ಯೆಶಾಯ 1:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸೇನಾಧೀಶ್ವರ ಸರ್ವೇಶ್ವರ ಕೆಲವು ಜನರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ, ಗೊಮೋರದ ದುರ್ದೆಶೆಯೇ ನಮಗೆ ಸಂಭವಿಸುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಸೇನಾಧೀಶ್ವರನಾದ ಯೆಹೋವನು ನಮಗೆ ಕೊಂಚ ಜನವನ್ನೂ ಉಳಿಸದೆ ಹೋಗಿದ್ದರೆ ಸೊದೋವಿುನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದರೆ ಸರ್ವಶಕ್ತನಾದ ಯೆಹೋವನು ಸ್ವಲ್ಪ ಮಂದಿಯನ್ನಾದರೂ ಉಳಿಸಿ ಅಲ್ಲಿ ವಾಸಿಸುವಂತೆ ಮಾಡಿದ್ದಾನೆ. ನಾವು ಸೊದೋಮ್ ಗೊಮೋರ ಪಟ್ಟಣಗಳಂತೆ ಸಂಪೂರ್ಣವಾಗಿ ನಾಶವಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಸೇನಾಧೀಶ್ವರ ಯೆಹೋವ ದೇವರು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು. ಅಧ್ಯಾಯವನ್ನು ನೋಡಿ |
ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”
ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.