Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದುದರಿಂದ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, “ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತರು ಮಾಡಿದಂತೆ, ನಿಮ್ಮನ್ನು ಕೋಲಿನಿಂದ ಹೊಡೆದು, ನಿಮ್ಮ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಹೀಗಿರಲು ಪ್ರಭುವಾದ ಸೇನಾಧೀಶ್ವರ ಸರ್ವೇಶ್ವರಸ್ವಾಮಿ ಹೇಳುವುದೇನೆಂದರೆ: “ಸಿಯೋನಿನಲ್ಲಿ ವಾಸಿಸುವ ನನ್ನ ಜನರೇ, ಈಜಿಪ್ಟಿನವರು ನಿಮಗೆ ಮಾಡಿದಂತೆ ಅಸ್ಸೀರಿಯದವರು ನಿಮ್ಮನ್ನು ಬಡಿಗೆಯಿಂದ ಹೊಡೆದು, ನಿಮಗೆ ವಿರುದ್ಧ ದೊಣ್ಣೆಯನ್ನು ಎತ್ತುವಾಗ ಅವರಿಗೆ ಹೆದರಬೇಡಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇಂತಿರಲು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ - ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತ್ಯರು ನಿಮಗೆ ಮಾಡಿದಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನೆತ್ತುವ ಅಶ್ಶೂರ್ಯರಿಗೆ ಭಯಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನನ್ನ ಒಡೆಯನೂ ಸರ್ವಶಕ್ತನೂ ಆದ ಯೆಹೋವನು ಹೇಳುವುದೇನೆಂದರೆ: “ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಅಶ್ಶೂರಕ್ಕೆ ನೀವು ಭಯಪಡಬೇಡಿ. ಹಿಂದಿನ ಕಾಲದಲ್ಲಿ ಈಜಿಪ್ಟ್ ನಿಮ್ಮನ್ನು ಬಾಧಿಸಿದಂತೆ ಇವನೂ ನಿಮ್ಮನ್ನು ಬಾಧಿಸುವನು. ಅವನ ಬಾಧೆಯು ನಿಮ್ಮ ಬೆನ್ನಿನ ಮೇಲೆ ಬೆತ್ತದಿಂದ ಹೊಡೆದಂತೆ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಈಜಿಪ್ಟಿನವರಂತೆ ನಿಮ್ಮನ್ನು ಕೋಲಿನಿಂದ ಹೊಡೆದು, ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಸ್ಸೀರಿಯದವರಿಗೆ ಭಯಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:24
28 ತಿಳಿವುಗಳ ಹೋಲಿಕೆ  

ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.


“ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ಕೇಳಿದ್ದೀ, ಅವುಗಳಿಗೆ ನೀನು ಹೆದರಬೇಡ.


ನನ್ನ ನೀತಿಯನ್ನು ಹತ್ತಿರಕ್ಕೆ ಬರ ಮಾಡುವೆನು. ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು, ಚೀಯೋನಿನಲ್ಲಿ ರಕ್ಷಣಾ ಕಾರ್ಯವನ್ನು ನಡೆಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.”


ಯೆಹೋವನು ಅವನನ್ನು ಕುರಿತು ಹೇಳುವುದೇನೆಂದರೆ, ‘ಕನ್ನಿಕೆಯಾಗಿರುವ ಚೀಯೋನ್ ಕುವರಿಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ, ಯೆರೂಸಲೇಮ್ ಕುವರಿಯು ನಿನ್ನ ಹಿಂದೆ ತಲೆಯಾಡಿಸುತ್ತಾಳೆ.


ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ! ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ, ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ.


ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವುದೇ ಇಲ್ಲ; ನೀವು ಕೂಗಿ ದುಃಖಿಸಿದ ಶಬ್ದವನ್ನು ಆತನು ಕೇಳಿ, ನಿಮಗೆ ಕೃಪೆ ತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.


ಯೆಹೋವನು ಬೇರೆ ದೇಶಗಳನ್ನು ಹೊಡೆದಂತೆ ತನ್ನ ಪ್ರಜೆಯಾದ ಯಾಕೋಬ ಮತ್ತು ಇಸ್ರಾಯೇಲರನ್ನು ಹೊಡೆದನೋ? ಇತರ ದೇಶದವರು ಸಂಹರಿಸಲ್ಪಟ್ಟಂತೆ ಯಾಕೋಬ ಮತ್ತು ಇಸ್ರಾಯೇಲರು ಸಂಹರಿಸಲ್ಪಟ್ಟರೋ?


ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ; ಏಕೆಂದರೆ ನಾಗರ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಸಂತತಿಯು ಹಾರುವ ಸರ್ಪವೇ.


ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.


ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.


ಅವರಿಗೆ ಭಾರವಾದ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ ಮಿದ್ಯಾನಿನ ನಾಶನದ ದಿನದಲ್ಲಿ ಮುರಿದುಬಿಟ್ಟಂತೆ ಮುರಿದು ಬಿಟ್ಟಿದ್ದೀ.


ಆಗ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಮತ್ತು ಯೆರೂಸಲೇಮಿನಲ್ಲಿ ವಾಸಿಸುವರೆಂದು ದಾಖಲೆಗೊಂಡ ಪ್ರತಿಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡುವನು.


ಐಗುಪ್ತ್ಯರು ಅಂದರೆ ಫರೋಹನ ಕುದುರೆಗಳೂ, ರಥಗಳೂ, ಅವನ ರಾಹುತರೂ, ಸೈನ್ಯದವರೆಲ್ಲರೂ ಅವರ ಹಿಂದೆ ಹೊರಟು ಇಸ್ರಾಯೇಲರು ಪೀಹಹೀರೋತಿನ ಹತ್ತಿರ ಬಾಳ್ಚೆಫೋನಿನ ಎದುರಾಗಿ ಸಮುದ್ರ ತೀರದಲ್ಲಿ ಇಳಿದುಕೊಳ್ಳುತ್ತಿರುವಾಗಲೇ ಅವರ ಸಮೀಪಕ್ಕೆ ಬಂದರು.


ಫರೋಹನ ಅಧಿಕಾರಿಗಳು ತಾವೇ ನೇಮಿಸಿದ ಇಸ್ರಾಯೇಲರ ಮೇಲ್ವಿಚಾರಕರಿಗೆ, “ನೀವು ಮೊದಲು ಇಟ್ಟಿಗೆಗಳ ಲೆಕ್ಕ ಒಪ್ಪಿಸುತ್ತಿದ್ದಂತೆ ನಿನ್ನೆ ಹಾಗೂ ಈ ಹೊತ್ತು ಯಾಕೆ ಒಪ್ಪಿಸಲಿಲ್ಲ” ಎಂದು ಹೇಳಿ ಅವರನ್ನು ಹೊಡೆದರು.


‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರ, ಪೆಕಹ ರೆಮಲ್ಯನ ಮಗನಾದ ಪೆಕಹನ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.’”


ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”


ಮತ್ತು ಯೆಹೋವನು ಸಂಕಲ್ಪಿಸಿದ ದಂಡದ ಪ್ರತಿಯೊಂದು ಪೆಟ್ಟು, ದಮ್ಮಡಿ, ಕಿನ್ನರಿಗಳ ನಾದದೊಡನೆ ಅವರ ಮೇಲೆ ಬೀಳುವುದು. ಆತನು ಅವರೊಂದಿಗೆ ಹೋರಾಡುತ್ತಾ ಯುದ್ಧಮಾಡುವನು.


ಆಕಾಶಮಂಡಲವನ್ನು ಹರಡಿ, ಭೂಲೋಕವನ್ನು ಸ್ಥಾಪಿಸಿದ ನಿನ್ನ ಸೃಷ್ಟಿಕರ್ತನಾದ ಯೆಹೋವನನ್ನು ಮರೆತುಬಿಟ್ಟೆಯಾ? ನಾಶಮಾಡಬೇಕೆಂದು ಬಾಣವನ್ನು ಹೂಡುವ ಹಿಂಸಕನ ಕ್ರೋಧಕ್ಕೆ ದಿನವೆಲ್ಲಾ ಎಡೆಬಿಡದೆ ಅಂಜುತ್ತೀಯಾ? ಆ ಹಿಂಸಕನ ಕ್ರೋಧವು ಎಲ್ಲಿ ಇದೆ?


ಆತನೇ ನಮಗೆ ಸಮಾಧಾನಪ್ರದನು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಅರಮನೆಗಳನ್ನು ತುಳಿದುಹಾಕುವಾಗ, ನಾವು ಅವರಿಗೆ ವಿರುದ್ಧವಾಗಿ ಏಳು ಪಾಲಕರನ್ನು ಹೌದು ಎಂಟು ಪುರುಷಶ್ರೇಷ್ಠರನ್ನು ನೇಮಿಸುವೆವು.


ಯೆಶಾಯನು ಅವರಿಗೆ, “ನೀವು ಹಿಂತಿರುಗಿ ಹೋಗಿ ನಿಮ್ಮ ರಾಜನಿಗೆ, ‘ಯೆಹೋವನು ಹೀಗೆ ಹೇಳುತ್ತಾನೆ, ನೀನು ಕೇಳಿದ ಮಾತುಗಳ ದೆಸೆಯಿಂದ ಹೆದರಬೇಡ, ಅಶ್ಶೂರದ ಅರಸನ ಸೇವಕರು ಆ ಮಾತುಗಳಿಂದ ನನ್ನನ್ನೇ ದೂಷಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು