Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನು ಉಂಟುಮಾಡುವನು. ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಅಸ್ತಿವಾರಕ್ಕೆ ಹತ್ತಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದಕಾರಣ, ಒಡೆಯರಾದ ಸೇನಾಧೀಶ್ವರ ಸರ್ವೇಶ್ವರ ಅಸ್ಸೀರಿಯಾದ ಕೊಬ್ಬಿದ ಯೋಧರಿಗೆ ಕ್ಷಯರೋಗವನ್ನು ಬರಮಾಡುವರು. ಅವರ ದೇಹಕ್ಕೆ ಬೆಂಕಿಯಂತೆ ಉರಿಯುವ ಜ್ವರವನ್ನು ಉಂಟುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಅವನ ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನುಂಟುಮಾಡುವನು; ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಕೆಳಗೆ ಹತ್ತಿಕೊಳ್ಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ತಾನು ಮಹಾದೊಡ್ಡ ಜನವೆಂದು ಅಶ್ಶೂರವು ನೆನಸುತ್ತದೆ. ಆದರೆ ಸರ್ವಶಕ್ತನಾದ ಯೆಹೋವನು ಅಶ್ಶೂರದ ಮೇಲೆ ಭಯಂಕರವಾದ ವ್ಯಾಧಿಯನ್ನು ಬರಮಾಡುತ್ತಾನೆ. ಒಬ್ಬ ರೋಗಿ ತನ್ನ ಅಸ್ವಸ್ಥತೆಯಿಂದ ಹೇಗೆ ಕೃಶವಾಗುತ್ತಾನೋ ಹಾಗೆಯೇ ತನ್ನ ಶಕ್ತಿಯನ್ನೂ ಐಶ್ವರ್ಯವನ್ನೂ ಅಶ್ಶೂರವು ಕಳೆದುಕೊಂಡು ಬಲಹೀನನಾಗುವನು. ಅಶ್ಶೂರದ ಮಹಿಮಾಪ್ರಭಾವಗಳು ಇಲ್ಲದೆ ಹೋಗುವವು. ಬೆಂಕಿಯು ಸರ್ವವನ್ನು ಸುಟ್ಟು ನಾಶಮಾಡುವಂತೆ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದಕಾರಣ ಸೇನಾಧೀಶ್ವರ ಯೆಹೋವ ದೇವರು ಅವನ ಕೊಬ್ಬಿದ ಯೋಧರಿಗೆ ಕ್ಷಯವನ್ನು ಉಂಟುಮಾಡುವರು, ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಕೆಳಗೆ ಹತ್ತಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:16
25 ತಿಳಿವುಗಳ ಹೋಲಿಕೆ  

ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.


ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.


ಆತನು ಅವರ ಆಶೆಯನ್ನು ಪೂರೈಸಿದರೂ, ಅವರ ಪ್ರಾಣಕ್ಕೆ ಕ್ಷಯವನ್ನು ಬರಮಾಡಿದನು.


ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.


ಏಕೆಂದರೆ ನೀನು ನನ್ನ ವಿರುದ್ಧ ಕೋಪಗೊಂಡಿರುವುದೂ, ಅಸಮಾಧಾನವಾಗಿರುವುದೂ ನನಗೆ ತಿಳಿದುಬಂತು. ಆದುದರಿಂದ ನಿನಗೆ ಮೂಗುದಾರವನ್ನೂ, ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.


“ಆ ದಿನದಲ್ಲಿ, ಯಾಕೋಬಿನ ಮಾಂಸದ ಕೊಬ್ಬು ಕರಗಿ, ಅದರ ಮಹಿಮೆಯೂ ಕ್ಷೀಣವಾಗುವುದು.


ಅದು ದೇಹಾತ್ಮಗಳನ್ನು ಉಳಿಸದೇ ಅಲ್ಲಿನ ವನದ ಮತ್ತು ತೋಟದ ವೈಭವವನ್ನು ನಿರ್ಮೂಲ ಮಾಡುವುದು. ದೇಶವೋ ರೋಗಿಯಂತೆ ನಾಶವಾಗುವುದು.


ಯುದ್ಧದ ಗದ್ದಲದಲ್ಲಿ ತುಳಿದಾಡಿದವರೆಲ್ಲರ ಪಾದರಕ್ಷೆಗಳೂ, ರಕ್ತದಲ್ಲಿ ಅದ್ದಿದ ಉಡುಪುಗಳೂ, ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು.


ಪಟ್ಟಣ ಪ್ರದೇಶಗಳು ಹಾಳಾಗಿ ಪಶುಪಾಲಕರಿಗೆ ಹುಲ್ಲುಗಾವಲುಗಳಾಗುವವು. ಕುರಿಮರಿಗಳು ಅಲ್ಲಿ ಮೇಯುವವು.


ಇಗೋ ಕರ್ತನು ಪೂರ್ಣ ಪ್ರತಾಪದಿಂದ ಕೂಡಿದ ಅಶ್ಶೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು. ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ,


ದೇವರ ಕೋಪವು ಅವರಿಗೆ ವಿರುದ್ಧವಾಗಿ ಎದ್ದು, ಅವರಲ್ಲಿ ಕೊಬ್ಬಿದವರನ್ನು ವಧಿಸಿ, ಇಸ್ರಾಯೇಲರ ಪ್ರಾಯಸ್ಥರನ್ನು ನೆಲಕ್ಕುರುಳಿಸಿತು.


ಅವರು ಭಯದಿಂದ ತಮ್ಮ ಭರವಸೆಯನ್ನು ಕಳೆದುಕೊಳ್ಳುವರು. ಅವರ ಪ್ರಧಾನರು ಹೆದರಿ ಧ್ವಜಸ್ಥಾನದಿಂದ ದಿಕ್ಕಾಪಾಲಾಗುವರು” ಚೀಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವನ ನುಡಿ ಇದೇ.


ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರವೆಂಬ ವನಕ್ಕೆ ಬೆಂಕಿ ಹಚ್ಚುವೆನು, ಅದು ಸುತ್ತುಮುತ್ತಣದ ಪ್ರದೇಶವನ್ನೆಲ್ಲಾ ನುಂಗಿಬಿಡುವುದು.


“ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನು ಸಂಹರಿಸುವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”


ಯೆಹೋವನು ಇಂತೆನ್ನುತ್ತಾನೆ, “ನಿನ್ನ ಶತ್ರುಗಳು ಎಷ್ಟು ಪ್ರಬಲವಾಗಿದ್ದರೂ, ಅವರ ಸಂಖ್ಯೆ ಎಷ್ಟು ಹೆಚ್ಚಿದ್ದರೂ ಅವರು ಕಡಿಯಲ್ಪಡುವರು. ಆ ದುರಾಲೋಚಕನು ಇಲ್ಲವಾಗುವನು. ನಿನ್ನನ್ನು ಬಾಧಿಸಿದ್ದೇನೆ, ಆದರೆ ಇನ್ನು ಬಾಧಿಸೆನು.


ಯೆಹೋವನು ಉತ್ತರಕ್ಕೆ ಕೈಚಾಚಿ ಅಶ್ಶೂರವನ್ನು ಧ್ವಂಸ ಮಾಡುವನು; ನಿನವೆಯನ್ನು ಹಾಳುಮಾಡಿ ನೀರಿಲ್ಲದ ಮರುಭೂಮಿಯಂತೆ ಒಣಗಿಸಿಬಿಡುವನು.


ಅವರಿಗೆ ಭಾರವಾದ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ ಮಿದ್ಯಾನಿನ ನಾಶನದ ದಿನದಲ್ಲಿ ಮುರಿದುಬಿಟ್ಟಂತೆ ಮುರಿದು ಬಿಟ್ಟಿದ್ದೀ.


ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವುದು.


“‘ನಾವು ಶೂರರು, ಯುದ್ಧಪ್ರವೀಣರಾದ ಪರಾಕ್ರಮಶಾಲಿಗಳು’ ಎಂದು ನೀವು ಅಂದುಕೊಳ್ಳುವುದು ಹೇಗೆ?


ಹೀಗಿರಲು ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು