Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇಸ್ರಾಯೇಲರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವುದು. ಅವರ ಪರಿಶುದ್ಧನು ಜ್ವಾಲೆಯಂತಿರುವನು. ಅದು ಒಂದೇ ದಿನದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇಸ್ರಯೇಲಿನ ಪರಂಜ್ಯೋತಿಯಾದ ದೇವರು ಅಗ್ನಿಯಂತಾಗುವರು; ಇಸ್ರಯೇಲಿನ ಪರಮಪಾವನ ಸ್ವಾಮಿ ಜ್ವಾಲೆಯಂತಾಗುವರು; ಅದು ಒಂದೇ ಒಂದು ದಿನದಲ್ಲಿ ಅಸ್ಸೀರಿಯರ ಮುಳ್ಳುಪೊದರುಗಳನ್ನೂ ಬಿಡದೆ ಎಲ್ಲವನ್ನೂ ದಹಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇಸ್ರಾಯೇಲ್ಯರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವದು, ಅವರ ಸದಮಲಸ್ವಾವಿುಯು ಜ್ವಾಲೆಯಂತಿರುವನು; ಅದು ಒಂದೇ ದಿವಸದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇಸ್ರೇಲಿನ ಬೆಳಕು ಬೆಂಕಿಯಂತಿದೆ. ಪರಿಶುದ್ಧನಾಗಿರುವಾತನು ಬೆಂಕಿಯ ಜ್ವಾಲೆಯಂತಿದ್ದಾನೆ. ಮೊದಲು ಹಣಜಿ ಕಸಕಡ್ಡಿಗಳನ್ನು ಸುಡುವ ಬೆಂಕಿಯಂತೆ ಆತನಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಇಸ್ರಾಯೇಲಿನ ಬೆಳಕು ಬೆಂಕಿಯಾಗುವುದು, ಅದರ ಪರಿಶುದ್ಧರು ಜ್ವಾಲೆಯಂತಿರುವರು, ಅದು ಒಂದೇ ದಿನದಲ್ಲಿ ಅವನ ಮುಳ್ಳು, ದತ್ತೂರಿಗಳನ್ನು ದಹಿಸಿ ನುಂಗಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:17
39 ತಿಳಿವುಗಳ ಹೋಲಿಕೆ  

ರೌದ್ರವು ನನ್ನಲ್ಲಿಲ್ಲ; ದತ್ತೂರಿ ಮತ್ತು ಮುಳ್ಳು ನನಗೆ ಎದುರುಬಿದ್ದರೆ, ಅವುಗಳಿಗೆ ವಿರುದ್ಧವಾಗಿ ಯುದ್ಧಮಾಡಿ, ಒಟ್ಟಿಗೆ ಸುಟ್ಟುಬಿಡುವೆನು.


ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ, ಮಧ್ಯಪಾನದಲ್ಲೇ ಮತ್ತರಾಗಿ ಮುಳುಗಿಹೋಗಿದ್ದರೂ, ಒಣಗಿದ ಹುಲ್ಲಂತೆ ಬೆಂಕಿಗೆ ತುತ್ತಾಗುವರು.


ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ, “ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವುದು; ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಕಾಡುಮರಗಳ ಮೇಲೆಯೂ, ಭೂಮಿಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಅದು ಆರದೆ ದಹಿಸುವುದು.”


ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ, ಯೆಹೋವನಿಗಾಗಿ ಸುನ್ನತಿ ಮಾಡಿಕೊಳ್ಳಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವುದು” ಎಂದು ಹೇಳುತ್ತಾನೆ.


ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ಡೀ? ಯಾರ ವಿರುದ್ಧವಾಗಿ ಬಾಯ್ದೆರೆದು ಧ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!’


ನಂತರ ಯೆಹೋವನ ಬಳಿಯಿಂದ ಬೆಂಕಿಹೊರಟು, ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ದಹಿಸಬಿಟ್ಟಿತು.


ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.


ಏಕೆಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.


ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.


“ಅವರು ಹೊರಗೆ ಹೋಗಿ ನನಗೆ ದ್ರೋಹ ಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ; ಅವುಗಳು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.”


ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುಂದುವುದಿಲ್ಲ; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.


ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.


“ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ, ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗುವರು” ಎಂದುಕೊಳ್ಳುತ್ತಾರೆ.


ಅವರು ಭಯದಿಂದ ತಮ್ಮ ಭರವಸೆಯನ್ನು ಕಳೆದುಕೊಳ್ಳುವರು. ಅವರ ಪ್ರಧಾನರು ಹೆದರಿ ಧ್ವಜಸ್ಥಾನದಿಂದ ದಿಕ್ಕಾಪಾಲಾಗುವರು” ಚೀಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವನ ನುಡಿ ಇದೇ.


ದುಷ್ಟತನವು ಬೆಂಕಿಯಂತೆ ಉರಿದು, ಮುಳ್ಳು ಗಿಡಗಳನ್ನು ನುಂಗಿಬಿಟ್ಟು, ಅರಣ್ಯದ ಪೊದೆಗಳನ್ನು ಸುಟ್ಟು ಬಿಡುತ್ತದೆ, ಅವು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.


ಬೆಂಕಿಯು ಆತನ ಮುಂದೆ ಹೋಗಿ, ಸುತ್ತಲೂ ಆವರಿಸಿ ಆತನ ವೈರಿಗಳನ್ನು ದಹಿಸಿಬಿಡುತ್ತದೆ.


ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?


ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸುಮ್ಮನಿರುವುದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.


ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?


ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿ ಮಾಡುವಿ. ಯೆಹೋವನು ಮಹಾಕೋಪದಿಂದ ಅವರನ್ನು ನಾಶ ಮಾಡುವನು; ಆತನ ಕೋಪಾಗ್ನಿ ಅವರನ್ನು ದಹಿಸಿಬಿಡುವುದು.


ಆತನ ಮೂಗಿನಿಂದ ಹೊಗೆಯು ಎದ್ದು; ಆತನ ಬಾಯಿಂದ ಅಗ್ನಿಜ್ವಾಲೆ ಹೊರಟು, ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು.


ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವುದು.


ಯೆಹೋವನು ಬೇರೆ ದೇಶಗಳನ್ನು ಹೊಡೆದಂತೆ ತನ್ನ ಪ್ರಜೆಯಾದ ಯಾಕೋಬ ಮತ್ತು ಇಸ್ರಾಯೇಲರನ್ನು ಹೊಡೆದನೋ? ಇತರ ದೇಶದವರು ಸಂಹರಿಸಲ್ಪಟ್ಟಂತೆ ಯಾಕೋಬ ಮತ್ತು ಇಸ್ರಾಯೇಲರು ಸಂಹರಿಸಲ್ಪಟ್ಟರೋ?


ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ. ಹೌದು, ರಾಜನಿಗೆ ಅದು ಸಿದ್ಧವಾಗಿದೆ. ಅದನ್ನು ಆಳವಾಗಿಯೂ, ಅಗಲವಾಗಿಯೂ ಮಾಡಿದ್ದಾನೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಮರದಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.


ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.


ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು. ಕತ್ತರಿಸಿದ ಮುಳ್ಳುಕೊಂಪೆಗೆ ಬೆಂಕಿಹಚ್ಚಿದಂತಾಗುವುದು.


ಇಗೋ, ಇವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವುದು; ಜ್ಞಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು; ಅದು ಕಾಯಿಸಿಕೊಳ್ಳುವ ಕೆಂಡವಲ್ಲ, ಮುಂದೆ ಕುಳಿತರೆ ಹಾಯಾಗಿರುವ ಬೆಂಕಿಯೂ ಅಲ್ಲ.


“ಆ ದಿನದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಸೌದೆಯ ಮಧ್ಯದಲ್ಲಿನ ಅಗ್ಗಿಷ್ಟಿಕೆಯನ್ನಾಗಿಯೂ, ಸಿವುಡುಗಳ ನಡುವಣ ಪಂಜನ್ನಾಗಿಯೂ ಮಾಡುವೆನು; ಅವರು ಸುತ್ತಣ ಜನಾಂಗಗಳನ್ನೆಲ್ಲಾ ಎಡಬಲಗಳಲ್ಲಿ ನುಂಗಿಬಿಡುವರು; ಯೆರೂಸಲೇಮಿನವರು ತಮ್ಮ ಸ್ಥಳವಾದ ಯೆರೂಸಲೇಮಿನಲ್ಲೇ ಇನ್ನು ವಾಸಿಸುವರು;


ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ ದ್ರೋಹಿಗಳನ್ನು ದಹಿಸಿಬಿಡುವವನಾಗಿದ್ದಾನೆಂದು ತಿಳಿಯಿರಿ.


ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿ, ಬಂಗಾರಗಳೂ ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವುದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲಮಾಡುವನು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು