ಯೆಶಾಯ 10:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಕತ್ತರಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಕೊಡಲಿ, ಕಡಿಯುವವನನ್ನೇ ಕಡಿಯಲು ನಿಂತೀತೆ? ಗರಗಸ, ಆಡಿಸುವವನನ್ನೇ ಕತ್ತರಿಸಲು ಎದೆಗೊಂಡೀತೆ? ಕೋಲು, ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ದೊಣ್ಣೆ ಸಜೀವ ಮನುಷ್ಯನನ್ನೇ ಬಡಿದಂತಾಯಿತು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಆಡಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಎತ್ತಿಕೊಂಡವನನ್ನು ಕೋಲು ಬೀಸಿದಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಕೊಡಲಿಯು ಅದನ್ನು ಉಪಯೋಗಿಸುವವನಿಗಿಂತ ಉತ್ತಮವಲ್ಲ. ಗರಗಸವು ಅದನ್ನು ಉಪಯೋಗಿಸುವವನಿಗಿಂತ ಉತ್ತಮವಲ್ಲ. ಆದರೆ ಅಶ್ಶೂರವು ತಾನು ದೇವರಿಗಿಂತಲೂ ಶಕ್ತಿಶಾಲಿ, ಸಾಮರ್ಥ್ಯವುಳ್ಳವನು ಎಂದು ನೆನಸುತ್ತಾನೆ. ಬೆತ್ತವು, ತನ್ನನ್ನು ಎತ್ತಿಹಿಡಿದು ಬೇರೆಯವರನ್ನು ಶಿಕ್ಷಿಸುವವನಿಗಿಂತ ತಾನು ಬಲಿಷ್ಠನೂ ಪ್ರಮುಖನೂ ಎಂದು ಹೇಳುವಂತಿದೆ ಇದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿಕೊಂಡೀತೆ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಕೋಲು ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ಬೆತ್ತ ಸಜೀವ ಮನುಷ್ಯನನ್ನೇ ಬಡಿದಂತಾಯಿತು! ಅಧ್ಯಾಯವನ್ನು ನೋಡಿ |