Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದರ ವನವೃಕ್ಷಗಳ ಸಂಖ್ಯೆಯು ಒಂದು ಚಿಕ್ಕಮಗುವೂ ಸಹ ಎಣಿಸಿ ಬರೆಯುವಷ್ಟು ಕಡಿಮೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅದರ ಅಳಿದುಳಿದ ಮರಗಳು ಒಂದು ಕೂಸು ಕೂಡ ಎಣಿಸಿ ಬರೆಯುವಷ್ಟು ಕಡಿಮೆಯಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅದರ ವನವೃಕ್ಷಗಳ ಸಂಖ್ಯೆಯು ಮಗು ಬರೆದು ಎಣಿಸುವಷ್ಟು ಕಡಿಮೆಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಗ ಅಡವಿಯಲ್ಲಿ, ಒಂದು ಮಗು ಎಣಿಸಲು ಸಾಧ್ಯವಾಗುವಷ್ಟು ಮರಗಳಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವನ ಉಳಿದ ವನವೃಕ್ಷಗಳು ಮಗುವು ಬರೆಯುವಷ್ಟು ಕಡಿಮೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:19
5 ತಿಳಿವುಗಳ ಹೋಲಿಕೆ  

ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.


ಕೇವಲ ಕೆಲವೇ ಬಿಲ್ಲುಗಾರರೂ ಹಾಗೂ ಕೇದಾರಿನ ಶೂರರೂ ಉಳಿಯುವರು” ಎಂಬುದಾಗಿ ಇಸ್ರಾಯೇಲರ ದೇವರಾದ ಯೆಹೋವನು ನುಡಿದಿದ್ದಾನೆ.


ಆದರೆ ಕಲ್ಮಳೆ ಸುರಿಯಲು ವನವು ಹಾಳಾಗುವುದು, ಪಟ್ಟಣವು ನೆಲಸಮವಾಗುವುದು.


ಖಡ್ಗಕ್ಕೆ ತಪ್ಪಿಸಿಕೊಂಡವರು ಸ್ವಲ್ಪ ಜನ ಮಾತ್ರವೇ ಆಗಿ ಐಗುಪ್ತದಿಂದ ಯೆಹೂದಕ್ಕೆ ಹಿಂದಿರುಗುವರು; ಆಗ ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದದ ಉಳಿದ ಜನರೆಲ್ಲರೂ ನನ್ನ ಮಾತು ನಡೆಯುವುದೋ ಅಥವಾ ತಮ್ಮ ಮಾತು ನಡೆಯುವುದೋ ಎಂದು ತಿಳಿದುಕೊಳ್ಳುವರು.


ಮನುಷ್ಯರನ್ನು ಚೊಕ್ಕ ಬಂಗಾರಕ್ಕಿಂತಲೂ ಮತ್ತು ಓಫೀರಿನ ಬಂಗಾರಕ್ಕಿಂತಲೂ ವಿರಳವಾಗುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು