“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಯೆಹೋವನು ತನ್ನ ಜನರ ಹಿರಿಯರನ್ನು, ಅಧಿಕಾರಿಗಳನ್ನೂ ನ್ಯಾಯವಿಚಾರಣೆಗೆ ತರುವನು. ಏಕೆಂದರೆ, “ನೀವು ದ್ರಾಕ್ಷಿಯ ತೋಟವನ್ನು ನುಂಗಿಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.
ಬಡವರ ತಲೆಗಳನ್ನು ನೆಲದ ಧೂಳಿನಂತೆ ತುಳಿದು ಬಿಡುತ್ತಾರೆ, ದೀನರ ದಾರಿಗೆ ಅಡ್ಡ ಹಾಕುತ್ತಾರೆ. ಮಗನೂ ಮತ್ತು ತಂದೆಯೂ ಒಬ್ಬಳಲ್ಲಿ ಹೋಗಿ ನನ್ನ ಪವಿತ್ರ ನಾಮವನ್ನು ಅಪಕೀರ್ತಿಗೆ ಗುರಿಮಾಡುತ್ತಾರೆ.
ಏಕೆಂದರೆ ನೀಚನು ನೀಚವಾಗಿ ಮಾತನಾಡುವನು. ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ, ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು.
ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮೂರು ದ್ರೋಹಗಳನ್ನು, ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಇಸ್ರಾಯೇಲರು ನ್ಯಾಯವಂತನನ್ನು ಬೆಳ್ಳಿಗೆ, ಒಂದು ಜೊತೆ ಕೆರದ ಸಾಲಕ್ಕಾಗಿ ದಿಕ್ಕಿಲ್ಲದವನನ್ನು ಮಾರಿದರು.