ಯೆಶಾಯ 10:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆ ದಿನದಲ್ಲಿ ಇಸ್ರಾಯೇಲರೊಳಗೆ ಉಳಿದವರು, ಯಾಕೋಬಿನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲರ ಸದಮಲಸ್ವಾಮಿಯನ್ನು ನಂಬಿಗಸ್ತರಾಗಿ ಆಧಾರಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆ ದಿನದಂದು ಅಳಿದುಳಿದ ಇಸ್ರಯೇಲರು, ತಪ್ಪಿಸಿಕೊಂಡ ಯಕೋಬ ಮನೆತನದವರು ತಮ್ಮನ್ನು ಬಾಧಿಸಿದವರನ್ನು ನೆಮ್ಮುವುದಿಲ್ಲ. ಬದಲಿಗೆ ಇಸ್ರಯೇಲರ ಪರಮಪಾವನ ಸ್ವಾಮಿಯಾದ ಸರ್ವೇಶ್ವರನನ್ನೇ ನಿಶ್ಚಯವಾಗಿ ಆಶ್ರಯಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆ ದಿನದಲ್ಲಿ ಇಸ್ರಾಯೇಲ್ಯರೊಳಗೆ ಉಳಿದವರು, ಯಾಕೋಬನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ಯಥಾರ್ಥವಾಗಿ ಆಧಾರಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆಗ ಯಾಕೋಬನ ಮನೆತನದವರು, ಇಸ್ರೇಲರಲ್ಲಿ ಅಳಿದುಳಿದವರು, ತಮ್ಮನ್ನು ಹೊಡೆಯುವವರನ್ನು ಆಧಾರಮಾಡಿಕೊಳ್ಳದೆ ಇಸ್ರೇಲಿನ ಅತೀ ಪರಿಶುದ್ಧನಾದ ಯೆಹೋವನನ್ನೇ ಆಧಾರಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆ ದಿನದಲ್ಲಿ ಇಸ್ರಾಯೇಲರಲ್ಲಿ ಉಳಿದವರೂ, ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು, ಇಸ್ರಾಯೇಲಿನ ಪರಿಶುದ್ಧರಾದ ಯೆಹೋವ ದೇವರ ಸತ್ಯವಾಗಿ ಆಧಾರಮಾಡಿಕೊಳ್ಳುವರು. ಅಧ್ಯಾಯವನ್ನು ನೋಡಿ |
ಆಸನು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ, ರಕ್ಷಿಸಲು ನಿನ್ನ ಹೊರತು ಬೇರಾರೂ ರಕ್ಷಿಸುವುದಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನೆದುರು ಗೆಲ್ಲಬಾರದು” ಎಂದು ಮೊರೆಯಿಡಲು.