಿಚಾರಿ ಸ್ತ್ರೀಗೆ ಹಣಕೊಡುವುದುಂಟು; ನೀನಾದರೋ ನಿನ್ನ ಪ್ರಿಯರಿಗೆಲ್ಲ ನೀನೇ ಹಣವನ್ನು ಕೊಡುತ್ತಿರುವೆ; ಅವರು ಎಲ್ಲಾ ಕಡೆಯಿಂದಲೂ ಬಂದು ನಿನ್ನಲ್ಲಿ ವ್ಯಭಿಚಾರಮಾಡುವಂತೆ ಅವರಿಗೆ ಬಹುಮಾನ ಕೊಡುತ್ತಿರುವೆ.


ಇಸ್ರಾಯೇಲರ ಸದಮಲಸ್ವಾಮಿಗೆ ಆತನ ಜನರು ಮಾಡಿದ ಅಪರಾಧವು ತಮ್ಮ ದೇಶದಲ್ಲಿ ತುಂಬಿದ್ದರೂ, ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಸ್ರಾಯೇಲನ್ನಾಗಲಿ ಅಥವಾ ಯೆಹೂದವನ್ನಾಗಲಿ ತ್ಯಜಿಸಲಿಲ್ಲ.


ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬಿಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲರ ಸದಮಲಸ್ವಾಮಿಯಾದ ಯೆಹೋವನನ್ನು ಅಸಡ್ಡೆ ಮಾಡಿತಲ್ಲಾ.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪೂರ್ವಿಕರಿಗಿಂತಲೂ ಕೆಟ್ಟವರಾಗಿ ನಡೆದರು.


ಕಾಮವನ್ನು ತೀರಿಸಿಕೊಳ್ಳಬೇಕೆಂದು ಎಷ್ಟೋ ಮುಂದುವರೆದಿದ್ದಿ! ಇದರಿಂದ ನಿನ್ನ ದುರಭ್ಯಾಸಗಳಿಗೆ ನಿನ್ನ ನಡತೆಯನ್ನು ಹೊಂದಿಸಿಕೊಂಡಿದ್ದಿ.


ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?


ಯೆಹೋವನು ಹೀಗೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನ್ನಲ್ಲಿ ಯಾವ ಅನ್ಯಾಯವನ್ನು ಕಂಡು, ವ್ಯರ್ಥಾಚರಣೆಯನ್ನು ಅನುಸರಿಸಿ ತಾವೇ ಅಯೋಗ್ಯರಾಗಿ ನನ್ನನ್ನು ಬಿಟ್ಟು ದೂರವಾದರು?


ಈ ಜನರು ವನಗಳಲ್ಲಿ ಯಜ್ಞ ಮಾಡುತ್ತಾ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪಹಾಕುತ್ತಾ ನನ್ನನ್ನು ಯಾವಾಗಲೂ ಕೆಣಕುತ್ತಾರೆ.


ಆಗ ಯೆಹೋವನ ಹಸ್ತವು ಇದನ್ನು ಮಾಡಿದೆ, ಹೌದು, ಇಸ್ರಾಯೇಲಿನ ಸದಮಲಸ್ವಾಮಿಯೇ ಸೃಷ್ಟಿಸಿದ್ದಾನೆ” ಎಂದು ಎಲ್ಲರೂ ಕಂಡು ತಿಳಿದು ಮನಸ್ಸಿಗೆ ತಂದು ಗ್ರಹಿಸಿಕೊಳ್ಳುವರು.


ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವುದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾಮಿಯಲ್ಲಿ ಹೆಚ್ಚಳಪಡುವಿ.


ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.


ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ಡೀ? ಯಾರ ವಿರುದ್ಧವಾಗಿ ಬಾಯ್ದೆರೆದು ಧ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!’


ಇಸ್ರಾಯೇಲರ ಸದಮಲಸ್ವಾಮಿಯಾಗಿರುವ ಕರ್ತನಾದ ಯೆಹೋವನು, “ನೀವು ಪರಿವರ್ತನೆಗೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು; ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, ನೀವು ಒಪ್ಪಿಕೊಂಡಿಲ್ಲ.


ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು, ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರು.


ದೀನರು ಯೆಹೋವನಲ್ಲಿ ಹೆಚ್ಚಾಗಿ ಆನಂದಿಸುವರು, ಬಡವರು ಇಸ್ರಾಯೇಲರ ಸದಮಲಸ್ವಾಮಿಯಲ್ಲಿ ಉಲ್ಲಾಸಿಸುವರು.


ಕಾಲ ಕೆಳಗೆ ತುಳಿಯಲ್ಪಟ್ಟ ಹೆಣದಂತೆಯೂ, ನೀನು ಆ ಅರಸರೊಡನೆ ಸಮಾಧಿಗೆ ಸೇರುವುದಿಲ್ಲ, ಏಕೆಂದರೆ ನೀನು ದೇಶವನ್ನು ಹಾಳುಮಾಡಿ, ನಿನ್ನ ಪ್ರಜೆಯನ್ನು ಕೊಂದುಹಾಕಿದಿ. ದುಷ್ಟರ ಸಂತಾನವು ಎಂದೆಂದಿಗೂ ಜ್ಞಾಪಕಕ್ಕೆ ಬರುವುದಿಲ್ಲ.”


ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.


ಏಕೆಂದರೆ ಯೆರೂಸಲೇಮ್ ಹಾಳಾಯಿತು. ಯೆಹೂದವು ಬಿದ್ದುಹೋಯಿತು. ಅವರ ನಡೆನುಡಿಗಳು ಯೆಹೋವನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿಯನ್ನು ಕೆರಳಿಸುತ್ತದಲ್ಲವೇ?


ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.


ನಮಗೆ ಗುರಾಣಿಯಂತಿರುವ ನಮ್ಮ ಅರಸನು ಯೆಹೋವನೇ; ಅವನು ಇಸ್ರಾಯೇಲರ ಸದಮಲಸ್ವಾಮಿಯ, ಸ್ವಕೀಯನು.


ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ, ಅಲ್ಲಿ ಆತನನ್ನು ನೋಯಿಸಿದರು.


ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು, ನನ್ನ ಆಜ್ಞೆಗಳನ್ನು ಕೈಗೊಳ್ಳುವರು” ಎಂಬುದೇ.


ದುಷ್ಟರು ಜನ್ಮದಿಂದಲೇ ಧರ್ಮಭ್ರಷ್ಟರು; ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿ ದಾರಿ ತಪ್ಪಿದವರು.


ಆಗ ಅವರು ಯೆಹೋವನಿಗೆ, “ನಾವು ನಮ್ಮ ದೇವರಾದ ನಿನ್ನನ್ನು ಬಿಟ್ಟು, ಬಾಳನ ಪ್ರತಿಮೆಗಳನ್ನು ಪೂಜಿಸಿ, ನಿನಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಮೊರೆಯಿಟ್ಟರು.


ಯೆಹೋವನು ಇದನ್ನು ಕಂಡು ಅವರ ವಿಷಯದಲ್ಲಿ ಬೇಸರಗೊಂಡನು; ತನ್ನ ಕುಮಾರ ಕುಮಾರ್ತೆಯರ ವಿಷಯದಲ್ಲಿ ವ್ಯಥೆಪಟ್ಟನು.


ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ಅದಕ್ಕೆ ಜನರು, ‘ಈ ದೇಶದವರ ಪೂರ್ವಿಕರ ದೇವರಾದ ಯೆಹೋವನು ಅವರನ್ನು ಐಗುಪ್ತದೇಶದಿಂದ ಬಿಡಿಸಿದ ಮೇಲೆ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು.


“ಈ ದುಷ್ಟ ಸಂತತಿಯವರಾದ ನೀವು ನಿಮ್ಮ ತಂದೆಗಳಿಗೆ ಬದಲಾಗಿ ಬಂದು ಇಸ್ರಾಯೇಲರ ಮೇಲಿದ್ದ ಯೆಹೋವನ ರೋಷಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತೀರಿ.


ಆದರೆ ಸೊದೋಮ್ ಪಟ್ಟಣದ ಜನರು ಯೆಹೋವನ ದೃಷ್ಟಿಯಲ್ಲಿ ಬಹು ದುಷ್ಟರೂ ಪಾಪಿಷ್ಠರು ಆಗಿದ್ದರು.


ಅವಳ ಪಾಪಗಳು ಒಂದಕ್ಕೊಂದು ಸೇರಿ ಆಕಾಶದ ಎತ್ತರಕ್ಕೆ ಬೆಳೆದಿವೆ. ದೇವರು ಅವಳ ದುಷ್ಟಕೃತ್ಯಗಳನ್ನು ಜ್ಞಾಪಿಸಿಕೊಂಡಿದ್ದಾನೆ.


ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.


ನಾವು ನಿನಗೆ ದ್ರೋಹಿಗಳಾಗಿ ನಡೆಯುತ್ತಾ ಬಂದೆವು; ನೀನು ನಿನ್ನ ಸೇವಕನಾದ ಮೋಶೆಯ ಮುಖಾಂತರ ಕೊಟ್ಟ ಆಜ್ಞಾವಿಧಿನ್ಯಾಯಗಳನ್ನು ನಾವು ಕೈಗೊಳ್ಳಲಿಲ್ಲ.


ನನ್ನ ದೇವರೇ, ನಿನ್ನ ಸತ್ಯತೆಯನ್ನು ಸ್ಮರಿಸುವೆನು; ಸ್ವರಮಂಡಲದಿಂದ ನಿನ್ನನ್ನು ಸಂಕೀರ್ತಿಸುವೆನು. ಇಸ್ರಾಯೇಲರ ಪರಿಶುದ್ಧ ದೇವರು, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು.


ಆದರೆ ದ್ರೋಹಿಗಳೂ ಮತ್ತು ಪಾಪಿಗಳೂ ಒಟ್ಟಾಗಿ ನಾಶವಾಗುವರು. ಹೌದು, ಯೆಹೋವನನ್ನು ತೊರೆದವರು ನಾಶವಾಗುವರು.


ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.


ಇಗೋ, ಆತನು ವಿವೇಕಿ, ತನ್ನ ಮಾತನ್ನು ಹಿಂದಕ್ಕೆ ತೆಗೆಯದೆ ಕೇಡನ್ನು ಬರಮಾಡುವನು. ಕೆಡುಕರ ಮನೆತನಕ್ಕೂ, ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.


ನನ್ನ ಜನರು ಲಾಭವನ್ನು ದೋಚಿಕೊಂಡ ಅನ್ಯಾಯವನ್ನು ನಾನು ನೋಡಿ ಕೋಪಗೊಂಡು ಅವರನ್ನು ಹೊಡೆದೆನು, ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತನಾಗಿದ್ದೆನು; ಅವರೋ ತಿರುಗಿಕೊಂಡು ಮನಸ್ಸಿಗೆ ತೋರಿದ ಹಾಗೆಯೇ ನಡೆಯುತ್ತಾ ಬಂದಿದ್ದಾರೆ.


ಅವರಂತು ದಿನದಿನವೂ ನನ್ನ ದರ್ಶನಕ್ಕಾಗಿ ಬಂದು, ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಹೆಚ್ಚಳಪಡುತ್ತಾರೆ; ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ, ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ.


ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಏರ್ಪಡಿಸಿ, ಗತಿದಾಯಕ ದೇವತೆಗೆ ಮದ್ಯವನ್ನು ಬೆರಸಿದ ನಿಮಗೆ ಕತ್ತಿಯನ್ನೇ ಗತಿಯಾಗ ಮಾಡುವೆನು.


ಯೆಹೋವನ ಈ ಮಾತನ್ನು ಕೇಳು, ‘ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದಿ. ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಯಿತು.


ಅರಸರು, ಪ್ರಧಾನರು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಯೆರೂಸಲೇಮಿನ ನಿವಾಸಿಗಳು, ಅಂತು ಎಲ್ಲಾ ಇಸ್ರಾಯೇಲರೂ ಮತ್ತು ಯೆಹೂದ್ಯರೂ ನನ್ನನ್ನು ರೇಗಿಸತಕ್ಕ ಅಧರ್ಮವನ್ನು ತುಂಬಾ ಮಾಡಿದ್ದರಿಂದ ನಾನು ಈ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂತು.


ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ವಿಗ್ರಹಗಳ ನಿಮಿತ್ತ ನನ್ನನ್ನು ತೊರೆದುದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲೇ ಸಿಕ್ಕಿಸಿ ಹಿಡಿಯುವೆನು.”


ಗಂಡನಿಗೂ, ಮಕ್ಕಳಿಗೂ ಬೇಸರಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ, ಮಕ್ಕಳಿಗೂ ಬೇಸರಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು.


ಇಸ್ರಾಯೇಲರೆಲ್ಲರೂ ನಿನ್ನ ಧರ್ಮಪ್ರಮಾಣವನ್ನು ಮೀರಿ ನಿನ್ನ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿನ್ನ ಶಾಪದ ಕೇಡುಗಳೂ, ದೇವಸೇವಕನಾದ ಮೋಶೆಯ ಧರ್ಮನಿಯಮದಲ್ಲಿ ನೀನು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳೂ ನಮ್ಮ ಮೇಲೆ ಸುರಿಯಲ್ಪಟ್ಟಿವೆ; ನಾವು ದೇವ ದ್ರೋಹಿಗಳೇ ಸರಿ.


ಯೆಹೋವನನ್ನು ಆಶ್ರಯಿಸದೆ, ಯೆಹೋವನ ದರ್ಶನವನ್ನು ಬಯಸದೇ, ಯೆಹೋವನ ಮಾರ್ಗ ಬಿಟ್ಟವರನ್ನೂ ಧ್ವಂಸ ಮಾಡುವೆನು.”


ಹೀಗಿರಲಾಗಿ ಯೆಹೋವನು ಮೋಶೆಗೆ, “ನೀನು ಬೆಟ್ಟದಿಂದ ಇಳಿದುಹೋಗು ಐಗುಪ್ತದೇಶದಿಂದ ನೀನು ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು.


ಆದರೆ ಅವರು ದ್ರೋಹಿಗಳೇ, ಮಕ್ಕಳಲ್ಲ; ಇದು ಅವರ ದೋಷವು; ಅವರು ವಕ್ರಬುದ್ಧಿಯುಳ್ಳ ಮೂರ್ಖಜಾತಿಯವರು.


ತನ್ನ ಪೂರ್ವಿಕರ ದೇವರಾದ ಯೆಹೋವನನ್ನೂ ಆರಾಧಿಸದೆ, ಆತನಿಗೆ ಮೆಚ್ಚಿಗೆಯಾಗುವಂತೆ ನಡೆಯುವ ಮಾರ್ಗವನ್ನೂ ಬಿಟ್ಟುಬಿಟ್ಟನು.


ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಬಲಗೊಂಡ ಮೇಲೆ ಅವನೂ ಮತ್ತು ಅವನ ಪ್ರಜೆಗಳಾದ ಎಲ್ಲಾ ಇಸ್ರಾಯೇಲರೂ ಯೆಹೋವನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು.


ಅವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು. ಆದರೆ ಅವನಂತೆ ಯೆಹೋವನ ಆಲಯವನ್ನು ಪ್ರವೇಶಿಸಲಿಲ್ಲ. ಪ್ರಜೆಗಳಾದರೋ ದುರಾಚಾರಿಗಳಾಗಿಯೇ ಇದ್ದರು.


ಆತನನ್ನು ಪದೇಪದೇ ಪರೀಕ್ಷಿಸಿ, ಇಸ್ರಾಯೇಲರ ಸದಮಲಸ್ವಾಮಿಯನ್ನು ಕೋಪಕ್ಕೆ ಗುರಿಮಾಡಿದರು.


ಆತನಿಗೆ ವಿಮುಖರಾಗಿ ತಮ್ಮ ಹಿರಿಯರಂತೆ ದ್ರೋಹಿಗಳಾದರು. ಮೋಸದ ಬಿಲ್ಲಿನಂತೆ ತಿರುಗಿಕೊಂಡರು.


ಯೆಹೋವನು ಹೀಗೆ ನುಡಿಯುತ್ತಾನೆ, “ದ್ರೋಹಿಗಳಾದ ನನ್ನ ಮಕ್ಕಳ ಗತಿಯನ್ನು ಏನು ಹೇಳಲಿ” “ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಮಾಡಿ, ನನ್ನ ಆತ್ಮದಿಂದ ಪ್ರೇರಿತರಾಗದೆ ಕಪಟ ಉಪಾಯಗಳನ್ನು ಮಾಡಿ ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು