ಯೆಶಾಯ 10:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅದು ದೇಹಾತ್ಮಗಳನ್ನು ಉಳಿಸದೇ ಅಲ್ಲಿನ ವನದ ಮತ್ತು ತೋಟದ ವೈಭವವನ್ನು ನಿರ್ಮೂಲ ಮಾಡುವುದು. ದೇಶವೋ ರೋಗಿಯಂತೆ ನಾಶವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ದೇಹಾತ್ಮದಂಥ ಅದರ ಉದ್ಯಾನವನವನ್ನೂ ಫಲಭರಿತ ತೋಟವನ್ನೂ ನಿರ್ಮೂಲ ಮಾಡುವುದು. ಮಾರಕರೋಗ ತಗಲಿದ ರೋಗಿಯಂತೆ ದೇಶವೆಲ್ಲವೂ ಕರಗಿಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅದು ದೇಹಾತ್ಮಗಳನ್ನುಳಿಸದೆ ಅಲ್ಲಿನ ವನದ ಮತ್ತು ತೋಟದ ವೈಭವವನ್ನು ನಿರ್ಮೂಲಮಾಡುವದು; ದೇಶವೋ ಉಡುಗುತ್ತಿರುವ ರೋಗಿಯಂತಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಮೇಲೆ ಆ ಬೆಂಕಿಯು ದೊಡ್ಡದೊಡ್ಡ ಮರಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಸುಟ್ಟುಹಾಕುವದು. ಕೊನೆಗೆ ಜನರನ್ನು ಮೊದಲುಗೊಂಡು ಪ್ರತಿಯೊಂದೂ ನಾಶವಾಗುವುದು. ದೇವರು ಅಶ್ಶೂರವನ್ನು ನಾಶಮಾಡುವಾಗ ಹಾಗೆಯೇ ಆಗುವದು. ಅಶ್ಶೂರವು ಗೆದ್ದಲುಹುಳ ತಿಂದ ಮರದ ದಿಮ್ಮಿಯಂತಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ದೇಹಾತ್ಮದಂಥ ಅದರ ಉದ್ಯಾನವನವನ್ನೂ, ಫಲಭರಿತ ತೋಟದ ವೈಭವವನ್ನು ನಿರ್ಮೂಲ ಮಾಡುವುದು. ದೇಶವೋ ರೋಗಿಯಂತೆ ನಾಶವಾಗುವುದು. ಅಧ್ಯಾಯವನ್ನು ನೋಡಿ |